three years Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಮೂರು ವರ್ಷದಲ್ಲಿ KKRDB ಗೆ 13000 ಕೋಟಿ ರೂ. ಅನುದಾನ ನೀಡಿ ದಾಖಲೆ: ಸಿಎಂ ಸಿದ್ದರಾಮಯ್ಯ
ಯಾದಗಿರಿ ಜೂನ್, 14,2025 (www.justkannada.in): ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಅಭಿವೃದ್ಧಿಗೆ ಮೂರು ವರ್ಷದಲ್ಲಿ 13000 ಕೋಟಿ ರೂಪಾಯಿ ಅನುದಾನ ನೀಡಿದ್ದೇನೆ ಎಂದು ಸಿ.ಎಂ ಸಿದ್ದರಾಮಯ್ಯ ನುಡಿದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಆಯೋಜಿಸಿರುವ “ಆರೋಗ್ಯ ಆವಿಷ್ಕಾರ” ಯೋಜನೆಯ ಅಡಿಯಲ್ಲಿ 440.63 ಕೋಟಿ ಮೊತ್ತದ ಕಾಮಗಾರಿಗಳನ್ನು ಉದ್ಘಾಟಿಸಿ, ಬಂಜಾರ ಭವನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ವರ್ಷಕ್ಕೆ 5000 ಕೋಟಿ KKRDB ಗೆ ಕೊಡುವುದಾಗಿ ನಾವು ಚುನಾವಣೆ ವೇಳೆ ಭರವಸೆ ನೀಡಿದ್ದೆವು. ಕಾಂಗ್ರೆಸ್ ಕೊಟ್ಟ ನಮ್ಮ ಭರವಸೆಯಂತೆ ಇಲ್ಲಿಯವರೆಗೂ 13000 ಕೋಟಿ ರೂಪಾಯಿ ಹಣ ನೀಡಿದ್ದೇವೆ. ಇಲ್ಲಿಯವರೆಗೂ 5300 ಕೋಟಿ ಮೊತ್ತ ಖರ್ಚಾಗಿದ್ದು ಕಾಮಗಾರಿ ಜನರಿಗೆ ತಲುಪಿದೆ ಎಂದರು.

KKRDB ಗೆ ಕೊಡುವ ಈ ಅನುದಾನದ ಹೊರತಾಗಿ ಸರ್ಕಾರ ಇಲಾಖಾವಾರು ಕಾರ್ಯಕ್ರಮಗಳಿಗಾಗಿ ಅನುದಾನ ನೀಡುತ್ತಲೇ ಇದೆ ಎಂದರು.

ನಂಜುಂಡಪ್ಪ ಅವರ ವರದಿಯ ಆಶಯಗಳನ್ನು ನಮ್ಮ ಸರ್ಕಾರ ಈಡೇರಿಸುತ್ತಿದೆ. ಆರೋಗ್ಯ, ಶಿಕ್ಷಣ, ಉದ್ಯೋಗದಲ್ಲಿ ಕಲ್ಯಾಣ ಕರ್ನಾಟಕ ಪ್ರಗತಿ ಸಾಧಿಸುವ ಜೊತೆಗೆ ಮೂಲಭೂತ ಸೌಕರ್ಯಗಳ ಈಡೇರಿಕೆಗೆ ಹಣ ವಿನಿಯೋಗ ಮಾಡಲು ಸೂಚನೆ ನೀಡಿದ್ದೇನೆ. ಇದರ ಪ್ರಕಾರ ಅಕ್ಷರ ಆವಿಷ್ಕಾರ ನಡೆದು ಇಂದು 440.63 ಕೋಟಿ ವೆಚ್ಚದ ಆರೋಗ್ಯ ಆವಿಷ್ಕಾರ ಕಾರ್ಯಕ್ರಮ ಇಂದು ಉದ್ಘಾಟನೆ ಮಾಡಿದ್ದೇವೆ. ಕೊಲ್ಲೂರು ಮಲ್ಲಪ್ಪ ಅವರ ಸ್ಮಾರಕಕ್ಕೆ ಪುಕ್ಕಟೆಯಾಗಿ ಜಾಗ ಕೊಟ್ಟಿದ್ದೇವೆ. ಮಲ್ಲಪ್ಪ ಅವರು ಕಲ್ಯಾಣ ಕರ್ನಾಟಕದ ಗಾಂಧಿ ಎಂದು ಕರೆಸಿಕೊಂಡಿದ್ದವರು.  ಸ್ವಾತಂತ್ರ್ಯ ಹೋರಾಟಗಾರರಾದ ಇವರ ಸ್ಮಾರಕ ಕೂಡಲೇ ಆಗಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

