THO | Just Kannada - Daily News Updates
THO ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್‌ ಅಧಿಕಾರಿಗೆ ಕೋರ್ಟ್‌ ಕ್ಲೀನ್‌ ಚಿಟ್‌.
ಮೈಸೂರು, ಮೇ.08, 2024: (www.justkannada.in news) ನಂಜನಗೂಡು ತಾಲೂಕು ಆರೋ ಗ್ಯಾಧಿಕಾರಿ ಡಾ.ಎಸ್.ಆರ್.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಮೈಸೂರು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಐಎಎಸ್‌ ಅಧಿಕಾರಿ  ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ನ್ಯಾಯಾಲಯ ಕ್ಲೀನ್‌ ಚಿಟ್‌ ನೀಡಿದೆ.
೨೦೧೯-೨೦೨೦ ರ ಸಮಯದಲ್ಲಿ ನಂಜನಗೂಡು ಟಿಎಚ್‌ ಒ ನಾಗೇಂದ್ರ ಆತ್ಮಹತ್ಯೆಗೆ ಶರಣಾಗಿದ್ದರು. ಈ ವೇಳೆ, ಮೈಸೂರು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಪ್ರಶಾಂತ್‌ ಕುಮಾರ್‌ ಮಿಶ್ರಾ ಅವರ ಮೇಲೆ ಆರೋಪ ಕೇಳಿ ಬಂದಿತ್ತು. ಇವರ ಕಿರುಕುಳದಿಂದಲೇ ಡಾ. ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ಜಿಪಂ ಸಿಇಒ ಪ್ರಶಾಂತ್‌ ಕುಮಾರ್‌  ಮಿಶ್ರಾ ಅವರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಪ್ರಕರಣವನ್ನು ಮೈಸೂರಿನ ಆಲನಹಳ್ಳಿ ಪೊಲೀಸ್‌ ಠಾಣೆಯಲ್ಲಿ ದಾಖಲಿಸಲಾಗಿತ್ತು. ಪೊಲೀಸರು ಪ್ರಕರಣದ ವಿಚಾರಣೆ ನಡೆಸಿ ಬಳಿಕ “ ಬಿ -ವರದಿ”  ಸಲ್ಲಿಸಿದ್ದರು.
ಪೊಲೀಸರ  “ ಬಿ ವರದಿ”  ಪ್ರಶ್ನಿಸಿ, ಡಾ. ನಾಗೇಂದ್ರ ಅವರ ಮಡದಿ ನ್ಯಾಯಾಲಯದಲ್ಲಿ ಪ್ರೊಟೆಸ್ಟ್‌ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ಸಂಪೂರ್ಣ ವಿಚಾರಣೆ ನಡೆಸಿದ ಮೈಸೂರಿನ ಮೂರನೇ ನಗರ ಸಿವಿಲ್‌ ಕೋರ್ಟ್‌, ಪೊಲೀಸರು ಸಲ್ಲಿಸಿರುವ ʼ ಬಿ ವರದಿ ʼ  ಎತ್ತಿ ಹಿಡಿಯಿತು. ಜತೆಗೆ ಪ್ರಶಾಂತ್‌ ಕುಮಾರ್‌ ಮಿಶ್ರಾ ಅವರ ವಿರುದ್ಧದ  ಆರೋಪಗಳು ನಿರಾಧಾರ ಎಂದು ತೀರ್ಪು ನೀಡಿತು.
ಏನಿದು ಘಟನೆ :
೨೦೨೦ ರ ಕೋವಿಡ್‌ ವೇಳೆ ನಂಜನಗೂಡು ತಾಲೋಕು ವೈದ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಕ್ಕೆ ಅಂದಿನ ಜಿಪಂ ಸಿಇಒ ಪ್ರಶಾಂತ್‌ ಮಿಶ್ರಾ ಅವರ ಕಿರುಕುಳವೇ  ಕಾರಣ ಎಂದು ಆರೋಪಿಸಲಾಗಿತ್ತು.
ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಅವರಿಗೆ ಕಿರುಕುಳ ನೀಡಿ, ಅವರ ಸಾವಿಗೆ ಕಾರಣರಾದರು ಎಂಬ ಆರೋಪಕ್ಕೆ ಗುರಿ ಯಾಗಿದ್ದ ಮೈಸೂರು ಜಿಪಂ ಸಿಇಒ ಪಿ.ಕೆ.ಮಿಶ್ರಾ ಅವರನ್ನು ರಾಜ್ಯ ಸರ್ಕಾರ ವರ್ಗಾ ಯಿಸಿ, ಜಿಪಂ ಸಿಇಒ ಜವಾಬ್ದಾರಿಯನ್ನುಅಂದಿನ  ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಅವರಿಗೆ ಹೆಚ್ಚುವರಿಯಾಗಿ ವಹಿಸಿತ್ತು.
