ten years | Just Kannada - Daily News Updates

ಹತ್ತು ವರ್ಷ ಹಿಂದಿನ ಜಾತಿಗಣತಿ ರಿಪೋರ್ಟ್ ಇಡ್ಕೊಂಡು ಈಗ ಏನು ಮಾಡ್ತೀರಿ? ಕೇಂದ್ರ ಸಚಿವ ಹೆಚ್ ಡಿಕೆ ವಾಗ್ದಾಳಿ
ಮೈಸೂರು,ಅಕ್ಟೋಬರ್,11,2024 (www.justkannada.in):  ಹತ್ತು ವರ್ಷ ಹಿಂದೆ ಮಾಡಿದ ಜಾತಿಗಣತಿ ರಿಪೋರ್ಟ್. ಈಗ ಆ ಜಾತಿಗಣತಿ ಇಟ್ಕೊಂಡು ಏನು ಮಾಡ್ತೀರಿ? ಇದು ಸಿದ್ದರಾಮಯ್ಯ ಆಫೀಸಲ್ಲಿ ಕುಳಿತು ಮಾಡಿದ ರಿಪೋರ್ಟ್ ಅಂತ ಕಾಂಗ್ರೆಸ್ ನವರೇ ಹೇಳ್ತಿದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಮಾತನಾಡಿದ ಹೆಚ್.ಡಿಕೆ,  ಇಂದು ಆಯುಧಪೂಜೆ ಹಬ್ಬ ಇದೆ, ವಿಜಯದಶಮಿ ಆಚರಣೆ ಆಗ್ತಿದೆ. ಇಂದು ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ಬಂದಿದ್ದೇನೆ. ರಾಜ್ಯದ ಜನರಿಗೆ ಒಳ್ಳೆಯದಾಗಲಿ ಎಂದು‌ ಪ್ರಾರ್ಥನೆ ಮಾಡಿದ್ದೇನೆ ಎಂದರು.

ಕೋವಿಡ್ ಹಗರಣದ ತನಿಖೆಗೆ ಎಸ್ಐಟಿ ರಚನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್. ಡಿಕೆ,  ನಿನ್ನೆ ಕ್ಯಾಬಿನೆಟ್ ನಲ್ಲಿ ಎಸ್ಐಟಿ ತನಿಖೆ ಮಾಡ್ತೀನಿ‌ ಅಂದಿದ್ದಾರೆ. ಅವರ ನಿರ್ಧಾರಕ್ಕೆ ನಮ್ಮದೇನು ತಕರಾರಿಲ್ಲ. ಆದರೆ ಇವರು ವಿರೋಧಪಕ್ಷದಲ್ಲಿದ್ದಾಗ ಕೋವಿಡ್ ಬಗ್ಗೆ ಚರ್ಚೆ ಮಾಡ್ತಿದ್ರು. ಇದೇ ಸಿದ್ದರಾಮಯ್ಯ ಸದನದಲ್ಲಿ ಚರ್ಚೆ ಮಾಡಿದ್ರು. ಸರ್ಕಾರ ರಚನೆ ಆಗಿ 15 ತಿಂಗಳಾಗಿದೆ. ಇಷ್ಟುದಿನ ಸುಮ್ಮನಿದ್ದರು, ಈಗ ತನಿಖೆ ಮಾಡ್ತಾರಾ.? ಅವರ ವೈಫಲ್ಯ ಮುಚ್ಚಿಕೊಳ್ಳಲು ಇವೆಲ್ಲ ಮಾಡ್ತಾರೆ ಎಂದರು.

