statewide Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ನಾಳೆ ರಾಜ್ಯಾದ್ಯಂತ ಸಾರಿಗೆ ಬಸ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ
ಬೆಂಗಳೂರು,ಫೆಬ್ರವರಿ,18,2026 (www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳೆ ಸಾರಿಗೆ ನೌಕರರು ಬೆಂಗಳೂರು ಚಲೋಗೆ ಕರೆ ನೀಡಿದ್ದು ಈ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಸಾರಿಗೆ ಬಸ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ವೇತನ ಹೆಚ್ಚಳದ ಹಿಂಬಾಕಿ ಹಾಗೂ ವೇತನ ಪರಿಷ್ಕರಣೆಗೆ ಆಗ್ರಹಿಸಿ ನಾಳೆ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾಸಮಿತಿಯಿಂದ ಸಾರಿಗೆ ನೌಕರರು ಬೆಂಗಳೂರು ಚಲೋಗೆ ಕರೆ ನೀಡಿದ್ದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ನಾಳೆ ಕೆಎಸ್ ಆರ್ ಟಿಸಿ, ಬಿಎಂಟಸಿ ಬಸ್ ಗಳು ರಸ್ತೆಗಿಳಿಯೋದು ಡೌಟ್ ಆಗಿದ್ದು, ಹೀಗಾಗಿ  ನಾಳೆ ರಾಜ್ಯಾದ್ಯಂತ ಸಾರಿಗೆ ಬಸ್ ಗಳ ಬಂದ್ ಬಿಸಿ ತಟ್ಟಲಿದೆ. ಇನ್ನು ಬಸ್ ಸಂಚಾರದಲ್ಲಿ ವ್ಯತ್ಯಯ ಆಗದಂತೆ ಕ್ರಮ ಕೈಗೊಳ್ಳುವಂತೆ  ಸಾರಿಗೆ ಅಧಿಕಾರಿಗಳಿಗೆ ಕೆಎಸ್ ಆರ್ ಟಿಸಿ  ಎಂಡಿ ಖಡಕ್ ಸೂಚನೆ ನೀಡಿದ್ದಾರೆ.

Key words: disruption, statewide, transport, bus services, tomorrow.

The post ನಾಳೆ ರಾಜ್ಯಾದ್ಯಂತ ಸಾರಿಗೆ ಬಸ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯಾದ್ಯಂತ “ಪೆಹಲಾ ಓಟ್”‌ ಅಭಿಯಾನಕ್ಕೆ ಸಚಿವ ಕೃಷ್ಣ ಭೈರೇಗೌಡ ಚಾಲನೆ.
ಬೆಂಗಳೂರು, ಆಗಸ್ಟ್,10,2023(www.justkannada.in):  ಬರುವ 2024 ರ ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವ ಸಮೂಹವನ್ನು ಸೆಳೆಯಲು ರಾಜ್ಯಾದ್ಯಂತ “ಪೆಹಲಾ ಓಟ್‌” [ಮೊದಲ ಮತ] ಅಭಿಯಾನಕ್ಕೆ ಹಿರಿಯ ಕಾಂಗ್ರೆಸ್‌ ಮುಖಂಡ ಹಾಗೂ ಕಂದಾಯ ಸಚಿವ ಕೃಷ್ಣ ಭೈರೇಗೌಡ ಚಾಲನೆ ನೀಡಿದರು.

ಸಹಕಾರ ನಗರದ ತಮ್ಮ ಕಚೇರಿಯಲ್ಲಿ ರಾಜ್ಯದಲ್ಲಿ ಮೊದಲ ಮತದಾನ ಅಭಿಯಾನದ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹಾಗೂ ಎಐಸಿಸಿ ಸದಸ್ಯ ಎಂ.ಎಸ್.‌ ರಕ್ಷಾ ರಾಮಯ್ಯ ಅವರ ಸಮ್ಮುಖದಲ್ಲಿ ಸಚಿವ ಕೃಷ್ಣಭೈರೇಗೌಡ ಪ್ರಚಾರ ವಾಹನಗಳಿಗೆ ಹಸಿರು ನಿಶಾನೆ ತೋರಿದರು. 18 ರಿಂದ 23 ವಯಸ್ಸಿನ ಮೊದಲ ಬಾರಿಗೆ ಲೋಕಸಭೆಯಲ್ಲಿ ಮತದಾನ ಮಾಡುತ್ತಿರುವವರನ್ನು ಸೆಳೆಯಲು ಈ ಅಭಿಯಾನ ಆಯೋಜಿಸಲಾಗಿದೆ.