ವರ್ಗಾವಣೆ ತಡೆಗೆ ಪಿಡಿಓ ಸಂಘ ಆಗ್ರಹ :
ಅತ್ಯಂತ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿಪಂ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ಕೆಟ್ಟ ಪದಗಳಿಂದ ನಿಂದಿಸುತ್ತಿರುವುದು ಸರಿಯಲ್ಲ. ಮಿಶ್ರಾ ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡಿರುವ, ಅವರ ಮಾನವೀಯ ಗುಣಗಳನ್ನು ಹತ್ತಿರದಿಂದ ನೋಡಿರುವ ನಮ್ಮ ಇಲಾಖೆಯ ಎಲ್ಲಾ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಈ ನಿಂದನೆ ತುಂಬಾ ನೋವುಂಟು ಮಾಡಿದೆ ಎಂದು ಸಂಘ ಬೇಸರ ವ್ಯಕ್ತಪಡಿಸಿ,  ಏಕಾಏಕಿಯಾಗಿ ಒಬ್ಬ ನಿಷ್ಟಾವಂತ, ದಕ್ಷ ಹಾಗೂ ಪ್ರಾಮಾಣಿಕ ವ್ಯಕ್ತಿಯ ತೇಜೋವಧೆ ಮಾಡುವುದು ಸರಿಯಲ್ಲ. ಸರ್ಕಾರದ ಆದೇಶ ಪಾಲಿಸಿ, ಇಲಾಖೆಯನ್ನು ಪ್ರಗತಿಯತ್ತ ಕೊಂಡೊಯ್ಯಲು ಹಗಲು ರಾತ್ರಿ ಶ್ರಮಿಸುತ್ತಿರುವ ಸಿಇಒ ಅಂತಹ ಅಧಿಕಾರಿಗೆ ಅವಮಾನ ಮಾಡುತ್ತಿರುವುದು ಸರಿಯಲ್ಲ ಎಂದಿದ್ದರು.
key words: THO, MYSORE, ZP, CEO, Prashanth Kumar Mishra, clean, chit
summary:
The court has given a clean chit to IAS officer Prashanth Kumar Mishra, who was the Chief Executive Officer of Mysuru Zilla Panchayat, in connection with the suicide of Nanjangud Taluk Health Officer Dr. S.R. Nagendra.
Following this, a case of abetment to suicide was registered against ZP CEO Prashanth Kumar Mishra at Alanahalli Police Station in Mysuru. The police investigated the case and later submitted a “B-report”.
ಟಿಎಚ್ಒ ನಾಗೇಂದ್ರ ಆತ್ಮಹತ್ಯೆ ಕೇಸ್: ವಾರದೊಳಗೆ ತನಿಖಾ ವರದಿ ನೀಡುವಂತೆ ಸೂಚನೆ
ಮೈಸೂರು, ಆಗಸ್ಟ್, 25, 2020(www.justkannada.in) ; ನಂಜನಗೂಡು ಟಿಎಚ್ಒ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದೊಳಗೆ ತನಿಖಾ ವರದಿ ನೀಡುವಂತೆ ಸರಕಾರ ಪ್ರಾದೇಶಿಕ ಆಯುಕ್ತ ಜೆ.ಸಿ.ಪ್ರಕಾಶ್ ಗೆ ಸೂಚನೆ ನೀಡಿದೆ.
ಪ್ರಾದೇಶಿಕ ಆಯುಕ್ತ ಜೆ.ಸಿ.ಪ್ರಕಾಶ್ ಅವರು ನಾಗೇಂದ್ರ ಆತ್ಮಹತ್ಯೆ ಸಂಬಂಧಿಸಿದಂತೆ ತನಿಖಾ ಆದೇಶ ಸ್ವೀಕರಿಸಿ, ನೆನ್ನೆಯಿಂದ ತನಿಖೆ ಆರಂಭಿಸಿದ್ದಾರೆ. ಈ ಬಗ್ಗೆ ನಿನ್ನೆ ಮಾತನಾಡಿದ್ದ ಪ್ರಾದೇಶಿಕ ಆಯುಕ್ತ ಜೆ.ಸಿ.ಪ್ರಕಾಶ್, ತನಿಖೆಗೆ ಆದೇಶ ಬಂದರೇ ಒಂದು ವಾರದೊಳಗೆ ತನಿಖೆ ಸಂಪೂರ್ಣಗೊಳಿಸುವುದಾಗಿ ವಿಶ್ವಾಸವ್ಯಕ್ತಪಡಿಸಿದ್ದರು.
Key words ; Investigation-THO-Nagendra’s-suicide-week-Instruct-Regional-Commissioner-issue-report
ನಂಜನಗೂಡು ಪ್ರಬಾರ ಟಿಎಚ್ಒ ಆಗಿ ಈಶ್ವರ್ ನೇಮಕ
ಮೈಸೂರು, ಆಗಸ್ಟ್, 24, 2020(www.justkannada.in) ; ನಂಜನಗೂಡು ಟಿಎಚ್ಒ ನಾಗೇಂದ್ರ ಆತ್ಮಹತ್ಯೆ ಹಿನ್ನೆಲೆಯಲ್ಲಿ ತೆರವಾದ ಆ ಜಾಗಕ್ಕೆ ಪ್ರಬಾರ ಟಿಎಚ್ಒ ಆಗಿ ಈಶ್ವರ್ ಅವರನ್ನು ನೇಮಿಸಲಾಗಿದೆ.