ಕಾಂಗ್ರೆಸ್ ನವರು ಇಂದು ಪೇಪರ್ ನಲ್ಲಿ ಅದ್ಯಾವುದೋ ಜಾಹಿರಾತು ಕೊಟ್ಟಿದ್ದಾರೆ. ದುಷ್ಟಶಕ್ತಿಗಳ ಎದುರು ಸತ್ಯದ ಜಯ ಅಂತೆ. ಕರ್ನಾಟಕ ರಾಜ್ಯವನ್ನ ವಾಮಾಮಾರ್ಗ, ಮೋಸದಿಂದ ಅಸ್ತಿರಗೊಳಿಸ್ತಿದ್ದಾರೆ ಅಂತ ಕೊಟ್ಟಿದ್ದಾರೆ. ಆದರೆ ವಾಮಾಮಾರ್ಗ, ಮೋಸವನ್ನ ಸ್ಥಿರಗೊಳಿಸಲು ಹೊರಟಿರೋ ಸರ್ಕಾರ ಇದು. ಇವರು ಯಾವತ್ತು ಸತ್ಯ ಧರ್ಮ ಉಳಿದಿದ್ದಾರೆ. ಸಿದ್ದರಾಮಯ್ಯ ಅವರನ್ನ ಕೇಳಿತ್ತೇನೆ. ಬಡವರಿಗೆ ಕೊಡುವ ಹಣವನ್ನ ವಾಲ್ಮೀಕಿ ನಿಗಮದಲ್ಲಿ ನುಂಗಿದ್ದಾರೆ. ಸರ್ಕಾರದ ಮೋಸಮಾಡಿ ಸೈಟ್ ತೆಗೆದುಕೊಂಡಿದ್ರು. ಬಳಿಕ ಪರಿಸ್ಥಿತಿ ವ್ಯತಿರಿಕ್ತವಾದಾಗ ವಾಪಸ್ಸು ಕೊಟ್ಟಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣ ದುರುಪಯೋಗ ಆಗಿದೆ. ಇವರೇ ಆರ್ಥಿಕ ಸಚಿವರು, ಇವರ ಇಲಾಖೆಗೆ ಸಂಬಂಧಪಟ್ಟ ಹಣ ಬಿಡುಗಡೆ ಆಗಿದೆ. ಅದರ ಸತ್ಯಾಂಶಗಳು ಹೊರವರುವ ಕಾಲ ದೂರ ಇಲ್ಲ. ಸಿದ್ರಾಮಣ್ಣನ ಬಗ್ಗೆ ಇನಕಲ್ ಸಾಕಮ್ಮನ ಕೇಳಿದ್ರೆ ಗೊತ್ತಾಗುತ್ತೆ. ಯಾವ ವಾಮಾಮಾರ್ಗದಲ್ಲಿ ಸೈಟ್ ಪಡೆದಿದ್ದಾರೆ ಗೊತ್ತಾಗುತ್ತೆ. ಇದೆಲ್ಲ ಇತಿಹಾಸ ಇದೆ. ಹಾಗಾಗಿ ಇಲ್ಲಿ ಸ್ಥಿರಗೊಳಿಸೋದು ಅಸ್ಥಿರ ಗೊಳಿಸೊದು ನಮ್ಮ ಕೈಯಲ್ಲಿಲ್ಲ. ಎಲ್ಲ ಚಾಮುಂಡಿ ಅಮ್ಮನ ಕೈಯಲ್ಲಿದೆ ಎಂದು ವಾಗ್ದಾಳಿ ನಡೆಸಿದರು.

ಹೆಚ್ಡಿಕೆ ಕೇವಲ ಆರೋಪ ಮಾಡದೇ ದಾಖಲೆ ನೀಡಲಿ ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿ ಹೆಚ್ ಡಿಕೆ, ನಾನು ಎಷ್ಟು ದಾಖಲೆ ಕೊಡಲಿ, ಈಗ  ಕೊಟ್ಟಿರುವುದೇ ಅರಗಿಸಿಕೊಳ್ಳೋಕಾಗ್ತಿಲ್ಲ. ಕಾಂಗ್ರೆಸ್ ಮುಖಂಡರೇ ಇದರ ಬಗ್ಗೆ ಮಾತಾಡ್ತಾರೆ. ಪೆನ್ ಡ್ರೈವ್ ನಲ್ಲಿ ವರ್ಗಾವಣೆ ದಂಧೆ ಬಗ್ಗೆ ಇದ್ದಿದ್ದು. ಅಶ್ಲೀಲ ಚಿತ್ರ ಇರಲಿಲ್ಲ ಅದರಲ್ಲಿ. ನಾನು ಕಮಿಷನ್ ಹೊಡಿಬೇಕು ಅಂತಿದ್ರೆ ರೈತರ ಸಾಲ ಮನ್ನಾ ಮಾಡಬೇಕಾಗಿರಲಿಲ್ಲ. ನಾನು ಎರಡು ಬಾರಿ ಮುಖ್ಯಮಂತ್ರಿಯಾದಾಗಲೂ ಯಾರಿಗೂ ಒತ್ತಡ ಹಾಕಿ ಕಮಿಷನ್ ಪಡೆದಿಲ್ಲ. ತಾಯಿ ಸನ್ನಿಧಾನದಲ್ಲಿ ಹೇಳ್ತಿದೇನೆ ಎಂದರು.