ನಂತರ ಮಾತನಾಡಿದ ಎಂ.ಎಸ್.ರಕ್ಷಾ ರಾಮಯ್ಯ, ಯುವ ಸಮೂಹ ದೇಶದ ಯುವ ಶಕ್ತಿಯಾಗಿದ್ದು, ಮೊದಲ ಮತ ಅಭಿಯಾನ ಯುವ ಜನಾಂಗದ ಆಂದೋಲನವಾಗಲಿದೆ. ಅಭಿಯಾನದಲ್ಲಿ ಸಂವಾದ, ತಂತ್ರಜ್ಞಾನ ಆಧಾರಿತ ಪ್ರಚಾರ, ಕ್ಯೂ.ಆರ್.‌ ಕೋಡ್‌ ಮೂಲಕ ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಸರಕು ಸಾಗಾಣೆ ವಾಹನಗಳಲ್ಲಿ ಎಲ್.ಇ.ಡಿ ವ್ಯವಸ್ಥೆ, ಶಾಲಾ ಕಾಲೇಜುಗಳು, ಟ್ಯೂಷನ್‌ ತಾಣಗಳು, ಬಸ್‌ ನಿಲ್ದಾಣಗಳು, ಮಾಲ್‌ ಗಳಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವ ಉದ್ದೇಶ ಹೊಂದಲಾಗಿದೆ ಎಂದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಯೋಜಿಸಿದ್ದ ಯುವ ಮತ ಅಭಿಯಾನಕ್ಕೆ ಅಭೂಪೂರ್ವ ಸ್ಪಂದನೆ ದೊರೆತಿದ್ದು, ಕಾಂಗ್ರೆಸ್‌ ಪಕ್ಷ ಶೇ 42 ರಷ್ಟು ಯುವ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿತ್ತು.  ಬಿಜೆಪಿಯನ್ನು ಹಿಂದಿಕ್ಕಿ ಕಾಂಗ್ರೆಸ್ ಮುನ್ನಡೆ ಸಾಧಿಸಿತ್ತು. ಈ ಸಫಲತೆಯ ನಂತರ ಇದೀಗ ಪೆಹಲಾ ಓಟ್‌ ಅಭಿಯಾನ ಆರಂಭಿಸಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಮತಚಲಾಯಿಸುತ್ತಿರುವವರನ್ನು ಸೆಳೆಯುವ ಸವಾಲು ನಮ್ಮ ಮುಂದಿದ್ದು, ನಮಗೆ ಉತ್ತಮ ಬೆಂಬಲ ದೊರೆಯುವ ನಿರೀಕ್ಷೆಯಿದೆ. ಪ್ರಚಾರ ವಾಹನಗಳು ರಾಜ್ಯಾದ್ಯಂತ ಸಂಚರಿಸಲಿವೆ. ಮತದಾನದ ಮಹತ್ವದ ಬಗ್ಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಸಹ ಅರಿವು ಮೂಡಿಸಲಿದ್ದಾರೆ ಎಂದು ಹೇಳಿದರು.

Key words: Minister- Krishna Bhairegowda –drive- Pehala Oat- campaign -statewide

The post ರಾಜ್ಯಾದ್ಯಂತ “ಪೆಹಲಾ ಓಟ್”‌ ಅಭಿಯಾನಕ್ಕೆ ಸಚಿವ ಕೃಷ್ಣ ಭೈರೇಗೌಡ ಚಾಲನೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಡಿ.18 ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್.
ಮೈಸೂರು,ನವೆಂಬರ್,8,2021(www.justkannada.in): ಡಿಸೆಂಬರ್ 18 ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದ್ದು ಹೆಚ್ಚಿನ ಪ್ರಕರಣಗಳನ್ನ ಇತ್ಯರ್ಥಪಡಿಸುವ ಗುರಿ ಇದೆ ಎಂದು ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರಾದ ಎಂ.ಎಲ್ ರಘುನಾಥ್ ತಿಳಿಸಿದರು.

ಲೋಕ್ ಅದಾಲತ್ ಕುರಿತು ಮೈಸೂರು ನ್ಯಾಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಎಂ.ಎಲ್ ರಘುನಾಥ್ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ರಾಜ್ಯಾದ್ಯಂತ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ಮೈಸೂರು ನಗರ ಮತ್ತು ತಾಲೂಕುಗಳಲ್ಲಿ 1,03,472 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. ಅವುಗಳಲ್ಲಿ 49,246 ಸಿವಿಲ್ ಪ್ರಕರಣಗಳು ಹಾಗೂ 54,226 ಕ್ರಿಮಿನಲ್ ಪ್ರಕರಣಗಳಿವೆ.

ಆ ಪೈಕಿ ರಾಜಿ ಸಂದಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ಪ್ರಕರಣಗಳನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ. ಕಳೆದ ಬಾರಿಯಂತೆ ಈ ಬಾರಿಯೂ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಿದ್ದೇವೆ ಎಂದರು.

Key words: Statewide -National Lok Adalat –novomber -18th.

The post ಡಿ.18 ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಾರ್ಚ್ 27ರಂದು ರಾಜ್ಯಾದ್ಯಂತ ‘ಮೆಗಾ ಲೋಕ್ ಅದಾಲತ್’’…
ಮೈಸೂರು. ಜನವರಿ 17,2021(www.justkannada.in): ಮೆಗಾ ಲೋಕ್ ಅದಾಲತ್” ಕಾರ್ಯಕ್ರಮವನ್ನು  ಮಾರ್ಚ್ 27ರಂದು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ.

ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು, ತಾಲ್ಲೂಕು ಕಾನೂನು ಸೇವೆಗಳ ಸಮಿತಿಗಳನ್ನು ಮತ್ತು ಖಾಯಂ ಜನತಾ ನ್ಯಾಯಾಲಯವನ್ನು ಆನ್ ಲೈನ್,ವೀಡಿಯೋ ಹಾಗೂ ಕಾನ್ಛರೆನ್ಸ್ ಈ-ಮೇಲ್, ಎಸ್.ಎಮ್.ಎಸ್., ವಾಟ್ಸ್ ಆಪ್, ಎಲೆಕ್ರ್ಟಾನಿಕ್ ಮೋಡ್ ಖುದ್ದಾಗಿ ಹಾಜರಾಗುವ ಮೂಲಕ ಸಂಪರ್ಕಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ಕೃಪೆ -internet

ಹೆಚ್ಚಿನ ಮಾಹಿತಿಗಾಗಿ ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಎ.ಡಿ.ಆರ್. ಸೆಂಟರ್, ಮಳಲವಾಡಿ, ಜಯನಗರ, 5ನೇ ಕ್ರಾಸ್, ಮೈಸೂರು-14 ದೂರವಾಣಿ ಸಂಖ್ಯೆ: 0821 2330130, Mail ID:  mysurudlsa@gmail.com  ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲ್ಲೂಕು ಕಾನೂನು ಸೇವೆಗಳ ಸಮಿತಿಗಳ ಸದಸ್ಯ ಕಾರ್ಯದರ್ಶಿ ಅವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲ್ಲೂಕು ಕಾನೂನು ಸೇವೆಗಳ ಸಮಿತಿಗಳ ಸದಸ್ಯ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: mysore-‘Mega Lok Adalat-‘ statewide – March 27-mysore