42 ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುವುದು, ಹೊಸ ಆಸ್ಪತ್ರೆಗಳ ನಿರ್ಮಾಣ ಆಗುತ್ತಿದೆ. ಈ ಭಾಗದ ಆರೋಗ್ಯ ಸವಲತ್ತು ವಿಸ್ತರಿಸಲು ಒಟ್ಟು 847 ಕೋಟಿ ಕೊಡಲು ಸರ್ಕಾರ ಯೋಜನೆ ರೂಪಿಸಿದೆ ಎಂದರು.

ರಾಜ್ಯದಲ್ಲಿ ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿ ಪರಿವಾರದ ಎಲ್ಲಾ ಸುಳ್ಳುಗಳಿಗೆ ಜನರೇ ಉತ್ತರ ನೀಡುತ್ತಿದ್ದಾರೆ. ಏಕೆಂದರೆ ನಾವು ಅಭಿವೃದ್ಧಿಗೆ ಕೊಟ್ಟಿರುವ ಹಣ  ರಾಜ್ಯದ ಜನರ ಮನೆ ಬಾಗಿಲಿಗೆ ತಲುಪಿದೆ ಎಂದರು.

ಬೆಲೆ ಏರಿಕೆಯ ಸೃಷ್ಟಿಕರ್ತ ಪ್ರಧಾನಿ ಮೋದಿ

ಬೆಲೆ ಏರಿಕೆಗೆ ಕಾರಣವಾಗಿರುವುದು ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ. ಮೋದಿ ಬರುವ ಮೊದಲು ಚಿನ್ನ, ಪೆಟ್ರೋಲ್, ಡೀಸೆಲ್, ಔಷಧ, ರಸಗೊಬ್ಬರ, ಅಡುಗೆ ಎಣ್ಣೆ, ಅಡುಗೆ ಅನಿಲದ ಬೆಲೆ ಎಷ್ಟಿತ್ತು ? ಮೋದಿ ಬಂದ ಬಳಿಕ ಎಷ್ಟು ಏರಿಕೆಯಾಗಿದೆ ನೋಡಿ. ಬೆಲೆ ಏರಿಕೆಯ ಸೃಷ್ಟಿಕರ್ತ ಪ್ರಧಾನಿ ಮೋದಿ ಎಂದರು.

ಸುಳ್ಳೇ ಬಿಜೆಪಿಯ ಮನೆ ದೇವರು. ಬಿಜೆಪಿಗೆ ಅಧಿಕಾರ ಇದ್ದಾಗಲೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಾಡಲಿಲ್ಲ. ಬಿಜೆಪಿ 371ಜೆ ಗೆ ವಿರುದ್ಧವಿತ್ತು. ಉಪ ಪ್ರಧಾನಿ ಆಗಿದ್ದ ಎಲ್.ಕೆ.ಅಡ್ವಾಣಿ ಅವರು 371ಜೆ ಜಾರಿ ಮಾಡುವುದಿಲ್ಲ ಎಂದು ಪತ್ರ ಬರೆದಿದ್ದರು. ಕೊನೆಗೆ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಖರ್ಗೆ, ಧರಂ‌ಸಿಂಗ್ ಅವರ ಹೋರಾಟಕ್ಕೆ ಮಾನ್ಯತೆ ನೀಡಿ 371ಜೆ ಜಾರಿ ಮಾಡಿದರು ಎಂದು ವಿವರಿಸಿದರು.

ನಾವು ಬಸವಣ್ಣನವರ ಆಶಯದಂತೆ ನುಡಿದಂತೆ ನಡೆಯುವರು. ನಾವು ಚುನಾವಣೆಯಲ್ಲಿ ಕೊಟ್ಟ ಭರವಸೆಗಳಲ್ಲಿ ಐದು ಗ್ಯಾರಂಟಿಗಳು ಸೇರಿ 200 ಭರವಸೆಗಳು ಈಡೇರಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಎಲ್ಲಾ ಭರವಸೆಗಳನ್ನೂ ಈಡೇರಿಸಿ ಸಮಗ್ರ ಕರ್ನಾಟಕದ ಅಭಿವೃದ್ಧಿ ಸಾಧಿಸಿ ತೋರಿಸುತ್ತೇವೆ ಎಂದರು.