ಡಿನ್ನರ್ ಮೀಟಿಂಗ್ ಬ್ರೇಕ್ ಫಾಸ್ಟ್ ಎಲ್ಲಾ ಅವರಿಗೆ ಸೇರಿದ್ದು. ಮುಖ್ಯಮಂತ್ರಿ ಬದಲಾವಣೆ ವಿಚಾರ ಅವರ ಪಕ್ಷಕ್ಕೆ ಸೇರಿದ್ದು. ನಾನು ಮುಖ್ಯಮಂತ್ರಿ ಇದ್ದಾಗ ಜಾತಿಗಣತಿ ತಗೊಳಿಲ್ಲ ಅಂತ ಆರೋಪ ಮಾಡಿದ್ರು. ನಾನು 14 ತಿಂಗಳು ಆಗಿದ್ದೆ, ಅವರು ಬಂದು 15 ತಿಂಗಳಾಗಿದೆ. ಯಾಕೆ ಬಿಡುಗಡೆ ಮಾಡಿಲ್ಲ. ಪ್ರತಿನಿತ್ಯ ಕುರಿಕಾಯೋನು, ಅದಕ್ಕೆ ಹೊಟ್ಟೆ ಉರಿ ಅಂತ ಹೇಳ್ಕೊಂಡು ತಿರುಗ್ತಾರೆ. ಮೋದಿ ಟೀ ಮಾರಿಲ್ವಾ.? ನಾವು ಅಸೂಯೆ ಪಟ್ರೆ ಆಗುತ್ತಾ? ಜನ ತೀರ್ಮಾನ ಮಾಡ್ಬೇಕು? ಹತ್ತು ವರ್ಷ ಹಿಂದೆ ಮಾಡಿದ ಜಾತಿಗಣತಿ ರಿಪೋರ್ಟ್. ಈಗ ಆ ಜಾತಿಗಣತಿ ಇಟ್ಕೊಂಡು ಏನು ಮಾಡ್ತೀರಿ? ಇದು ಸಿದ್ದರಾಮಯ್ಯ ಆಫೀಸಲ್ಲಿ ಕುಳಿತು ಮಾಡಿದ ರಿಪೋರ್ಟ್ ಅಂತ ಕಾಂಗ್ರೆಸ್ ನವರೇ ಹೇಳ್ತಿದಾರೆ ಎಂದರು.

Key words:  caste census, report, ten years, Union Minister, HDK

‌ಪ್ರತಿ ಹತ್ತು ವರ್ಷಕ್ಕೊಮ್ಮೆ ಜಾತಿವಾರು ಜನಗಣತಿಯಿಂದ ಅರ್ಹರಿಗೆ ಮೀಸಲಾತಿ ಒದಗಿಸಲು ಸಾಧ್ಯ- ಮಾಜಿ ಸಿಎಂ ಸಿದ್ಧರಾಮಯ್ಯ.
ಬೆಂಗಳೂರು,ಆಗಸ್ಟ್,31,2021(www.justkannada.in):  ‌ಪ್ರತಿ ಹತ್ತು ವರ್ಷಕ್ಕೊಮ್ಮೆ ಜಾತಿವಾರು ಜನಗಣತಿ ನಡೆಸುವುದರಿಂದ ವೈಜ್ಞಾನಿಕವಾಗಿ ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸಲು, ಅರ್ಹರಿಗೆ ಮೀಸಲಾತಿ ಒದಗಿಸಲು ಸಾಧ್ಯವಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, 90 ವರ್ಷಗಳ ಹಿಂದಿನ ಜಾತಿ ಜನಗಣತಿ ವರದಿ ಇಟ್ಟುಕೊಂಡು ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಇದು ಸರಿಯಲ್ಲ ಎಂದರು.