The post ಮಾರ್ಚ್ 27ರಂದು ರಾಜ್ಯಾದ್ಯಂತ ‘ಮೆಗಾ ಲೋಕ್ ಅದಾಲತ್’’… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಎಪಿಎಂಸಿ ಕಾಯ್ದೆ ಉಪಯೋಗ ಕುರಿತು ಜ.5ರಿಂದ ರಾಜ್ಯಾದ್ಯಂತ ಪ್ರವಾಸ : ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು,ಡಿಸೆಂಬರ್,16,2020(www.justkannada.in) : ಕೇಂದ್ರ ಸರ್ಕಾರದ ಜನೌಷಧಿ ಸೇರಿದಂತೆ ಎಪಿಎಂಸಿ ಕಾಯ್ದೆಯಿಂದ ಜನತೆಗಾಗುವ ಉಪಯೋಗಗಳನ್ನು ಸಾರ್ವಜನಿಕರಿಗೆ ತಿಳಿಸಿಕೊಡುವ ಕಾರ್ಯಕ್ರಮವನ್ನು ಜನವರಿ 5 ರಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗುವುದು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಹಿಂದುಳಿದ ವರ್ಗಗಳ ಬಿಜೆಪಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಸಚಿವರು, ನಾಲ್ಕು ಕಂದಾಯ ವಿಭಾಗಗಳ 30 ಜಿಲ್ಲೆಗಳಲ್ಲೂ ಸಹ ಪ್ರವಾಸ ಮಾಡಿ ಕೇಂದ್ರದ ಯೋಜನೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ಬಗ್ಗೆಯ ಉಪಯೋಗಗಳ ಅರಿವು ಮೂಡಿಸುತ್ತೇವೆ ಎಂದರು.

ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಯೋಜನೆಯನ್ನು ಗ್ರಾಮೀಣ ಪ್ರದೇಶಗಳ ಜನರಿಗೂ ತಲುಪಿಸುವ ಉದ್ದೇಶವನ್ನು ರಾಜ್ಯ ಸರ್ಕಾರ ಹೊಂದಿದೆ. ಇದನ್ನು ಸಹಕಾರ ಇಲಾಖೆಯ ಅಧೀನದಲ್ಲಿ ಬರುವ ಮಾರ್ಕೆಂಟಿಂಗ್ ಫೆಡರೇಶನ್ ಮೂಲಕ ಕೇಂದ್ರಗಳನ್ನು ತೆರೆದು ಜನರಿಗೆ ತಲುಪುವಂತೆ ನೋಡಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ತಮಗೆ ಬಂದ ಪತ್ರದ ಬಗ್ಗೆ ಉಲ್ಲೇಖಿಸಿದ್ದು, “ವ್ಯಕ್ತಿಯೊಬ್ಬರು ತಮ್ಮ ತಂದೆಗೆ ಬಿಪಿ, ಶುಗರ್ ಗಾಗಿ ತಿಂಗಳಿಗೆ 2ರಿಂದ 3 ಸಾವಿರ ರೂಪಾಯಿ ವ್ಯಯಿಸಬೇಕಾಗಿತ್ತು. ಆದರೆ, ಜನೌಷಧಿ ಬಂದ ಮೇಲೆ ಕೇವಲ 250 ರೂಪಾಯಿಗೆ ಎಲ್ಲವೂ ಸಿಗುತ್ತಿದೆ” ಎಂದು ಪತ್ರದಲ್ಲಿ ಬರೆದಿದ್ದಾದ್ದಾಗಿ ಡಿವಿಎಸ್ ಅವರು ಮಾಹಿತಿ ನೀಡಿದ್ದರು ಎಂದು ಸಚಿವ ಸೋಮಶೇಖರ್ ಉಲ್ಲೇಖಿಸಿದರು.

ಆತ್ಮನಿರ್ಭರ ಅಡಿ ಹೆಚ್ಚುವರಿ 600 ಕೋಟಿಗೆ ಕೇಂದ್ರಕ್ಕೆ ಪ್ರಸ್ತಾವನೆ

ಇನ್ನು ಆತ್ಮನಿರ್ಭರ ಯೋಜನೆಯಡಿ ಕರ್ನಾಟಕಕ್ಕೆ 4750 ಕೋಟಿ ಅನುದಾನ ಸಿಗುತ್ತಿದೆ. ಇದರಲ್ಲಿ ಶೂನ್ಯ ಬಡ್ಡಿದರ ಹಾಗೂ ಶೇ. 3 ರ ಬಡ್ಡಿದರದಲ್ಲಿ 2ರಿಂದ 3 ಲಕ್ಷ  ರೂಪಾಯಿವರೆಗೆ ಮೀನುಗಾರಿಕೆ ಹಾಗೂ ಹೈನುಗಾರಿಕೆಗೆ ಸಾಲವನ್ನು ಕೊಡಲಾಗುತ್ತಿದೆ. ಜೊತೆಗೆ ಅರ್ಥಿಕವಾಗಿ ಬಲ ತುಂಬುವ ಕೆಲಸವನ್ನು ಮಾಡಲಾಗುತ್ತಿದೆ. ರಾಜ್ಯದಲ್ಲಿ ಸಹಕಾರ ಇಲಾಖೆ ಮೂಲಕ ಜನರಿಗೆ ಆರ್ಥಿಕ ಬಲವನ್ನು ತುಂಬುವ ನಿಟ್ಟಿನಲ್ಲಿ ಆತ್ಮನಿರ್ಭರ ಭಾರತದ ಅಡಿ ಈಗಾಗಲೇ 600 ಕೋಟಿ ರೂಪಾಯಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹೀಗೆ ಈ ಯೋಜನೆಯಡಿ ಪ್ರಸ್ತಾವನೆ ಸಲ್ಲಿಸಿದ ಮೊದಲ ರಾಜ್ಯ ಕರ್ನಾಟಕವಾಗಿದೆ ಎಂದು ಸಚಿವರು ತಿಳಿಸಿದರು.

