unemployed Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಉದ್ಯೋಗ ದೊರೆಯದ ಯುವಕರಿಗೆ ‘ಯುವಸ್ನೇಹಿ’ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ.
ಬೆಂಗಳೂರು,ಫೆಬ್ರವರಿ,17,2023(www.justkannada.in): ರಾಜ್ಯ ಬಜೆಟ್‌ನಲ್ಲಿ ʼಯುವ ಸ್ನೇಹಿʼ ಮತ್ತು ʼಬದುಕಿನ ದಾರಿʼ ಹೆಸರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೊಸ ಯೋಜನೆಯನ್ನ ಘೋಷಿಸಿದ್ದಾರೆ.

ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಇನ್ನು ಶಾಲಾ ಶಿಕ್ಷಣದ ನಂತರ ವಿವಿಧ ಕಾರಣಗಳಿಂದ ವಿಧ್ಯಾಭ್ಯಾಸ ಮುಂದುವರಿಸಲು ಸಾಧ್ಯವಾಗದವರಿಗೆ ಐಐಟಿಯಲ್ಲಿ ಮೂರು ತಿಂಗಳ ವೃತ್ತಿಪರ ತರಬೇತಿ ಪಡೆಯಲು ಮೂರು ತಿಂಗಳ ಕಾಲ ಮಾಸಿಕ 1,500 ರೂ. ಶಿಷ್ಯವೇತನ ನೀಡಲಾಗುವುದು. ತರಬೇತಿ ಪೂರ್ಣಗೊಂಡವರಿಗೆ ಅಪ್ರೈಂಟಿಸ್​​ಶಿಪ್ ಕಾರ್ಯಕ್ರಮದಡಿ 3 ತಿಂಗಳು 1,500 ರೂ. ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

Key words: CM Bommai –announced- ‘Yuvasnehi’ scheme -unemployed -youth.

The post ಉದ್ಯೋಗ ದೊರೆಯದ ಯುವಕರಿಗೆ ‘ಯುವಸ್ನೇಹಿ’ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರುದ್ಯೋಗಿ ಯುವ ಜನರಿಗೆ ನರಕ ತೋರಿಸಿದೆ- ಸಿದ್ದರಾಮಯ್ಯ ಟೀಕೆ.
ಬೆಂಗಳೂರು,ಜೂನ್,7,2022(www.justkannada.in): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಎಂಟು ವರ್ಷದಲ್ಲಿ ನಿರುದ್ಯೋಗಿ ಯುವ ಜನರಿಗೆ ನರಕ ತೋರಿಸಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ ಹೇಳಿರುವುದಿಷ್ಟು…

ಯಾವುದೇ ದೇಶದ ಆರ್ಥಿಕತೆಗೆ ವೇಗ ಬರುವುದು ಅಲ್ಲಿನ ಯುವ ಜನರು ದುಡಿಮೆಯಲ್ಲಿ ತೊಡಗಿಕೊಂಡಾಗ ಮಾತ್ರ. ಜನರು ಖರ್ಚು ಮಾಡುತ್ತಿದ್ದರೆ ದೇಶದ ಆರ್ಥಿಕತೆಯ ಬೆಳವಣಿಗೆ ಸಮರ್ಪಕವಾಗಿರುತ್ತದೆ. ದೇಶವನ್ನು ಮುನ್ನಡೆಸುವ ಜವಾಬ್ಧಾರಿ ಹೊತ್ತವರಿಗೆ ಇಷ್ಟು ಜ್ಞಾನವಿಲ್ಲದೆ ಹೋದರೆ ಅಂಥ ದೇಶ ಅರಾಜಕತೆಯತ್ತ ಸಾಗಿ ಅಧೋಗತಿಗೆ ಇಳಿಯುತ್ತದೆ. ಇದಕ್ಕೆ ಸದ್ಯ ಭಾರತವೇ ಉದಾಹರಣೆ.