ಸ್ವಾತಂತ್ರ್ಯ ನಂತರ ಎಲ್ಲಾ ಜಾತಿ, ವರ್ಗಗಳಿಗೂ ಸೂಕ್ತ ಅವಕಾಶಗಳು ಸಿಗುತ್ತಿಲ್ಲ. ಹೀಗಾಗಿ ನಮ್ಮ ಕಾಂಗ್ರೆಸ್ ಸರ್ಕಾರ  ಇದ್ದಾಗ 180 ಕೋಟಿ ಖರ್ಚು ಮಾಡಿಸಿ ಜಾತಿ ಜನಗಣತಿ ಮಾಡಿಸಿದ್ದೇನೆ. ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರೂ ಪ್ರಧಾನಿ ಮೋದಿ ಅವರ ಬಳಿಗೆ ನಿಯೋಗ ಕರೆದೊಯ್ದು ಜಾತಿ ಜನಗಣತಿ ಬೇಡಿಕೆ ಮುಂದಿಟ್ಟಿದ್ದಾರೆ. ಹೀಗಾಗಿ ಪ್ರತಿ ಹತ್ತು ವರ್ಷಕ್ಕೊಮ್ಮೆ ಸೆನ್ಸನ್ ನಡೆಯುವ ರೀತಿಯಲ್ಲೇ ಜಾತಿಗಣತಿ ನಡೆದರೆ ಒಳ್ಳೆಯದು. ಜಾತಿ ಜನಗಣತಿ ಅನುಷ್ಠಾನದ ಬಗ್ಗೆ ವಿಧಾನಸಭೆ ಅಧಿವೇಶನದಲ್ಲೂ ಹೋರಾಟ ಮಾಡುತ್ತೇವೆ. ಧ್ವನಿ ಎತ್ತುತ್ತೇವೆ ಎಂದರು.

ಜಿ.ಟಿ.ದೇವೇಗೌಡ ಅವರು ಜೆಡಿಎಸ್ ತೊರೆದಿದ್ದು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, “ಜಿ.ಟಿ.ದೇವೇಗೌಡ ನನ್ನ ಜತೆಗೆ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಜತೆಗೂ ಚರ್ಚಿಸಿದ್ದಾರೆ.  ಈ ಬಗ್ಗೆ ಹೈಕಮಾಂಡ್ ಜತೆಗೆ ಚರ್ಚಿಸುವುದಾಗಿ ತಿಳಿಸಿದ್ದೇನೆ. ಈ ವಿಚಾರದಲ್ಲಿ ಸದ್ಯಕ್ಕೆ ನಡೆದಿರುವುದು ಇಷ್ಟೇ ಬೆಳವಣಿಗೆ. ಹೈಕಮಾಂಡ್ ಜತೆ ಚರ್ಚಿಸಿದ ಬಳಿಕ ಮುಂದಿನ ಬೆಳವಣಿಗೆ ತಿಳಿಸಲಾಗುವುದು ಎಂದರು.

ಮೈಸೂರು ಪಾಲಿಕೆ ಬಿಜೆಪಿ ವಶವಾದ ಕುರಿತು ಪ್ರಸ್ತಾಪಿಸಿದ ಅವರು, ಜೆಡಿಎಸ್ ಒಪ್ಪಂದದ ಪ್ರಕಾರ ನಡೆದುಕೊಳ್ಳಲಿಲ್ಲ. ಹೀಗಾಗಿ ಮೂರು ಪಕ್ಷದವರು ಮೇಯರ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದರು. ಅತಿ ಹೆಚ್ಚು ಸ್ಥಾನ ಬಿಜೆಪಿ ಗೆದ್ದಿದ್ದರಿಂದ ಅವರಿಗೆ ಮೇಯರ್ ಸ್ಥಾನ ಹೋಗಿದೆ ಎಂದು ಸಿದ್ಧರಾಮಯ್ಯ ತಿಳಿಸಿದರು.