ರೈತರಿಗೆ ನನ್ನ ಬೆಳೆ, ನನ್ನ ಬೆಲೆ ಅಧಿಕಾರ

ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಸಾಕಷ್ಟು ಅನುಕೂಲವಿದೆ. ಇದು ಬಂದಿದ್ದರಿಂದ ರೈತ ತನ್ನ ಉತ್ಪಾದನೆಯನ್ನು ರಾಜ್ಯದ ಯಾವುದೇ ಮೂಲೆಯಲ್ಲಿ ಬೇಕಿದ್ದರೂ ಮಾರಾಟ ಮಾಡಬಹುದು. ನನ್ನ ಬೆಳೆ, ನನ್ನ ಬೆಲೆ ಎಂದು ರೈತನೇ ನಿರ್ಧರಿಸುತ್ತಾನೆ. ಅಷ್ಟು ಸ್ವಾತ್ರಂತ್ರ್ಯವನ್ನು ರೈತರಿಗೆ ಸಿಗುವಂತೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಎಂದು ಸಚಿವರು ತಿಳಿಸಿದರು.

ಕನಿಷ್ಠ ಬೆಂಬಲ ಬೆಲೆ ತೆಗೆಯಲ್ಲ, ಎಪಿಎಂಸಿ ಮುಚ್ಚಲ್ಲ

ಬೆಂಬಲ ಬೆಲೆಯನ್ನು ಕೊಟ್ಟೇ ಕೊಡುತ್ತೇವೆ. ರೈತರ ಸಂಕಷ್ಟ ಕಾಲದಲ್ಲಿ ನಮ್ಮ ಸರ್ಕಾರ ನೆರವಾಗುತ್ತದೆ. ಕನಿಷ್ಠ ಬೆಂಬಲ ಬೆಲೆಯನ್ನು ತೆಗೆಯುವ ಪ್ರಶ್ನೆಯೇ ಇಲ್ಲ. ಈಗಾಗಲೇ ಅನೇಕ ಬಾರಿ ರೈತರ ನೆರವಿಗೆ ಬಂದಿದ್ದೇವೆ. ಇನ್ನು ಎಪಿಎಂಸಿಯನ್ನು ಮುಚ್ಚುವ ಪ್ರಸ್ತಾವೂ ನಮ್ಮ ಸರ್ಕಾರದ ಮುಂದೆ ಇಲ್ಲ. ರೈತರ ಪರವಾಗಿ ಎಪಿಎಂಸಿಗಳು ಕಾರ್ಯನಿರ್ವಹಿಸುತ್ತಿದೆ. ಇದು ವಿರೋಧ ಪಕ್ಷಗಳ ಸುಳ್ಳು ಪ್ರಚಾರ. ಅವರ ರಾಜಕೀಯ ದುರುದ್ದೇಶಕ್ಕೋಸ್ಕರ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಸಚಿವರು ತಿಳಿಸಿದರು.

ಅರಸು ಅವರಿಗೆ ಅರಸು ಅವರೇ ಸಾಟಿ

ಹಿಂದುಳಿದ ವರ್ಗಗಳ ಬಿಜೆಪಿ ರಾಜ್ಯ ಮೋರ್ಚಾ ಅಧ್ಯಕ್ಷರಾಗಿರುವ ನೆ.ಲ.ನರೇಂದ್ರ ಬಾಬು ಅವರು ಉತ್ತಮ ಸಂಘಟನಾತ್ಮಕ ಕಾರ್ಯಗಳನ್ನು ಮಾಡಿತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೂ ಸಹ ಪರಿಶ್ರಮದಿಂದ ಬೆಳೆದು ಬಂದವರು. ಅನೇಕರನ್ನು ಬೆಳೆಸಿದ್ದಲ್ಲದೆ, ಹಿಂದುಳಿದವರ ಶ್ರೇಯೋಭಿವೃದ್ಧಿಗೆ ದುಡಿದವರು. ಇನ್ನು ರಾಜ್ಯದಲ್ಲಿ ದೇವರಾಜು ಅರಸು ಅವರು ಹಿಂದುಳಿದ ವರ್ಗಗಳ ನಾಯಕರಾಗಿ ಅನೇಕ ಜನಪರ ಕಾರ್ಯಗಳನ್ನು ಜಾರಿಗೆ ತಂದರು. ಇಂದು ಅನೇಕ ನಾಯಕರನ್ನು ಅವರಿಗೆ ಹೋಲಿಕೆ ಮಾಡಲು ಹೋಗುತ್ತಾರೆ. ಆದರೆ, ಅರಸು ಅವರಿಗೆ ಅವರೇ ಸಾಟಿ  ಎಂದು ಸಚಿವ ಸೋಮಶೇಖರ್  ತಿಳಿಸಿದರು.

ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಆದಾಯ

ರಾಷ್ಟ್ರಿಯ ಹಿಂದುಳಿದ ವರ್ಗಗಳ ಬಿಜೆಪಿ ಘಟಕದ ಅಧ್ಯಕ್ಷರಾದ ಲಕ್ಷ್ಮಣ್ ಮಾತನಾಡಿ,  ಎಪಿಎಂಸಿ ಕಾಯ್ದೆ ತಿದ್ದುಪಡಿಯ ಉಪಯೋಗಗಳ ಬಗ್ಗೆ ಸಹಕಾರ ಸಚಿವರಾದ ಸೋಮಶೇಖರ್ ಅವರು ವಿಸ್ತಾರವಾಗಿ ಹಾಗೂ ಸರಳವಾಗಿ ತಿಳಿಸಿದ್ದಾರೆ. ಈ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಉತ್ತಮ ಆದಾಯ ಸಿಗುತ್ತಿದೆ. ರೈತ ತನ್ನ ಬೆಳೆಯನ್ನು ಎಲ್ಲಿ ಬೇಕಿದ್ದರೂ ಮಾರಾಟ ಮಾಡಬಹುದು, ಮಾರುಕಟ್ಟೆಗಳಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಲಿದೆ. ಇನ್ನೂ ಅನೇಕ ಉಪಯೋಗಗಳು ಇದರಲ್ಲಿವೆ ಎಂದು ತಿಳಿಸಿದರು.