ನಾಗೇಂದ್ರ ಆತ್ಮಹತ್ಯೆ ಹಿನ್ನೆಲೆಯಲ್ಲಿ ತೆರವಾದ ಜಾಗಕ್ಕೆ ಮೂಗೂರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈಶ್ವರ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಕಳೆದ ನಾಲ್ಕೈದು ದಿನಗಳ ಹಿಂದೆ ನಂಜನಗೂಡು ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗೇಂದ್ರ ಅವರು ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದರು.
ಈ ನಡುವೆ ಇವರ ಸಾವಿಗೆ ಮೇಲಾಧಿಕಾರಿಗಳ ಕಿರುಕುಳ ಕಾರಣ ಎಂಬ ಆರೋಪ ಕೇಳಿ ಬಂದಿತ್ತು. ಮೈಸೂರು ಜಿ.ಪಂ ಸಿಇಒ ಅವರನ್ನ ವರ್ಗಾವಣೆ ಮಾಡುವಂತೆ ವೈದ್ಯರು ಮುಷ್ಕರ ನಡೆಸಿದ್ದರು.
Key words ; Ishwar-appointed-Nanjangud-THO
ಟಿಎಚ್ಒ ನಾಗೇಂದ್ರ ಆತ್ಮಹತ್ಯೆ 4ನೇ ದಿನದ ಹೋರಾಟಕ್ಕೆ ಮೈಸೂರು ವೈದ್ಯರು ಸಜ್ಜು
ಮೈಸೂರು,ಆಗಸ್ಟ್, 23, 2020 (www.justkannada.in):  ಟಿಎಚ್‌ಒ ಡಾ.ಎಸ್.ಆರ್.ನಾಗೇಂದ್ರ ಆತ್ಮಹತ್ಯೆ ಪ್ರಕರಣ. ನಾಲ್ಕನೇ ದಿನದ ಹೋರಾಟಕ್ಕೆ ಮೈಸೂರಿನ ವೈದ್ಯರು ಸಜ್ಜಾಗುತ್ತಿದ್ದಾರೆ.
ಮೈಸೂರು ಡಿಎಚ್‌ಒ ಕಚೇರಿ ಆವರಣದಲ್ಲಿ ಪ್ರತಿಭಟನೆಗೆ ಸಜ್ಜಾಗುತ್ತಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಸೂಚನೆಗೆ ಮೈಸೂರಿನ ವೈದ್ಯ ಸಂಘದ ಸದಸ್ಯರು ಕಾಯುತ್ತಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮೈಸೂರು ಸರ್ಕಾರಿ ವೈದ್ಯರ ಸಂಘದ ಜಿಲ್ಲಾಧ್ಯಕ್ಷ ಡಾ.ದೇವಿ ಆನಂದ್ ಇತರೆ ವೈದ್ಯರ ಚರ್ಚೆ ನಡೆಸುತ್ತಿದ್ದಾರೆ.
ಡಾ.ನಾಗೇಂದ್ರ ಕುಟುಂಬ ತಟಸ್ಥ : ನಂಜನಗೂಡು ಟಿಎಚ್‌ಒ ಆತ್ಮಹತ್ಯೆ ಪ್ರಕರಣ ಸಂಬಂಧಿಸದಂತೆ ಡಾ.ನಾಗೇಂದ್ರ ಕುಟುಂಬಸ್ಥರ ತಟಸ್ಥ ನಿಲುವು ತಾಳಿದ್ದು, ನಾಗೇಂದ್ರ ಕುಟುಂಬ ಸದಸ್ಯರು ವೈದ್ಯರ ಪ್ರತಿಭಟನೆಯಲ್ಲಿ ಭಾಗಿಯಾಗಿಲ್ಲ .
ಮೊದಲ ದಿನ ಪಾರ್ಥಿವ ಶರೀರದ ಜತೆ ಇದ್ದ ನಾಗೇಂದ್ರ ಕುಟುಂಬಸ್ಥರು. ನಂತರ ಮೂರು ದಿನಗಳಿಂದಲೂ ಪ್ರತಿಭಟನಾ ಸ್ಥಳಕ್ಕೆ ಸುಳಿದಿಲ್ಲ. ವೈದ್ಯರ ಮುಷ್ಕರದ ಬಗ್ಗೆ ಯಾವುದೇ ಸ್ಪಷ್ಟ ನಿಲುವನ್ನು ಕುಟುಂಬಸ್ಥರು ತಿಳಿಸಿಲ್ಲ.