ಜಿಎಸ್ ಟಿ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿರುವುದು ಆರ್ಥಿಕವಾಗಿ ರಾಜ್ಯ ಪ್ರಗತಿ ಪಥದಲ್ಲಿರುವುದಕ್ಕೆ ಸಾಕ್ಷಿ . ಕಲ್ಯಾಣ ಕರ್ನಾಟಕದ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಸಿಂಗ್ ಅವರು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಸಂವಿಧಾನ ತಿದ್ದುಪಡಿ ಮಾಡಿ 371 ಜೆ ಜಾರಿ ಮಾಡಿದರು. ಮಲ್ಲಿಕಾರ್ಜುನ ಖರ್ಗೆ, ದಿ.  ಧರಮ್ ಸಿಂಗ್ ಅವರ ಶ್ರಮ‌ ಮತ್ತು  ಹೋರಾಟ 371ಜೆ ಜಾರಿ ಹಿಂದೆ ಕೆಲಸ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದರು.

Key words: Rs 13000 crore ,grant , KKRDB , three years, CM, Siddaramaiah

The post ಮೂರು ವರ್ಷದಲ್ಲಿ KKRDB ಗೆ 13000 ಕೋಟಿ ರೂ. ಅನುದಾನ ನೀಡಿ ದಾಖಲೆ: ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಭ್ರಷ್ಟಾಚಾರ ಮುಕ್ತ ರಾಜ್ಯ ಮಾಡ್ತೇವೆ ಎನ್ನುವವರು ಮೂರು ವರ್ಷದಿಂದ ಏನ್ ಮಾಡಿದ್ರು..? ಅಮಿತ್ ಶಾಗೆ ಹೆಚ್.ಡಿ ಕುಮಾರಸ್ವಾಮಿ ಟಾಂಗ್.
ಶಿವಮೊಗ್ಗ,ಫೆಬ್ರವರಿ,24,2023(www.justkannada.in):  ಭ್ರಷ್ಟಾಚಾರ ಮುಕ್ತ ರಾಜ್ಯ ಮಾಡುತ್ತೇವೆ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳ್ತಿದ್ದಾರೆ. ಆಡಳಿತ ಮಾಡಿದ ಮೂರು ವರ್ಷ ಏನು ಮಾಡಿದರು..? ಎಂದು ಪ್ರಶ್ನಿಸುವ ಮೂಲಕ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದರು.

ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ,  ಅಮಿತ್ ಶಾ ಭಾಷಣ ವಿಶ್ವದ 8ನೇ ಅದ್ಭುತವಿದ್ದಂತೆ.  ಬಿಜೆಪಿ ಮಾಡಿದ ಭ್ರಷ್ಟಾಚಾರವನ್ನ ಮುಕ್ತ ಮಾಡುತ್ತಾರಾ ತಿಳಿಸಲಿ. ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಈವರೆಗೂ ಪ್ರಧಾನಿ ಮೋದಿ, ಅಮಿತ್ ಶಾ ಮುಖ ನೋಡಿ ವೋಟ್ ಹಾಕಿ ಅಂತಿದ್ದರು. ಈಗ ಬಿಎಸ್ ಯಡಿಯೂರಪ್ಪ ಮುಖ ನೋಡಿ ವೋಟ್ ಹಾಕಿ ಅಂತಿದ್ದಾರೆ ಎಂದು ಲೇವಡಿ ಮಾಡಿದರು.

ಜೆಡಿಎಸ್​ ಪಕ್ಷ ಕೇವಲ 2 ಜಿಲ್ಲೆಗಳಿಗೆ ಸೀಮಿತವಾಗಿಲ್ಲ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಖಾತೆ ತೆರೆಯುತ್ತೇವೆ. ಉತ್ತರ ಕರ್ನಾಟಕದಲ್ಲಿ ಈ ಬಾರಿ ನಾವು ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಕರಾವಳಿ ಭಾಗದಲ್ಲಿ ನಾನು ಸಂಚರಿಸಿ ಪಕ್ಷ ಸಂಘಟನೆ ಮಾಡುತ್ತೇವೆ. ಪ್ರವಾಸ ಮಾಡಿ ಜನರ ನಾಡಿಮಿಡಿತ ತಿಳಿದುಕೊಳ್ಳುವೆ. ಉಳಿದಂತೆ ರಾಜ್ಯದಲ್ಲಿ ಜೆಡಿಎಸ್ ಸಂಪೂರ್ಣವಾಗಿ ಗಟ್ಟಿಯಾಗಿದೆ ಎಂದು ಹೆಚ್,ಡಿಕೆ ವಿಶ್ವಾಸ ವ್ಯಕ್ತಪಡಿಸಿದರು.