key words : APMC-Use-Act-About-statewide-statewide-Tour-Minister-S.T. Somashekhar

The post ಎಪಿಎಂಸಿ ಕಾಯ್ದೆ ಉಪಯೋಗ ಕುರಿತು ಜ.5ರಿಂದ ರಾಜ್ಯಾದ್ಯಂತ ಪ್ರವಾಸ :  ಸಚಿವ ಎಸ್.ಟಿ.ಸೋಮಶೇಖರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯಾದ್ಯಂತ 29,451 ಕೋವಿಡ್ ಲಸಿಕೆ ವಿತರಣೆ ಕೇಂದ್ರಗಳ ಗುರುತು-ಸಚಿವ ಡಾ.ಕೆ.ಸುಧಾಕರ್ ಮಾಹಿತಿ..
ಬೆಂಗಳೂರು, ನವೆಂಬರ್ 24,2020(www.justkannada.in): ರಾಜ್ಯದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಎಲ್ಲ ಬಗೆಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, 29,451 ಲಸಿಕೆ ವಿತರಣೆ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಇಂದು ಮಾತನಾಡಿರುವ ಸಚಿವ ಡಾ.ಕೆ.ಸುಧಾಕರ್, “ಕೇಂದ್ರ ಸರ್ಕಾರದ ಸೂಚನೆಯಂತೆ, ಕೋವಿಡ್ ಲಸಿಕೆ ವಿತರಣೆಗೆ ಸಿದ್ಧತೆ ಕೈಗೊಳ್ಳಲಾಗಿದೆ. ರಾಜ್ಯ ಕೋವಿಡ್ ಕಾರ್ಯಪಡೆ ಸಭೆ ಸೇರಿ ಈ ಕುರಿತು ಚರ್ಚೆ ನಡೆಸಿದ್ದು, ಲಸಿಕೆ ಸಂಗ್ರಹ ಹಾಗೂ ವಿತರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯಾದ್ಯಂತ 29,451 ಲಸಿಕೆ ವಿತರಣೆ ಕೇಂದ್ರಗಳನ್ನು ಗುರುತಿಸಿದ್ದು, ಲಸಿಕೆ ವಿತರಣೆ ಮಾಡಲು 10,008 ವ್ಯಾಕ್ಸಿನೇಟರ್ ಸಿಬ್ಬಂದಿಗಳನ್ನು ಗುರುತಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಸರ್ಕಾರಿ ಆರೋಗ್ಯ ಕೇಂದ್ರಗಳ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರ ಬಗೆಗಿನ ಮಾಹಿತಿಯನ್ನು ದಾಖಲಿಸಲಾಗಿದೆ. ಶೇ.80 ರಷ್ಟು ಖಾಸಗಿ ಆಸ್ಪತ್ರೆಗಳು ಮಾಹಿತಿ ಒದಗಿಸಿದ್ದು, ಇನ್ನೂ ಶೇ.20 ರಷ್ಟು ಆಸ್ಪತ್ರೆಗಳು ವಾರದೊಳಗೆ ಮಾಹಿತಿ ನೀಡಲಿವೆ” ಎಂದು ಸಚಿವರು ಹೇಳಿದ್ದಾರೆ.

“ರಾಜ್ಯದಲ್ಲಿ ಲಸಿಕೆ ಸಂಗ್ರಹ ಮತ್ತು ವಿತರಣೆಗೆ 2,855 ಕೋಲ್ಡ್ ಚೇನ್ ಕೇಂದ್ರ ಲಭ್ಯವಿದೆ. ಬೇಗನೆ ಲಸಿಕೆ ವಿತರಣೆ ಮಾಡಲು ಸಾಧ್ಯವಾಗುವಂತೆ. ಹೊಸದಾಗಿ ಬೆಂಗಳೂರು ನಗರ, ಶಿವಮೊಗ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಪ್ರಾದೇಶಿಕ ಲಸಿಕೆ ಸಂಗ್ರಹ ಕೇಂದ್ರಗಳನ್ನು ಆರಂಭಿಸಲು ಪ್ರಸ್ತಾಪಿಸಲಾಗಿದೆ. ಈ ಕೇಂದ್ರಗಳಿಗೆ ವಾಕ್ ಇನ್ ಕೂಲರ್, ವಾಕ್ ಇನ್ ಫ್ರೀಜರ್ ಗಳನ್ನು ಕೂಡ ನೀಡುವ ಪ್ರಸ್ತಾಪವಿದೆ” ಎಂದು ಸಚಿವರು ತಿಳಿಸಿದ್ದಾರೆ.

“ರಾಜ್ಯದಲ್ಲಿ 10 ವಾಕ್ ಇನ್ ಕೂಲರ್ ಮತ್ತು 4 ವಾಕ್ ಇನ್ ಫ್ರೀಜರ್ ಇದೆ. ಕೇಂದ್ರ ಆರೋಗ್ಯ ಸಚಿವಾಲಯವು 3 ವಾಕ್ ಇನ್ ಕೂಲರ್, 2 ವಾಕ್ ಇನ್ ಫ್ರೀಜರ್ ನೀಡಲಿದೆ. ಇದಕ್ಕಾಗಿ ಸಿವಿಲ್ ಕಾಮಗಾರಿ ಆರಂಭವಾಗಿದೆ. ಕೋಲ್ಡ್ ಸ್ಟೋರೇಜ್ ಮತ್ತು ಸಂಗ್ರಹಕ್ಕೆ ಸಂಬಂಧಿಸಿದಂತೆ, ಡೋಸ್ ಗಳು ಮತ್ತಿತರ ಮಾಹಿತಿ ಅಗತ್ಯವಿದೆ. ಈ ಮಾಹಿತಿಯನ್ನು ಶೀಘ್ರ ಒದಗಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಕೋರಲಾಗಿದೆ. ಲಸಿಕೆ ಕಾರ್ಯಕ್ರಮಕ್ಕೆ ಅಗತ್ಯವಿರುವ ಡ್ರೈ ಸ್ಟೋರೇಜ್ ಬಗ್ಗೆಯೂ ನಿರ್ಧಾರ ಕೈಗೊಳ್ಳಬೇಕಿದೆ” ಎಂದು ಸಚಿವರು ತಿಳಿಸಿದ್ದಾರೆ.