ನಗರದ ಲಲಿತ ಮಹಲ್ ಬಡಾವಣೆಯಲ್ಲಿರುವ ನಿವಾಸದಲ್ಲಿದ್ದರೂ, ನಾಗೇಂದ್ರ ಪತ್ನಿ, ತಂದೆಯಿಂದಲೂ ಯಾವುದೇ ಪ್ರತಿಕ್ರಿಯೆ ಇಲ್ಲ‌. ಯಾರನ್ನೂ ಭೇಟಿ ಮಾಡಿಲ್ಲ. ಫೋನ್ ಕರೆಗಳನ್ನು ಸ್ವೀಕರಿಸದೆ ತಟಸ್ಥವಾಗಿ ಉಳಿದಿರುವುದು ಕಂಡು ಬಂದಿದೆ.
Key words :THO-Nagendra-suicide-Mysore-doctors-outfit–4th day-fight
ಸಿಎಂ ಅವರೇ ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದು ಬೇಡವೇ..? ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಪ್ರಶ್ನೆ…
ಬೆಂಗಳೂರು,ಆ,22,2020(www.justkannada.in):  ನಂಜನಗೂಡು ಟಿಹೆಚ್ಓ ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ಧರಾಮಯ್ಯ ಟ್ವಿಟ್ಟರ್ ನಲ್ಲಿ ರಾಜ್ಯ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿದ್ದಾರೆ.
ಪ್ರಕರಣ ಸಂಬಂಧ ಟ್ವೀಟ್ ಮಾಡಿರುವ  ಮಾಜಿ ಸಿಎಂ ಸಿದ್ದರಾಮಯ್ಯ, ನಮ್ಮ ಆಡಳಿತ ಕಾಲದಲ್ಲಿ ಸಹಜ ಆತ್ಮಹತ್ಯೆಗಳನ್ನು ಹತ್ಯೆ ಎಂದು ಬಿಜೆಪಿ ನಾಯಕರು ಅಪಪ್ರಚಾರ ಮಾಡಿದ್ದರು. ಆದರೆ ಈಗ ಕೊರೊನಾ ವಾರಿಯರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟಿಹೆಚ್ಓ ನಾಗೇಂದ್ರ ಆತ್ಮಹತ್ಯೆಗೆ ಕಾರಣವಾದ ಅಧಿಕಾರಿಗಳ ಬಗ್ಗೆ ಸರ್ಕಾರ ಬಾಯಿ ಬಿಚ್ಚುತ್ತಿಲ್ಲ. ಸಿಎಂ ಅವರೇ ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದು ಬೇಡವೇ..? ಎಂದು ಪ್ರಶ್ನಿಸಿದ್ದಾರೆ.
ಇನ್ನು ನಂಜನಗೂಡು ಟಿಹೆಚ್ಓ ನಾಗೇಂದ್ರ ಆತ್ಮಹತ್ಯೆ ವಿಷಾದನೀಯ‌. ಈ ಬಗ್ಗೆ ಸರ್ಕಾರ ಕೂಡಲೇ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಅಪರಾಧಿಗಳನ್ನು ಪತ್ತೆಹಚ್ಚಿ ಜೈಲಿಗೆ ಹಾಕಬೇಕು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
Key words: THO- suciude –case-CBI – Former CM- Siddaramaiah – Twitter.
ವೈದ್ಯಾಧಿಕಾರಿ ಸಾವಿಗೆ ದುಡ್ಡು ಪರಿಹಾರವಲ್ಲ: ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ-ಡಿ.ಕೆ ಶಿವಕುಮಾರ್ ಆಗ್ರಹ…
ಬೆಂಗಳೂರು,ಆ,21,2020(www.justkannada.in):  ಆತ್ಮಹತ್ಯೆ ಮಾಡಿಕೊಂಡ ವೈದ್ಯಾಧಿಕಾರಿ ಕುಟುಂಬಕ್ಕೆ ಸರ್ಕಾರ 50 ಲಕ್ಷ ರೂಪಾಯಿ ದುಡ್ಡು ನೀಡುವುದರಿಂದ ಅವರಿಗೆ ನ್ಯಾಯ ಸಿಗುವುದಿಲ್ಲ. ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವೈದ್ಯಾಧಿಕಾರಿಗಳ ಸಾವಿಗೆ ನೀವು 50 ಲಕ್ಷನಾದ್ರೂ ಕೊಡಿ, 1 ಕೋಟಿಯಾದ್ರೂ ಕೊಡಿ. ಅವರ ಕುಟುಂಬದವರು ನಿಮ್ಮ ದುಡ್ಡು ಕಾಯ್ತಾ ಕೂತಿಲ್ಲ. ವೈದ್ಯಾಧಿಕಾರಿ ಯಾಕೆ ಆತ್ಮಹತ್ಯೆ ಮಾಡಿಕೊಂಡರು? ಅದಕ್ಕೆ ಕಾರಣರು ಯಾರು? ಅವರ ವಿರುದ್ಧ ಯಾವ ಕ್ರಮ ಕೈಗೊಂಡಿರಿ? ಎಂಬುದು ಮುಖ್ಯ. ವ್ಯಕ್ತಿ ಸತ್ತ ಮೇಲೆ ಇವರೇನು ಕೊಡುವುದು. ಆ ಹೆಣ್ಣುಮಗಳು ಇವರ ಬಳಿ ದುಡ್ಡುಕೊಡಿ ಅಂತಾ ಕೇಳಿದರಾ? ದುಡ್ಡು ಪರಿಹಾರವಲ್ಲ. ಅವರಿಗೆ ನ್ಯಾಯ ಒದಗಿಸಿಕೊಡಬೇಕು. ಅವರ ಈ ಸ್ಥಿತಿಗೆ ಕಾರಣವಾದರಿಗೆ ಶಿಕ್ಷೆ ಆಗಬೇಕು. ಮಾಧ್ಯಮಗಳು ಆಡಿಯೋ ಪ್ರಸಾರ ಮಾಡಿದ ಮೇಲೂ ಮುಖ್ಯಮಂತ್ರಿಗಳು ಯಾಕೆ ಯೋಚಿಸುತ್ತಿದ್ದಾರೆ..? ಎಂದು ಪ್ರಶ್ನಿಸಿದರು.