Key words: corruption-free- state – three years- HD Kumaraswamy -Tong – Amit Shah.

The post ಭ್ರಷ್ಟಾಚಾರ ಮುಕ್ತ ರಾಜ್ಯ ಮಾಡ್ತೇವೆ ಎನ್ನುವವರು ಮೂರು ವರ್ಷದಿಂದ ಏನ್ ಮಾಡಿದ್ರು..? ಅಮಿತ್ ಶಾಗೆ ಹೆಚ್.ಡಿ ಕುಮಾರಸ್ವಾಮಿ ಟಾಂಗ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಇಂದು ಜನಸ್ಪಂದನ ಸಮಾವೇಶ: ಮೂರು ವರ್ಷದ ಸಾಧನೆ ಅನಾವರಣಕ್ಕೆ ಬಿಜೆಪಿ ಸಜ್ಜು.
ದೊಡ್ಡಬಳ್ಳಾಪುರ,ಸೆಪ್ಟಂಬರ್,10,2022(www.justkannada.in):  ಮೂರು ವರ್ಷದ ಸಾಧನೆ ಅನಾವರಣಗೊಳಿಸುವ ಸಲುವಾಗಿ ಇಂದು  ರಾಜ್ಯ ಬಿಜೆಪಿ ಜನಸ್ಪಂದನ ಕಾರ್ಯಕ್ರಮವನ್ನ ಆಯೋಜಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ಜನಸ್ಪಂದನ ಸಮಾವೇಶ ನಡೆಯುತ್ತಿದ್ದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ವೇದಿಕೆಯಲ್ಲಿ 30 ನಾಯಕರಿಗೆ ವ್ಯವಸ್ಥೆ ಮಾಡಲಾಗಿದ್ದು,  200 ಎಕರೆ ಜಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ದೊಡ್ಡಬಳ್ಳಾಪುರ ನಗರದ ಪ್ರಮುಖ ರಸ್ತೆಗಳು ಕೇಸರಿಮಯವಾಗಿವೆ .

ಬೆಂಗಳೂರು ಗ್ರಾಮಾಂತರ  ಎಸ್.ಪಿ ಬಾಲದಂಡಿ ನೇತೃತ್ವದಲ್ಲಿ ಭದ್ರತೆ ವಹಿಸಲಾಗಿದ್ದು ಇಬ್ಬರು ಎಎಸ್ ಪಿ, 11 ಡಿವೈಎಸ್ ಪಿ, 35 ಇನ್ಸ್ ಪೆಕ್ಟರ್, 100 ಪಿಎಸ್ ಐ 150 ಎಎಸ್ ಐ, 400 ಗೃಹ ರಕ್ಷಕ ದಳದ ಸಿಬ್ಬಂದಿಗಳು,  4 ಕೆಎಸ್ ಆರ್ ಪಿ ತುಕಡಿ, 6 ಡಿಎಆರ್ ತುಕಡಿಯನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ.

ಜುಲೈ 28 ರಂದು ನಡೆಯಬೇಕಿದ್ಧ ಜನೋತ್ಸವ ಕಾರ್ಯಕ್ರಮ ಸೆಪ್ಟಂಬರ್ 8ಕ್ಕೆ ಮುಂದೂಡಲಾಗಿತ್ತು. ಆದರೆ ಸಚಿವ ಉಮೇಶ್ ಕತ್ತಿ ನಿಧನರಾದ ಹಿನ್ನೆಲೆ ಮತ್ತೆ ಸಮಾವೇಶವನ್ನು ಮುಂದೂಡಿ ಜನಸ್ಪಂದನ ಹೆಸರಿನಲ್ಲಿ ಇಂದು ಕಾರ್ಯಕ್ರಮ ಮಾಡಲಾಗುತ್ತಿದೆ.

Key words:  Today – Janaspandana-BJP – three years -achievements.