“ಕೇಂದ್ರ ಸರ್ಕಾರ ಈಗಾಗಲೇ ಡೀಪ್ ಫ್ರೀಜರ್ ಹಾಗೂ ರೆಫ್ರಿಜರೇಟರ್ ಗಳನ್ನು ಮಂಜೂರು ಮಾಡಿದೆ. ಹೆಚ್ಚುವರಿ ಅಗತ್ಯಗಳ ಕುರಿತು ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಲಾಗಿದೆ. ಪಶು ಸಂಗೋಪನೆ ಇಲಾಖೆಯಲ್ಲಿ ಲಭ್ಯವಿರುವ ಕೋಲ್ಡ್ ಸ್ಟೋರೇಜ್ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆಯಲಾಗಿದೆ. ಕಾರ್ಪೊರೇಟ್ ಖಾಸಗಿ ಆಸ್ಪತ್ರೆಗಳ ಕೋಲ್ಡ್ ಸ್ಟೋರೇಜ್ ಬಗ್ಗೆಯೂ ಮಾಹಿತಿ ಪಡೆಯಲಾಗಿದೆ” ಎಂದು ಸಚಿವರು ವಿವರಿಸಿದ್ದಾರೆ.

English summary…

Minister Dr. K. Sudhakar hints at establishing 29,451 booths to administer Covid vaccine statewide

Bengaluru, Nov. 24, 2020 (www.justkannada.in): “The State Government has made all arrangements for distribution of COVID vaccination and 29,451 booths have been already identified,” said Health and Medical Education Minister Dr. K. Sudhakar.

Arrangements are being made to distribute Covid vaccinations as per instructions given by the Government of India. The State Covid Task Force has discussed about this and measures have already been take to store and distribute the vaccine. 10,008 members have also been identified to administer the vaccination, he said.

Keywords: 29,451 booths-COVID vaccination-Dr. K. Sudhakar-

Key words: Minister Dr. K. Sudhakar- 29,451 covid Vaccine Distribution Centers -statewide.

The post ರಾಜ್ಯಾದ್ಯಂತ 29,451 ಕೋವಿಡ್ ಲಸಿಕೆ ವಿತರಣೆ ಕೇಂದ್ರಗಳ ಗುರುತು-ಸಚಿವ ಡಾ.ಕೆ.ಸುಧಾಕರ್ ಮಾಹಿತಿ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ : ಶುಭಾಶಯ ಕೋರಿ ಕನ್ನಡದಲ್ಲಿ ಪ್ರಧಾನಿ ಮೋದಿ ಟ್ವೀಟ್
ಮೈಸೂರು,ನವೆಂಬರ್,01,2020(www.justkannada.in) : ರಾಜ್ಯಾದ್ಯಂತ ನಾಡಹಬ್ಬ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆಮಾಡಿದ್ದು, ರಾಜ್ಯದ ಜನತೆಗೆ ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.

ರಾಜ್ಯದ ಜನತೆಗೆ ಕನ್ನಡದಲ್ಲೇ ಶುಭಾಶಯ ಕೋರಿ ಪ್ರಧಾನಿ ಟ್ವೀಟ್ ಮಾಡುವ ಮೂಲಕ ಕನ್ನಡ ಪ್ರೇಮ ಮೆರೆದಿದ್ದಾರೆ.

ಸಿಎಂ ಬಿಎಸ್ ವೈ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಹೆಚ್.ಡಿ. ಕುಮಾರಸ್ವಾಮಿ, ಸಂಸದ ಪ್ರತಾಪ್ ಸಿಂಹ ರಿಂದ ಅನೇಕರು 65 ನೇ ರಾಜ್ಯೋತ್ಸವಕ್ಕೆ ಶುಭಕೋರಿ ಟ್ವೀಟ್ ಮಾಡಿದ್ದಾರೆ.

ಶುಭಾಶಯದ ಜೊತೆ ಕನ್ನಡದ ಅಸ್ಮಿತೆ ಉಳಿಸುವ ಜೊತೆ ಕನ್ನಡವನ್ನು ಉಳಿಸಿ ಬೆಳಸುವಂತೆ ಮನವಿ ಮಾಡಿದ್ದಾರೆ.

key words : Statewide-Kannada-Rajyotsava-celebrations-PM Modi-tweeted -Kannada

The post ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ : ಶುಭಾಶಯ ಕೋರಿ ಕನ್ನಡದಲ್ಲಿ ಪ್ರಧಾನಿ ಮೋದಿ ಟ್ವೀಟ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯಾದ್ಯಂತ ಪಶು ಸಂಜೀವಿನಿ ವಾಹನ ವ್ಯವಸ್ಥೆ ಜಾರಿ : ಸಚಿವ ಎಸ್.ಟಿ.ಸೋಮಶೇಖರ್ ಭರವಸೆ
ಮೈಸೂರು, ಸೆಪ್ಟೆಂಬರ್,05, 2020(www.justkannada.in) ; ಜಾನುವಾರುಗಳಿಗೆ ತೊಂದರೆಯಾದಲ್ಲಿ 1962 ಸಹಾಯವಾಣಿಗೆ ಕರೆ ಮಾಡಿದರೆ ತಕ್ಷಣವೇ ವಾಹನವು ವೈದ್ಯರೊಂದಿಗೆ ಮಾಲೀಕನ ಮನೆಗೆ ತೆರಳಿ ಜಾನುವಾರುಗಳಿಗೆ ಚಿಕಿತ್ಸೆ ಒದಗಿಸುವುದು. ಹೀಗಾಗಿ, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪಶು ಸಂಜೀವಿನಿ ವಾಹನ ವ್ಯವಸ್ಥೆಯು ಜಾರಿಯಾಗಲಿದೆ ಎಂದು  ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಭರವಸೆ ನೀಡಿದರು.