ಎಂಜಿನಿಯರಿಂಗ್ ಮುಂತಾದ ಪದವಿ, ಸ್ನಾತಕೋತ್ತರ ಪದವಿ ಮುಗಿಸಿರುವ ದೇಶದ ಯುವ ಜನತೆ ಕೆಲಸ ಕೇಳಿದರೆ ಮೋದಿಯವರು ಪಕೋಡ ಮಾರಿ ಎನ್ನುತ್ತಾರೆ. ಒಬ್ಬ ಇಂಜಿನಿಯರ್ ಅನ್ನು ಸಿದ್ಧಪಡಿಸಲು ದೊಡ್ಡ ಮೊತ್ತದ ತೆರಿಗೆ ಹಣವನ್ನು ಆತನ ಮೇಲೆ ವಿನಿಯೋಗಿಸಲಾಗಿರುತ್ತದೆ. ಇಂದು ದೇಶದ ಕೋಟ್ಯಾನುಕೋಟಿ ಪದವೀಧರರು ಹಳ್ಳಿಗಳಲ್ಲಿ ಅವಮಾನ ಅನುಭವಿಸುತ್ತಿದ್ದಾರೆ. ನಗರಗಳಲ್ಲಿ ಸೆಕ್ಯುರಿಟಿ ಗಾರ್ಡುಗಳಾಗಿ, ಟ್ಯಾಕ್ಸಿ ಚಾಲಕರಾಗಿ, ಸ್ವಿಗ್ಗಿ, ಝೊಮ್ಯಾಟೊ ಮುಂತಾದ ಕಡೆ ಸೇಲ್ ಮಾಡುವವರಾಗಿ, ಗಾರ್ಮೆಂಟುಗಳಲ್ಲಿ 8-10 ಸಾವಿರಕ್ಕೆ ದುಡಿಯುತ್ತಿದ್ದಾರೆ.

ಬಿಜೆಪಿಯು ಒಂದು ಕಾಲದಲ್ಲಿ ಪದೆ ಪದೆ ಪ್ರತಿಭಾ ಪಲಾಯನದ ಬಗ್ಗೆ ಮಾತನಾಡುತ್ತಿತ್ತು. ಆದರೆ 2014 ರಿಂದ 2021 ರ ವೇಳೆಗೆ 7 ವರ್ಷಗಳಲ್ಲಿ 8 ಲಕ್ಷ ಜನ ಭಾರತದ ನಾಗರಿಕತ್ವವನ್ನೆ ತೊರೆದು ಬೇರೆ ದೇಶಗಳಿಗೆ ಹೋಗಿ ನೆಲೆಸಿದ್ದಾರೆ. ವಿಜ್ಞಾನ, ಅರ್ಥಶಾಸ್ತ್ರ, ಇಂಜಿನಿಯರಿಂಗ್, ಬಾಹ್ಯಾಕಾಶ ಮುಂತಾದ ಕ್ಷೇತ್ರಗಳಲ್ಲಿನ ಬುದ್ಧಿವಂತ ಯುವಕರು ದೇಶದಲ್ಲಿ ಭವಿಷ್ಯ ರೂಪಿಸಿಕೊಳ್ಳುವ ಅವಕಾಶ ಮತ್ತು ಭರವಸೆಗಳನ್ನು ಕಾಣದೆ ದೇಶ ತೊರೆಯುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಯುವ ಭಾರತದ ಭಾರತದ ಇಂದಿನ ಸರಾಸರಿ ವಯಸ್ಸು 28.3 ವರ್ಷ. ಇಲ್ಲಿ 35 ವರ್ಷದ ಒಳಗಿನ ಯುವ ಸಮೂಹ ಶೇ.65 ರಷ್ಟಿದೆ. ರಾಷ್ಟ್ರವೊಂದರ ಇತಿಹಾಸದಲ್ಲಿ ಬಹಳ ಅಪರೂಪಕ್ಕೆ ಈ ರೀತಿಯ ಅವಕಾಶಗಳು ದೊರೆಯುತ್ತವೆ. 25 ವರ್ಷದೊಳಗಿನÀವರ ಸಂಖ್ಯೆ ಶೇ.50 ರಷ್ಟಿದೆ. 2014 ರಲ್ಲಿ 25 ವರ್ಷದವರಿದ್ದ ಯುವಕರು 2024 ಕ್ಕೆ 35 ವರ್ಷದವರಾಗುತ್ತಾರೆ. 20 ವರ್ಷದವರು 30 ವರ್ಷದವರಾಗುತ್ತಾರೆ. ಆದರೆ ಏರುತ್ತಿರುವ ನಿರುದ್ಯೋಗದಿಂದಾಗಿ 35 ವರ್ಷದ ಯುವಕರು ಬದುಕು ಕಟ್ಟಿಕೊಳ್ಳುವ ಅವಕಾಶ ಶೇ.75 ರಷ್ಟು ಕುಸಿದು ಹೋಗುತ್ತಿದೆ. ಭಾರತೀಯರ ತಲಾವಾರು ಆದಾಯದ ಜಿಡಿಪಿ 2020 ರಲ್ಲಿ 1877 ಡಾಲರುಗಳಷ್ಟಾಗಿದೆ. ಇನ್ನು 15 ವರ್ಷಕ್ಕೆ ಭಾರತ ವಯಸ್ಕರ ದೇಶವಾಗುತ್ತದೆ. ದುಡಿಮೆಯ ಶಕ್ತಿ ಕ್ಷೀಣಿಸುತ್ತಾ ಹೋಗುತ್ತದೆ. ಆಗ ಅಭಿವೃದ್ಧಿಯನ್ನು ಸಾಧಿಸುವುದು ಹೇಗೆ? ಎಂದು ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.