The post ಇಂದು ಜನಸ್ಪಂದನ ಸಮಾವೇಶ: ಮೂರು ವರ್ಷದ ಸಾಧನೆ ಅನಾವರಣಕ್ಕೆ ಬಿಜೆಪಿ ಸಜ್ಜು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೂರು ವರ್ಷಗಳಲ್ಲಿ 16 ಸಾವಿರ ಪೊಲೀಸ್ ಹುದ್ದೆ ಭರ್ತಿಗೆ ಕ್ರಮ- ಗೃಹ ಸಚಿವ ಬಸವರಾಜ ಬೊಮ್ಮಾಯಿ…
ಉಡುಪಿ,ಫೆಬ್ರವರಿ,20,2021(www.justkannada.in): ಮುಂದಿನ ಮುರು ವರ್ಷಗಳ ಅವಧಿಯಲ್ಲಿ ಒಟ್ಟು 16 ಸಾವಿರ  ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ  ಬಸವರಾಜ ಬೊಮ್ಮಾಯಿ ಹೇಳಿದರು.

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಶನಿವಾರ ನೂತನ ಪೊಲೀಸ್ ವಸತಿ ಗೃಹ ಸಮುಚ್ಚಯ  ಕಟ್ಟಡ ಉದ್ಘಾಟಿಸಿ  ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿದರು.

ಈಗಾಗಲೇ 6 ಸಾವಿರ ಪೊಲೀಸ್ ಹುದ್ದೆಗಳ ಭರ್ತಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಒಟ್ಟು 16 ಸಾವಿರ ಪೊಲೀಸ್ ಹುದ್ದೆ ಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು. ಇದರಿಂದ ಪೊಲೀಸ್ ಬಲ ಮತ್ತಷ್ಟು ಹೆಚ್ಚಲಿದೆ. ಈಗಿರುವ ನೇಮಕಾತಿ ಪ್ರಕ್ರಿಯೆ ಅತ್ಯಂತ ಪಾರದರ್ಶಕ ವಾಗಿದೆ. ಮಾನವ ಮಧ್ಯಸ್ಥಿಕೆ ಇಲ್ಲದ ರೀತಿ ನೇಮಕಾತಿ ಪ್ರಕ್ರಿಯೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಡಾರ್ಕ್ ವೆಬ್ ಮೂಲಕ ಜನರನ್ನು ಸಂಪರ್ಕಿಸಿ ಡ್ರಗ್ ಪೂರೈಕೆ ಮಾಡುತ್ತಿದ್ದ ಅಂತಾರಾಷ್ಟ್ರೀಯ ಜಾಲವನ್ನು ದೇಶದಲ್ಲಿ ಮೊಟ್ಟ ಮೊದಲು ಮಟ್ಟ ಹಾಕಿದ್ದು ಕರ್ನಾಟಕ ಪೊಲೀಸ್. ಇದು ನಿಜಕ್ಕೂ ಹೆಮ್ಮೆಯ ವಿಷಯ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ನಾಲ್ಕು FSL ಕೇಂದ್ರಗಳ ಸ್ಥಾಪನೆ

ರಾಜ್ಯದಲ್ಲಿರುವ ನಾಲ್ಕು ವಿಭಾಗಗಳಲ್ಲಿ ಒಂದೊಂದು ಅತ್ಯಂತ ಸುಸಜ್ಜಿತ FSL ತನಿಖಾ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ರಾಜ್ಯದಲ್ಲಿ ಹೆಚ್ವುತ್ತಿರುವ ಸೈಬರ್ ಕ್ರೈಮ್ ನ್ಮು ಮಟ್ಟ್ ಹಾಕ ಲಾಗುವುದು. ಬೆಳಗಾವಿ, ಮೈಸೂರು, ಮಂಗಳೂರು, ಕಲಬುರಗಿ ವಿಭಾಗಗಳಲ್ಲಿ ತಲಾ ಒಂದು ಎಫ್ ಎಸ್ ಎಲ್ ಲ್ಯಾಬ್ ಆರಂಭಿಸಲಾಗುವುದು ಎಂದು ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪೊಲೀಸ್ ಆಡಳಿತದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಡಿಜಿಪಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಮಾರ್ಚ್ 31 ರೊಳಗಾಗಿ ಅವರು ವರದಿ ಸಲ್ಲಿಸಲಿದ್ದಾರೆ. ಪೊಲೀಸ್ ವ್ಯವಸ್ಥೆ ಸುಧಾರಿಸಲು ಹಲವಾರು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಎಲ್ಲ ಜಿಲ್ಲೆಗಳಲ್ಲಿ ಒಂದೊಂದು ಸೈಬರ್ ಠಾಣೆ