ಕೊರೋನಾ ಸಮಯದಲ್ಲಿ ವೈದ್ಯರು ತಮ್ಮ ಪ್ರಾಣವನ್ನು ಒತ್ತೆ ಇಟ್ಟು ಕೆಲಸ ಮಾಡುತ್ತಿದ್ದಾರೆ. ಅವರ ಸೇವೆಗೆ ಎಷ್ಟು ಗೌರವ ಕೊಟ್ಟರೂ ಸಾಲದು. ಪ್ರತಿ ಸಂದರ್ಭದಲ್ಲೂ ಅವರಿಗೆ ಧೈರ್ಯ ತುಂಬಬೇಕು ಅಂತಾ ಹೇಳುತ್ತಾ ಬಂದಿದ್ದೇನೆ. ನಾನು ವಿಕ್ಟೋರಿಯಾ ಆಸ್ಪತ್ರೆಗೆ ಹೋದಾಗ, ಕೆಲವು ಬಿಜೆಪಿ ನಾಯಕರು ಲೇವಡಿ ಮಾಡಿದರು. ನಾನು ಮಂತ್ರಿಯಲ್ಲ, ಸರ್ಕಾರದಲ್ಲಿಲ್ಲ. ಒಂದು ಪಕ್ಷದ ಜವಾಬ್ದಾರಿ ಸ್ಥಾನದಲ್ಲಿದ್ದು, ನಮ್ಮ ವೈದ್ಯರು, ಆರೋಗ್ಯ ಸಿಬ್ಬಂದಿಗೆ ರಕ್ಷಣೆ ನೀಡಿ, ಅವರ ಧ್ವನಿಯಾಗಿ ಕೆಲಸ ಮಾಡಬೇಕು ಅಂತಾ ಹೋಗಿದ್ದೆ. ಆದರೆ ಆಡಳಿತ ಪಕ್ಷದವರು ಟೀಕೆ ಮಾಡುತ್ತಿದ್ದಾರೆ, ಮಾಡಲಿ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.
ತನ್ನ ಪತಿಯನ್ನು ಕಳೆದುಕೊಂಡ ಹೆಣ್ಣುಮಗಳು ಒಂದು ಹೇಳಿಕೆ ನೀಡಿದ್ದಾರೆ. ತಪ್ಪಿತಸ್ಥರನ್ನು ಬಂಧಿಸಲು ಸರ್ಕಾರಕ್ಕೆ ಇನ್ನು ಎಷ್ಟು ಸಮಯಬೇಕು? ಸಚಿವರುಗಳು ಡ್ಯಾಮೇಜ್ ಕಂಟ್ರೋಲ್ ಮಾಡಲು ಬೆಳಗ್ಗೆಯಿಂದ ಸಂಜೆವರೆಗೂ ನಿಂತುಕೊಂಡಿದ್ದಾರೆ. ನೀವು ಪ್ರಕರಣ ಮುಚ್ಚಿಹಾಕಲು ಯಾಕೆ ಪ್ರಯತ್ನಿಸುತ್ತಿದ್ದೀರಿ? ಆರೋಗ್ಯ ಇಲಾಖೆಯ ಸ್ಥಿತಿ ಬಗ್ಗೆ ಮಾಧ್ಯಮಗಳು ವಿಸ್ತಾರವಾಗಿ ವರದಿ ಮಾಡುತ್ತಿವೆ. ಆ ಮಾಧ್ಯಮಗಳು ನಮ್ಮ ಪಕ್ಷದವರಾ? ಅಲ್ಲ, ಜನರ ಧ್ವನಿ. ಅವರಿಗೆ ಸಿಕ್ಕ ವಾಸ್ತಾವಂಶವನ್ನು ಜನರಿಗೆ ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳಿಗೆ ಒತ್ತಾಯಿಸುತ್ತೇನೆ. ಆ ವೈದ್ಯ ಆರು ತಿಂಗಳಿಂದ ಮನೆಯಿಂದ ಹೊರಗಿದ್ದು, ಕೆಲಸ ಮಾಡಿದ್ದರೂ, ಅವರ ಮೇಲೆ ದೌರ್ಜನ್ಯವಾಗಿದೆ. ಅವರಿಗೆ ಬೈದು, ಆತ ಆತ್ಮಹತ್ಯೆ ಮಾಡಿಕೊಳ್ಳಲು ಕೆಲವರು ಕಾರಣರಾಗಿದ್ದರೂ, ನೀವು ಸುಮ್ಮನೆ ಇದ್ದೀರಿ ಎಂದರೆ ನಿಮ್ಮ ಸರ್ಕಾರ ಯಾವ ದಿಕ್ಕಿನಲ್ಲಿ ಕೆಲಸ ಮಾಡುತ್ತಿದೆ ಎಂದು ಗೊತ್ತಾಗುತ್ತದೆ ಎಂದು ಡಿ.ಕೆ ಶಿವಕುಮಾರ್ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಇವರಿಗೆ ಸರ್ಕಾರ ನಡೆಸಲು ಗೊತ್ತಿಲ್ಲ, ಅಧಿಕಾರಿಗಳನ್ನು ಬಳಸಿಕೊಳ್ಳಲೂ ಗೊತ್ತಿಲ್ಲ….
ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ವೈದ್ಯರನ್ನು ಎಷ್ಟು ಕಠಿಣವಾಗಿ ನಡೆಸಿಕೊಳ್ಳುತ್ತಿದ್ದೀರಿ ಎಂಬುದಕ್ಕೆ ಇದೊಂದು ಸಣ್ಣ ಸಾಕ್ಷಿ. ಬೇರೆ ಪ್ರಕರಣಗಳಲ್ಲಿ ಸುಮೋಟೋ ಮೂಲಕ ತನಿಖೆ ನಡೆಸುವ ನೀವು, ಈ ವಿಚಾರದಲ್ಲಿ ಯಾಕೆ ಮೌನ ವಹಿಸಿದ್ದೀರಿ..?
ಸರ್ಕಾರ ಅಧಿವೇಶನ ಕರೆದಿದ್ದು, ಈ ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತೇನೆ ಅಂತ ಹೇಳಿದೆ. ಆದರೆ ಜನರನ್ನು ಉಳಿಸುವ ಕೆಲಸ ಮಾಡುತ್ತಿಲ್ಲ. ದೆಹಲಿ ಮಾದರಿ ಕ್ರಮ ಅಂತಿದ್ದರಲ್ಲಾ, ಇದೇನಾ? ಸರ್ಕಾರ ಈ ವಿಚಾರದಲ್ಲಿ ವಿಳಂಬ ಧೋರಣೆಗೆ ಶರಣಾಗಿದೆ. ಇವರಿಗೆ ಸರ್ಕಾರ ನಡೆಸಲು ಗೊತ್ತಿಲ್ಲ, ಅಧಿಕಾರಿಗಳನ್ನು ಬಳಸಿಕೊಳ್ಳಲೂ ಗೊತ್ತಿಲ್ಲ ಎಂದು ಡಿ.ಕೆ ಶಿವಕುಮಾರ್ ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್ ಹೇಳಿದ್ದಿಷ್ಟು….
ಯಾರು ಏನು ಬೇಕಾದರೂ ಹೇಳಲಿ…
ನಾನು ಪೊಲೀಸರಿಗೆ ಮನವಿಯನ್ನೂ ಮಾಡಿದ್ದೇನೆ. ಅಧಿಕಾರಿಗಳ ಪ್ರಾಮಾಣಿಕತೆ ಬಗ್ಗೆ ನನಗೆ ಅರಿವಿದೆ. ಅವರು ಕ್ಲೀನ್ ರೆಕಾರ್ಡ್ ಹೊಂದಿದ್ದಾರೆ. ಮಂತ್ರಿಗಳು ಇಂತವರಿಗೆ ನೋಟೀಸ್ ಕೊಡು ಅಂತಾ ಹೇಳುತ್ತಿದ್ದಾರೆ. ಹಾಗೆ ಹೇಳಲು ಅವರಿಗೆ ಸಂವಿಧಾನದಲ್ಲಿ ಯಾವ ಅಧಿಕಾರವಿದೆ? ಇಂತಹ ಹೇಳಿಕೆಯಿಂದ ಅವರು ಪ್ರಭಾವ ಬೀರುತ್ತಿದ್ದಾರೆ. ತನಿಖೆ ಮಾಡಲಿ, ತಪ್ಪು ಮಾಡಿದ್ದರೆ ಅವರಿಗೆ ಯಾವ ಶಿಕ್ಷೆ ಬೇಕಾದರೂ ನೀಡಲಿ. ನಮ್ಮ ಅಭ್ಯಂತರವಿಲ್ಲ.