ಶನಿವಾರ ಬೆಳಿಗ್ಗೆ ಜಿಲ್ಲಾ ಪಂಚಾಯತ್ ಆವರಣದಲ್ಲಿ ಎಸ್.ಟಿ.ಸೋಮಶೇಖರ್ ಅವರು ಪಶು ಚಿಕಿತ್ಸಾ, ಪಶು ಸಂಜೀವಿನಿ ವಾಹನವನ್ನು ಹಸಿರು ನಿಶಾನೆ ತೋರಿಸುವ ಮೂಲಕ ಲೋಕಾರ್ಪಣೆ ಮಾಡಿದರು.

ಬಳಿಕ ಮಾತನಾಡಿದ ಅವರು, ಪಶು ಸಂಜೀವಿನಿ ವಾಹನವನ್ನು ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಲೋಕರ್ಪಣೆ ಮಾಡುವರು. ಮೈಸೂರಿನಲ್ಲಿಂದು ಲೋಕರ್ಪಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪಶು ಸಂಜೀವಿನಿ ವಾಹನ ವ್ಯವಸ್ಥೆಯು ಜಾರಿಯಾಗಲಿದೆ ಎಂದರು.

ಪಶು ಸಂಜೀವಿನಿ ವಾಹನದಿಂದ ಜಾನುವಾರುಗಳ ಮಾಲೀಕರಿಗೆ ಅನುಕೂಲವಾಗಲಿದೆ. ಪಶು ಸಂಜೀವಿನಿ ವಾಹನದಲ್ಲಿ ಶಸ್ತ್ರ ಚಿಕಿತ್ಸಾ ಘಟಕ, ಪ್ರಯೋಗ ಶಾಲೆ, ಸ್ಕ್ಯಾನಿಂಗ್ ಉಪಕರಣ ಅಳವಡಿಕೆ, 250 ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್, ಹವಾನಿಯಂತ್ರಣ ವ್ಯವಸ್ಥೆ, ಪಶು ವೈದ್ಯರು ಮತ್ತು ಸಿಬ್ಬಂದಿ ಕುಳಿತುಕೊಳ್ಳಲು ಆಸನ ಹಾಗೂ ಆಧುನಿಕ ಪಶು ವೈದ್ಯಕೀಯ ಸೇವೆಗಳನ್ನು ಹೊಂದಿದೆ ಎಂದು ಮಾಹಿತಿ ನೀಡಿದರು.

ಸೆಪ್ಟೆಂಬರ್ 8ರಂದು ದಸರಾ ಉನ್ನತ ಮಟ್ಟದ ಸಮಿತಿ ಸಭೆ

ದಸರಾ ಆಚರಣೆ ಬಗ್ಗೆ ಸೆಪ್ಟೆಂಬರ್ 8 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ಸಭೆ ನಡೆಸಲಾಗುವುದು. ನಂತರ ಮೈಸೂರಿನಲ್ಲಿ ಕಾರ್ಯಕಾರಿ ಸಮಿತಿ ಸಭೆ ನಡೆಸಿ, ಇಲ್ಲಿ ತೆಗೆದುಕೊಳ್ಳುವ ನಿರ್ಣಯದ ಮೇರೆಗೆ ದಸರಾವನ್ನು ಆಚರಿಸಲಾಗುವುದು ಎಂದು ಹೇಳಿದರು.

ಡ್ರಗ್ಸ್ ದಂಧೆ ಯಾರೆ ಭಾಗಿಯಾಗಿದ್ದರು ಕಠಿಣ ಕ್ರಮ..

ಡ್ರಗ್ಸ್ ದಂಧೆಯಲ್ಲಿ ನಂಟು ಹೊಂದಿರುವ ರಾಜಕೀಯದವರಾಗಲಿ, ಸಿನಿಮಾ ನಟರಾಗಲಿ, ಉದ್ಯಮಿಗಳ ಮಕ್ಕಳಾಗಲಿ, ಇಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಒಂದುವೇಳೆ ಮೈಸೂರು ನಗರದಲ್ಲಿ ಗಾಂಜಾ ಮಾರಾಟವು ಕಂಡು ಬಂದಲ್ಲಿ ಆಯಾ ವ್ಯಾಪ್ತಿಯ ಪೊಲೀಸ್ ಠಾಣೆಯ ಅಧಿಕಾರಿಗಳು ಜವಾಬ್ದಾರರಾಗಿರುತ್ತಾರೆ ಎಂದು ಹೇಳಿದರು.

ಈ ಸಂದರ್ಭ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಪರಿಮಳ ಶ್ಯಾಂ, ಶಾಸಕ ಎಲ್.ನಾಗೇಂದ್ರ, ಜಿಲ್ಲಾಧಿಕಾರಿ ಬಿ.ಶರತ್, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಮುಡಾ ಅಧ್ಯಕ್ಷ ಎಚ್.ವಿ ರಾಜೀವ್ ಇತರರು ಉಪಸ್ಥಿತರಿದ್ದರು.

key words : statewide-veterinary-sanctuary-Vehicle-system-enforcement-

Minister-S.T.Somashekhar-assured

The post ರಾಜ್ಯಾದ್ಯಂತ ಪಶು ಸಂಜೀವಿನಿ ವಾಹನ ವ್ಯವಸ್ಥೆ ಜಾರಿ : ಸಚಿವ ಎಸ್.ಟಿ.ಸೋಮಶೇಖರ್ ಭರವಸೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