ಹತ್ತು ವರ್ಷಗಳ‌ ಹಿಂದೆ ಸೈಬರ್ ಅಪರಾಧಗಳು ಇರಲಿಲ್ಲ. ಆದರೆ ಇತ್ತೀಚೆಗೆ ರಾಜ್ಯದಲ್ಲಿ ಸೈಬರ್  ಅಪರಾಧಗಳು ಹೆಚ್ವುತ್ತಿವೆ. ಪೊಲೀಸ್ ಇಲಾಖೆಗೆ ಇದು ಹೊಸ ಸವಾಲು ಒಡ್ಡಿದೆ. ಈ ಅಪರಾಧ ಮಟ್ಟ ಹಾಕಲು ಎಲ್ಲಾ ಜಿಲ್ಲೆಗಳಲ್ಲಿ ಒಂದೊಂದು ಸೈಬರ್ ಪೊಲೀಸ್ ಠಾಣೆ ಸ್ಥಾಪಿಸಲಾಗುವುದು ಎಂದು ಸಚಿವ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ರಾಜ್ಯದಲ್ಲಿ ಕೋಮು ಗಲಭೆ ಸೃಷ್ಠಿ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆದೇಶಿಸಿಸ್ದೇನೆ ಎಂದು ಅವರು ತಿಳಿಸಿದರು.

ಹೆಬ್ರಿಗೆ ಎರಡು ಠಾಣೆ

ಹೆಬ್ರಿಯಲ್ಲಿ ಎರಡು ಪೊಲೀಸ್ ಠಾಣೆಗಳ ಅಗತ್ಯ ಇದೆ ಎಂದು ಶಾಸಕ ಸುನಿಲ್ ಕುಮಾರ್ ಬೇಡಿಕೆ ಇಟ್ಟಿದ್ದಾರೆ. ಹೆಬ್ರಿಗೆ (ಕಾ ಮತ್ತು ಸು) ಪೊಲೀಸ್ ಠಾಣೆಯನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು. ಅಗ್ನಿಶಾಮಕ ಠಾಣೆ ಸ್ಥಾಪನೆ ಅಸಾಧ್ಯವಾಗದಿದ್ದರೆ ಅಗ್ನಿಶಾಮಕ ಉಪ ಠಾಣೆ ಜತೆ ಫೈರ್ ಇಂಜಿನ್ ವಾಹನ ನೀಡಲಾಗುವುದು. ಈ ವಿಷಯಗಳನ್ನು ಬಜೆಟ್ ನಲ್ಲಿ ಘೋಷಿಸಲಾಗುವುದು ಎಂದು ಬೊಮ್ಮಾಯಿ ಹೇಳಿದರು. ಶಾಸಕ ಸುನಿಲ್ ಕುಮಾರ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು.

Key words: fill 16,000 police -posts -three years-Home Minister -Basavaraja Bommai.

The post ಮೂರು ವರ್ಷಗಳಲ್ಲಿ 16 ಸಾವಿರ ಪೊಲೀಸ್ ಹುದ್ದೆ ಭರ್ತಿಗೆ ಕ್ರಮ- ಗೃಹ ಸಚಿವ ಬಸವರಾಜ ಬೊಮ್ಮಾಯಿ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೇಂದ್ರ ಮಾಜಿ ಸಚಿವ ದಿಲೀಪ್ ರೇಗೆ ಮೂರು ವರ್ಷ ಜೈಲು ಶಿಕ್ಷೆ…
ನವದೆಹಲಿ,ಅಕ್ಟೋಬರ್,26,2020(www.justkannada.in): 1999ರಲ್ಲಿ ಜಾರ್ಖಾಂಡ್ ನಲ್ಲಿ ನಡೆದಿದ್ದ ಕಲ್ಲಿದ್ದಲು ಬ್ಲಾಕ್ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಮಾಜಿ ಸಚಿವ ದಿಲೀಪ್ ರೇಗೆ ಮೂರು ವರ್ಷ ಜೈಲುಶಿಕ್ಷೆ ವಿಧಿಸಿ ದೆಹಲಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಅಟಲ್ ಬಿಹಾರಿ ವಾಜಪೇಯಿ ಸರ್ಕಾರದ ಅವಧಿಯಲ್ಲಿ ದಿಲೀಪ್ ರೇ ಕಲ್ಲಿದ್ದಲು ಖಾತೆ ರಾಜ್ಯ ಸಚಿವರಾಗಿದ್ದರು. ಈ ನಡುವೆ 1999ರಲ್ಲಿ ಜಾರ್ಖಂಡ್ ಕಲ್ಲಿದ್ದಲು ಬ್ಲಾಕ್ ಹಂಚಿಕೆ ಹಗರಣದಲ್ಲಿ ದಿಲೀಪ್ ರೇ ಅವರನ್ನು ಅಪರಾಧಿ ಎಂದು ಕೋರ್ಟ್ ಘೋಷಿಸಿತ್ತು. ಆದರೆ ಶಿಕ್ಷೆ ಪ್ರಮಾಣ ಪ್ರಕಟಿಸಿರಲಿಲ್ಲ. ಇದೀಗ ಕೋರ್ಟ್ ಕೇಂದ್ರ ಮಾಜಿ ಸಚಿವ ದಿಲೀಪ್ ರೇಗೆ ಮೂರು ವರ್ಷ ಜೈಲುಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಜಾರ್ಖಂಡ್‌ನ ಗಿರಿದಿಹ್​ ನಲ್ಲಿರುವ ಬ್ರಹ್ಮದಿಹಾ ಕಲ್ಲಿದ್ದಲು ಬ್ಲಾಕ್ ಅನ್ನು 1999ರಲ್ಲಿ ಕ್ಯಾಸ್ಟ್ರಾನ್ ಟೆಕ್ನಾಲಜೀಸ್ ಲಿಮಿಟೆಡ್​ಗೆ ಅಕ್ರಮವಾಗಿ ಹಂಚಿಕೆ ಮಾಡಿರುವ ಪ್ರಕರಣ ಇದಾಗಿದ್ದು ಪ್ರಕರಣದಲ್ಲಿ ಕೇಂದ್ರ ಮಾಜಿ ಸಚಿವ ದಿಲೀಪ್ ರೇ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