ಮೊದಲ ದಿನದಿಂದ ಇವತ್ತಿನವರೆಗೂ ನಾವು ಗಲಭೆಯನ್ನು ಖಂಡಿಸುತ್ತಿದ್ದೇವೆ. ನಾವು ಯಾರಿಗೂ ಬೆದರಿಕೆ ಹಾಕುತ್ತಿಲ್ಲ. ಆದರೆ ಸರ್ಕಾರ ಅವರಿಗೆ ಬೆದರಿಕೆ ಹಾಕುತ್ತಿದೆ.
ಕೊರೋನಾ ಸಮಯದಲ್ಲಿ ಮಂತ್ರಿಗಳು, ಬಿಜೆಪಿ ಶಾಸಕರು, ಸಂಸದರು ಕೋಮು ಗಲಭೆಗೆ ಪ್ರೇರಣೆ ನೀಡುವ ಹೇಳಿಕೆ ನೀಡಿದ್ದರು. ಅದನ್ನು ತಡೆಯಲು ಮುಖ್ಯಮಂತ್ರಿಗಳು ಯಾವುದಾದರೂ ಕ್ರಮ ಕೈಗೊಂಡರಾ? ಈ ಗಲಭೆ ಬಗ್ಗೆ ಹೊರಗಿನ ಜನ ಗಮನಿಸುತ್ತಿದ್ದಾರೆ. ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಆಹ್ವಾನ ನೀಡುತ್ತಿದ್ದೀರಿ. ಇದಕ್ಕೆ ಈ ಬೆಳವಣಿಗೆಗಳು ಅಡ್ಡಿಯಾಗುತ್ತವೆ. ಶಿವಮೊಗ್ಗದಲ್ಲಿ ಕೂತು ಒಬ್ಬ ಮಂತ್ರಿ ಮಾತನಾಡಿದರೆ, ಮತ್ತೊಬ್ಬರು ಚಿಕ್ಕಮಗಳೂರಿನಲ್ಲಿ, ಇನ್ನೊಬ್ಬರು ಬೆಂಗಳೂರಿನಲ್ಲಿ… ಹೀಗೆ ಒಂದೊಂದು ಕಡೆಯಿಂದಲೂ ಹೇಳಿಕೆ ಬರುತ್ತಿವೆ. ಇವರಿಗೆ ಲಂಗು ಲಗಾಮು ಇಲ್ವಾ?
ಸರ್ಕಾರ, ಪೊಲೀಸ್ ಇಲಾಖೆ ಹಾಗೂ ಗುಪ್ತಚರ ದಳದ ವೈಫಲ್ಯ ಮುಚ್ಚಿಕೊಳ್ಳಲು ಗಲಭೆಗೆ ಕಾಂಗ್ರೆಸ್ ಆಂತರಿಕ ಬಿಕ್ಕಟ್ಟು ಕಾರಣ ಎಂದು ದಾರಿ ತಪ್ಪಿಸಬೇಡಿ. ದೂರು ನೀಡುವಾಗ ಯಾರು, ಎಲ್ಲಿದ್ದರೂ ಎಲ್ಲವೂ ನನಗೆ ಗೊತ್ತಿದೆ. ತನಿಖೆ ಪಾಡಿಗೆ ತನಿಖೆ ನಡೆಯಲಿ. ಅದನ್ನು ಸೂಕ್ತ ಸಮಯದಲ್ಲಿ, ಸೂಕ್ತ ವೇದಿಕೆಯಲ್ಲಿ ಮಾತನಾಡುತ್ತೇನೆ. ಮಂತ್ರಿಗಳು ಪೊಲೀಸ್ ಅಧಿಕಾರಿಗಳಿಗೆ ಸ್ವತಂತ್ರವಾಗಿ ತನಿಖೆ ನಡೆಸಲು ಬಿಡಬೇಕು. ನೀವ್ಯಾಕೆ ದಾರಿ ತಪ್ಪಿಸುತ್ತೀರಿ?
ಮುಖ್ಯಮಂತ್ರಿಗಳು ತಾವು ಆಡಿದ ಮಾತಿಗೆ ತಕ್ಕಂತೆ ನಡೆದುಕೊಳ್ಳುತ್ತಿದ್ದಾರಾ? ಯಾವ ಸರ್ಕಾರವೂ ಶಾಶ್ವತ ಅಲ್ಲ. ಇವತ್ತು ಇವರಿದ್ದರೆ, ನಾಳೆ ಮತ್ತೊಬ್ಬರು ಬರುತ್ತಾರೆ. ಆದರೆ ಅಧಿಕಾರಿಗಳು ಶಾಶ್ವತ. ಅಧಿಕಾರಿಗಳು ಹರಕೆಯ ಕುರಿಯಾಗಬಾರದು. ನೊಟೀಸ್ ಕೊಟ್ಟು ಅವರನ್ನ ಕರೆಸಿ ಥ್ರೆಟ್ ಮಾಡ್ತಿದ್ದಾರೆ.