‘ಚಲಿಸು ಕರ್ನಾಟಕ’: ಸೆ.14ರಿಂದ ಕರ್ನಾಟಕ ರಾಷ್ಟ್ರ ಸಮಿತಿ ವತಿಯಿಂದ ರಾಜ್ಯಾದ್ಯಂತ ಸೈಕಲ್ ಯಾತ್ರೆ….
ಮೈಸೂರು,ಆಗಸ್ಟ್,26,2020(www.justkannada.in): ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಇದೇ ಸೆಪ್ಟೆಂಬರ್ 14ರಿಂದ ರಾಜ್ಯಾದ್ಯಂತ ಸೈಕಲ್ ಯಾತ್ರೆ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಮೂರು ಹಂತಗಳಲ್ಲಿ ಸೈಕಲ್ ಯಾತ್ರೆ ಆಯೋಜಿಸಿದ್ದು,  ಸೆಪ್ಟೆಂಬರ್ 14 ರಿಂದ #ಚಲಿಸು ಕರ್ನಾಟಕ’ದ ಮೊದಲ ಹಂತದ ಸೈಕಲ್ ಯಾತ್ರೆ ಪ್ರಾರಂಭವಾಗಲಿದೆ. ಮೊದಲ ಹಂತದ ಸೈಕಲ್ ಯಾತ್ರೆಯು ಸೆಪ್ಟೆಂಬರ್ 14, ರಂದು ಕೋಲಾರದಿಂದ ಆರಂಭವಾಗಿ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ನಗರ, ರಾಮನಗರ, ಮಂಡ್ಯ, ಚಾಮರಾಜನಗರ, ಮೈಸೂರು, ಕೊಡಗು, ಹಾಸನ, ತುಮಕೂರು, ಚಿತ್ರದುರ್ಗ ಜಿಲ್ಲೆಗಳನ್ನು ಹಾದು ತುಮಕೂರು ಜಿಲ್ಲೆಯ ಶಿರಾದಲ್ಲಿ ಸೆಪ್ಟೆಂಬರ್ 27, 2020ರಂದು ಸಮಾರೋಪವಾಗುವುದು.

ಎರಡನೇ ಹಂತದ ಜಾಥಾ ಅಕ್ಟೋಬರ್ 5, 2020ರಂದು ಬಳ್ಳಾರಿಯಿಂದ ಆರಂಭವಾಗಿ ಕೊಪ್ಪಳ, ರಾಯಚೂರು, ಯಾದಗಿರಿ, ಬೀದರ್, ಗುಲ್ಬರ್ಗ, ವಿಜಯಪುರ, ಬಾಗಲಕೋಟೆ (ಕೂಡಲಸಂಗಮ) ಜಿಲ್ಲೆಗಳಲ್ಲಿ ಸಾಗುತ್ತದೆ.

ಮೂರನೇ ಹಂತದ ಜಾಥಾ ನವೆಂಬರ್ 23, 2020ರಂದು ಬೆಳಗಾವಿಯಿಂದ ಆರಂಭವಾಗಿ ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಗುತ್ತದೆ.

ಈ ಕುರಿತು ಮಾಹಿತಿ ನೀಡಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ಸೋಮಸುಂದರ್ ಕೆ ಎಸ್, ಸೈಕಲ್ ಇಲ್ಲದವರಿಗೆ ಸೈಕಲ್ ವ್ಯವಸ್ಥೆ ಮಾಡಲಾಗುವುದು. ದ್ವಿಚಕ್ರ ವಾಹನ ಅಥವಾ ಕಾರಿನಲ್ಲಿ ಬರುವವರೂ ಜೊತೆಯಾಗಬಹುದು  ಸೈಕಲ್ ತುಳಿಯಲು ಆಗದಿದ್ದರೂ ಯಾತ್ರೆಯಲ್ಲಿ ಪಾಲ್ಗೊಳ್ಳಬಯಸುವ ಆಸಕ್ತರಿಗೆ ಸೂಕ್ತ ವ್ಯವಸ್ಥೆ ಮಾಡಲಾಗುವುದು. ಊಟ ಮತ್ತು ವಸತಿಯ ವ್ಯವಸ್ಥೆ ಇರುತ್ತದೆ. ಪ್ರತಿದಿನ ಆರೋಗ್ಯ ತಪಾಸಣೆ ಮಾಡಲಾಗುವುದು. ಸೈಕಲ್ ಯಾತ್ರೆಯಲ್ಲಿ ಭಾಗವಹಿಸಲು ಆಸಕ್ತಿ ಇರುವವರು ಇಲ್ಲಿ ನೋಂದಾಯಿಸಿಕೊಳ್ಳಬಹುದು. http://www.krsparty.org/registration/cycle.php ಈ ಲಿಂಕ್ ಕ್ಲಿಕ್ ಮಾಡಿ ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ “#ಚಲಿಸುಕರ್ನಾಟಕ #KRSಸೈಕಲ್ ‌ಯಾತ್ರೆ ಉಸ್ತುವಾರಿ ಸಮಿತಿ”ಯ ಆಧ್ಯಕ್ಷ ಲಿಂಗೇಗೌಡ ಎಸ್ ಎಚ್, (94813-01793), ಸಂಯೋಜಕ   ದೀಪಕ್ ನಟರಾಜ್, (79756-25575), ಸದಸ್ಯರಾದ  ಮಲ್ಲಿಕಾರ್ಜುನ್ ಬಟ್ಟರಹಳ್ಳಿ(86608-04172),   ರಘು (99864-99551), ರಘುಪತಿಭಟ್(96110-96523),  ಸೋಮುಸುಂದರ್ ಕೆ.ಎಸ್ (93421-85672) ಅವರನ್ನು ಸಂಪರ್ಕಿಸಬಹುದಾಗಿದೆ.

Key words:  statewide -cycle ride – Karnataka Rashtra Samithi- September 14th.

The post ‘ಚಲಿಸು ಕರ್ನಾಟಕ’: ಸೆ.14ರಿಂದ ಕರ್ನಾಟಕ ರಾಷ್ಟ್ರ ಸಮಿತಿ ವತಿಯಿಂದ ರಾಜ್ಯಾದ್ಯಂತ ಸೈಕಲ್ ಯಾತ್ರೆ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.