ಮೆಟ್ರೋ ಅಧಿಕಾರಿಗಳು ಕನ್ನಡವನ್ನು ನಿರ್ಲಕ್ಷಿಸುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಈ ನಾಡಿನಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಕನ್ನಡಕ್ಕೆ ಅಗ್ರಸ್ಥಾನ ಇರಬೇಕು. ಕೇಂದ್ರ ಸಚಿವರು ಹಿಂದಿ ಅಥವಾ ಇಂಗ್ಲಿಷ್‌ ನಲ್ಲಿ ಭಾಷಣ ಮಾಡಿದರೆ ತಪ್ಪಲ್ಲ. ಆದರೆ ಕನ್ನಡ ನೆಲದಲ್ಲಿ ಮೆಟ್ರೋ ಅಧಿಕಾರಿಗಳು ಕನ್ನಡಕ್ಕೆ ಅವಮಾನ ಮಾಡುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ. ಇದನ್ನು ನಾನು ಖಂಡಿಸುತ್ತೇನೆ ಎಂದರು.

ಕೋವಿಡ್ ಮೂರನೇ ಅಲೆ ಆತಂಕದಲ್ಲಿ ಪ್ರಾಥಮಿಕ ಶಾಲೆಗಳನ್ನು ತೆರೆಯಲು ಸರ್ಕಾರ ಚರ್ಚಿಸುತ್ತಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿ, ಕೊರೋನಾ ನಿಯಂತ್ರಣದಲ್ಲಿ ಇದ್ದಾಗ ಸೂಕ್ತ ಮುನ್ನೆಚ್ಚರಿಕೆ ಮತ್ತು ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಂಡು ಶಾಲೆಗಳನ್ನು ತೆರೆಯುವುದು ಒಳ್ಳೆಯದು. ಹಾಗೆಯೇ ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಬೇಕು. ಆದರೆ ಅತಿ ಹೆಚ್ಚು ಜನ ಗುಂಪು ಸೇರದಂತೆ, ಸಾರ್ವಜನಿಕವಾಗಿ ಗುಂಪು ಗುಂಪಾಗಿ ಆಚರಣೆ ಮಾಡದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಜನಾಶೀರ್ವಾದ ಯಾತ್ರೆಗೆ ಸಹಸ್ರಾರು ಮಂದಿಯನ್ನು ಸೇರಿಸಿ ಕೇಂದ್ರ ಸಚಿವರು ಮತ್ತು ಬಿಜೆಪಿ ಕೋವಿಡ್ ನಿಯಮ ಉಲ್ಲಂಘಿಸಿದ್ದನ್ನು ತೀವ್ರವಾಗಿ ಖಂಡಿಸಿದ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಫ್ಯೂಸ್ ಹೋಗಿದೆ ಎನ್ನುವ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ ವಿಧಾನಸಭಾ ಚುನಾವಣೆ ಬರಲಿ. ನಾಡಿನ ಜನ ಯಾರ ಫ್ಯೂಸ್ ಕಿತ್ತಾಕುತ್ತಾರೆ ಎನ್ನುವುದು ಗೊತ್ತಾಗುತ್ತದೆ. ನಾಲಗೆಗೂ ಮತ್ತು ಮೆದುಳಿಗೂ ಸಂಪರ್ಕವೇ ಕಟ್ ಆಗಿರುವ ಈಶ್ವರಪ್ಪರ ಹೇಳಿಕೆಗಳಿಗೆ ಮಹತ್ವ ನೀಡುವ ಅಗತ್ಯ ಇಲ್ಲ ಎಂದು ಕಿಡಿ ಕಾರಿದರು.

ತೂಕ ಕಡಿಮೆಯಾಗಿದೆ:

ಹತ್ತು ದಿನಗಳ ಚಿಕಿತ್ಸೆ ಬಳಿಕ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರದಿಂದ ಇಂದು ವಾಪಾಸಾಗಿದ್ದೇನೆ. ಕೊರೊನಾ ಸೋಂಕಿಗೆ ಒಳಗಾದ ಬಳಿಕ ದೇಹದ ತೂಕ ಮೂರ್ನಾಲ್ಕು ಕೆ.ಜಿ. ಹೆಚ್ಚಾಗಿತ್ತು. ಈಗ ಮೂರು ಕೆ.ಜಿ. ಕಡಿಮೆಯಾಗಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.

Key words: It is possible – provide- reservation – eligible – caste census –every- ten years-Former CM -Siddaramaiah.