ನನ್ನ ಫೋನ್ ಟ್ಯಾಪ್ ಮಾಡಲಾಗ್ತಿದೆ:
ನಿನ್ನೆ, ಮೊನ್ನೆವರೆಗೂ ನನ್ನ ಫೋನ್ ಸರಿಯಾಗಿತ್ತು. ಈಗ ಕರೆ ಸರಿಯಾಗಿ ಬರ್ತಿಲ್ಲ. ಈ ಬಗ್ಗೆ ಸಂಬಂಧಪಟ್ಟವರಿಗೆ ದೂರು ನೀಡುತ್ತೇನೆ. ನನ್ನ ಫೋನ್ ಟ್ಯಾಪ್ ಆಗುತ್ತಿದೆ ಎಂದೆನಿಸುತ್ತಿದೆ. ಸಾಕ್ಷ್ಯ ಇಲ್ಲದೆ ಆರೋಪ ಮಾಡುವುದಿಲ್ಲ. ನಮ್ಮ ಸುದರ್ಶನ್ ಕಾಲ್ ಮಾಡಿದ್ದಾರೆ, ಆದರೆ ಕಾಲ್ ಬರ್ತಿಲ್ಲ.
ಉತ್ತರ ಕರ್ನಾಟಕ ಪ್ರವಾಸ ಮಾಡಬೇಕು:
ಪ್ರವಾಹ ಪೀಡಿತ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿ ಪರಿಶೀಲಿಸಬೇಕಿದೆ. ಹೀಗಾಗಿ ಕಳೆದ ವರ್ಷ ಏನಾಗಿತ್ತು? ಸರ್ಕಾರ ಯಾವ ಭರವಸೆ ನೀಡಿತ್ತು? ಕೊಟ್ಟ ಭರವಸೆಯಲ್ಲಿ ಎಷ್ಟು ಈಡೇರಿಸಿದೆ ಎಂಬುದನ್ನು ನೋಡಬೇಕು.ಸರ್ಕಾರ ಪರಿಸ್ಥಿತಿ ನಿಭಾಯಿಸಲು ವಿಫಲವಾಗಿದೆ. ನಾಲ್ಕು ತಿಂಗಳಿಂದ ವೃದ್ಧರಿಗೆ ನೀಡುವ ಪಿಂಚಣಿಯನ್ನೇ ಕೊಟ್ಟಿಲ್ಲ. ನೇಕಾರರು ರಾಜ್ಯದ ವಿವಿಧ ಭಾಗಗಳಿಂದ ದೂರು ನೀಡುತ್ತಿದ್ದಾರೆ. ನಮ್ಮ ಮಂತ್ರಿಗಳು ನಮ್ಮಲ್ಲಿ ತೀವ್ರ ನೆರೆ ಪರಿಸ್ಥಿತಿ ಇಲ್ಲ ಅಂತಿದ್ದಾರೆ. ಹಾಗಾದ್ರೆ ಮಾಧ್ಯಮಗಳು ತೋರಿಸಿದ್ದೇನು?
ಮಂತ್ರಿಗಳಾದವರು ಕಷ್ಟದ ಸಮಯದಲ್ಲಿ ಜನರನ್ನು ಭೇಟಿ ಮಾಡಿ ಅವರಿಗೆ ಧೈರ್ಯ ತುಂಬ ಬೇಕು.  ಅಧಿಕಾರಿಗಳಿಗೆ ನಿರ್ದಿಷ್ಟ ಸೂಚನೆ ನೀಡಬೇಕು. ಅದನ್ನು ಬಿಟ್ಟು ಹಬ್ಬ ಇದ್ದಾಗ ಹೋಗುವುದಲ್ಲ.
ರಾಜ್ಯದ ಜನತೆಗೆ ಶುಭಾಶಯಗಳು:
ರಾಜ್ಯದ ಜನತೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಗೌರಿ ಹಾಗೂ ಗಣೇಶ ಹಬ್ಬದ ಶುಭಾಶಯಗಳು. ಈ ವರ್ಷ ಬಹಳ ಕಷ್ಟದ ದಿನಗಳನ್ನು ನಾವು ಎದುರಿಸಿದ್ದೇವೆ. ತಾಯಿ ಗೌರಿ ಹಾಗೂ ವಿಘ್ನ ನಿವಾರಕ ವಿಘ್ನೇಶ್ವರ ನಾಡಿನ ಜನತೆಗೆ ನೆಮ್ಮದಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಸರ್ಕಾರ ಏನೇ ಮಾನದಂಡ ಹಾಕಿದ್ದರೂ ಹಬ್ಬದ ಆಚರಣೆ ವೇಳೆ ಆಡಂಬರ ಬೇಡ. ಆದಷ್ಟು ಅಂತರ ಕಾಯ್ದುಕೊಳ್ಳಿ ಎಂದು ನಮ್ಮ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಮನವಿ ಮಾಡಿಕೊಳ್ಳುತ್ತೇನೆ.
key words: Death –THO-  DK Shivakumar –urges-CM BS yeddyurappa-action