Key words: former central minister- Dilip Ray -sentenced -three years – jail

The post ಕೇಂದ್ರ ಮಾಜಿ ಸಚಿವ ದಿಲೀಪ್ ರೇಗೆ ಮೂರು ವರ್ಷ ಜೈಲು ಶಿಕ್ಷೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೊಟ್ಟ ಜವಾಬ್ದಾರಿ ಸಮರ್ಪಕವಾಗಿ ನಿಭಾಯಿಸುವೆ-ಕೃಷಿ ಸಚಿವ ಬಿ.ಸಿ.ಪಾಟೀಲ್
ಹಾವೇರಿ, ಮಾ 8,2020(www.justkannada.in): ಮೂರು ವರ್ಷಗಳ ಕಾಲ ಕ್ಷೇತ್ರದ ಜನರು ತಮ್ಮ ಮೇಲೆ ಹೊರಿಸಿರುವ ಜವಾಬ್ದಾರಿಯನ್ನು ಹಾಗೂ ಕರ್ತವ್ಯವನ್ನು ಸಮರ್ಪಕವಾಗಿ ನಿಭಾಯಿಸುವುದಾಗಿ ಸರ್ಕಾರದ ಕೃಷಿ ಸಚಿವ ಹಾಗೂ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂದು ಹಿರೇಕೆರೂರು ತಾಲೂಕಿನ ಮಡ್ಲೂರು ಗ್ರಾಮದಲ್ಲಿ ಎಂ.ಜಿ.ಎನ್.ಆರ್.ಇ.ಜಿ.ಎ ಯೋಜನೆ ಅಡಿಯಲ್ಲಿ ಮಡ್ಲೂರು ಗ್ರಾಮದಲ್ಲಿ ನಿರ್ಮಾಣವಾದ ಗ್ರಾಮೀಣ ಗೋದಾಮ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ನಿರ್ಮಿಸಿರುವ ಮೂರನೇ ಅಂಗನವಾಡಿ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿ ಬಳಿಕ ಸಂತೇನಹಳ್ಳಿಯಲ್ಲಿ ನಡೆದ ಅಭಿನಂದನಾ ಸಮಾರಂಭವನ್ನುದ್ದೇಶಿಸಿ ಸಚಿವ ಬಿ.ಸಿ ಪಾಟೀಲ್ ಮಾತನಾಡಿದರು.

ಉಪಚುನಾವಣೆಯಲ್ಲಿ ತಾವು ಮತ್ತು ಉಗ್ರಾಣ ನಿಗಮದ ಅಧ್ಯಕ್ಷರು ಒಗ್ಗಟ್ಟಾಗುವ ಮೂಲಕ ಕ್ಷೇತ್ರದ ಅಭಿವೃದ್ಧಿಯ ಪಣ ತೊಟ್ಟಿದ್ದೇವೆ.ಆ ನಿಟ್ಟಿನಲ್ಲಿ ತಾವು ಕಾರ್ಯಪ್ರವೃತ್ತರಾಗಿರುವುದಾಗಿ ಅವರು ಸ್ಪಷ್ಟಪಡಿಸಿದರು. ಸರ್ವಜ್ಞನ ನಾಡಿನಲ್ಲಿ ಹೇಳಿದಂತೆ ನಡೆಯಬೇಕು.ಜಾವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು.ಅಭಿವೃದ್ಧಿಯೇ ನಮ್ಮ ಮೂಲಮಂತ್ರವಾಗಬೇಕು ಎಂದು ಸಚಿವ ಬಿ.ಸಿ ಪಾಟೀಲ್ ನುಡಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡದ ಅನುದಾನದಲ್ಲಿ ವಾಲ್ಮೀಕಿ ಭವನ, ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಹಾಗೂ ರಸ್ತೆ‌ ಅಭಿವೃದ್ಧಿಗೆ ಕ್ಷೇತ್ರದ ಜನರು ಮನವಿ ಸಲ್ಲಿಸಿದ್ದು, ಆದ್ಯತೆ ಮೇರೆಗೆ ಕೆಲಸ ನಿರ್ವಹಿಸಲಾಗುವುದು. ಪ್ರಾಧಿಕಾರಕ್ಕಿಂತ ರಸ್ತೆಗಳ ಅಭಿವೃದ್ಧಿ ಮೂಲಭೂತ ಸೌಕರ್ಯ ಕಲ್ಪಿಸುವುದು ಅತಿಮುಖ್ಯವಾಗುತ್ತದೆ‌ ಎಂದು ಸಚಿವ ಬಿಸಿ ಪಾಟೀಲ್ ತಿಳಿಸಿದರು.

Key words: haveri- handle-responsibilities -three years-Agriculture Minister -B.C. Patil

The post ಕೊಟ್ಟ ಜವಾಬ್ದಾರಿ ಸಮರ್ಪಕವಾಗಿ ನಿಭಾಯಿಸುವೆ-ಕೃಷಿ ಸಚಿವ ಬಿ.ಸಿ.ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮುಂದಿನ ಮೂರು ವರ್ಷ ಅವಧಿಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳೀನ್ ಕುಮಾರ್ ಕಟೀಲ್ ಆಯ್ಕೆ….
ಬೆಂಗಳೂರು,ಜ,16,2020(www.justkannada.in):  ಮುಂದಿನ ಮೂರು ವರ್ಷ ಅವಧಿಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳೀನ್ ಕುಮಾರ್ ಕಟೀಲ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಔಪಚಾರಿಕ ಚುನಾವಣೆಯಲ್ಲಿ ನಳೀನ್ ಕುಮಾರ್ ಕಟೀಲ್ ಅವಿರೋಧವಾಗಿ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾದರು. ಸಾಂಸ್ಥಿಕ ಚುನಾವಣಾಧಿಕಾರಿ ಅಶ್ವಥ್ ನಾರಾಯಣ್ ಗೌಡ ಮತ್ತು ಸಹ ಚುನಾವಣಾಧಿಕಾರಿ ಹಾಲಪ್ಪ ಆಚಾರ್ ಈಬಗ್ಗೆ ಘೋಷಣೆ ಮಾಡಿದರು.

ನಳೀನ್ ಕುಮಾರ್ ಕಟೀಲ್  2023ರ ಜನವರಿ 16ರವರೆಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ.  ಬಳಿಕ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಅಧ್ಯಕ್ಷನಾಗಿ ಆಯ್ಕೆಯಾದಾಗ ಕೆಲ ಸವಾಲುಗಳಿದ್ದವು. ರಾಜ್ಯಾದ್ಯಂತ ಪ್ರವಾಸ ಮಾಡಿ ಎಲ್ಲ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡಿದ್ದೇನೆ. ಸ್ಥಳೀಯ ಸಂಸ್ಥೆಯ ಚುನಾವಣೆ, ಬಿಬಿಎಂಪಿ ಮೇಯರ್ ಚುನಾವಣೆ ಹಾಗೂ ಉಪಚುನಾವಣೆಯಲ್ಲಿ ಯಶಸ್ಸು ಗಳಿಸಿದ್ದೇವೆ ಎಂದರು.

Key words: Nalin Kumar Kateel -elected – BJP state president –next- three years

The post ಮುಂದಿನ ಮೂರು ವರ್ಷ ಅವಧಿಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳೀನ್ ಕುಮಾರ್ ಕಟೀಲ್ ಆಯ್ಕೆ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.