ಮೋದಿಯವರು 2014 ರಲ್ಲಿ 2 ಕೋಟಿ ಉದ್ಯೋಗ ಸೃಷ್ಟಿಯ ಮಾತನ್ನಾಡಿದ್ದರು. ಆ ಉದ್ಯೋಗಗಳು ಎಲ್ಲಿಗೆ ಹೋದವು? 2020 ರಲ್ಲಿ ದೇಶದ 11716 ಉದ್ಯಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆAದು ಕೇಂದ್ರ ಸರ್ಕಾರದ ಎನ್‌ಸಿಆರ್‌ಬಿ ದಾಖಲೆಗಳು ಹೇಳುತ್ತಿವೆ. ಇದರಲ್ಲಿ ಕರ್ನಾಟಕದ ಉದ್ಯಮಿಗಳು 1772. ಇದು 2019 ಕ್ಕೆ ಹೋಲಿಸಿದರೆ ಶೇ.103 ರಷ್ಟು ಹೆಚ್ಚು.

ದೇಶದಲ್ಲಿ 60 ಲಕ್ಷ ಎಂ ಎಸ್ ಎಂ ಇ ಗಳನ್ನು ಮುಚ್ಚಲಾಗಿದೆ. 2014 ರಲ್ಲಿ ಎಂಎಸ್ಎಂಇ ಮತ್ತು ಅವುಗಳ ಸಂಬಂಧಿತ ವಲಯದಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರ ಸಂಖ್ಯೆ ಸುಮಾರು 10 ಕೋಟಿಗಳಷ್ಟಿತ್ತುಗೀಗ ಅದು 2.5 ಕೋಟಿಗೆ ಕುಸಿದಿದೆ. ಮೋದಿಯವರ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯ ಮಾತು ನಿಜವಾಗಿದ್ದರೆ ಎಂಎಸ್ಎAಇ ವಲಯವೊಂದರಲ್ಲೆ ಹೊಸದಾಗಿ ಕನಿಷ್ಟ ಎಂದರೂ 16 ಕೋಟಿ ಉದ್ಯೋಗ ಸೃಷ್ಟಿಯಾಗಬೇಕಿತ್ತು. ಆದರೆ ಈಗ 2014 ರಲ್ಲಿ ಇದ್ದ ಉದ್ಯೋಗಗಳೂ ನಾಶವಾಗಿ ಹೋಗಿ ಎಂಎಸ್ಎಂಇ ಯಲ್ಲಿ ಕೇವಲ 2.5 ಕೋಟಿ ಉದ್ಯೋಗಗಳು ಉಳಿದಿವೆ ಎಂದು ವರದಿಗಳು ಹೇಳುತ್ತಿವೆ.

ಇತ್ತ ಸರ್ಕಾರಿ ಉದ್ಯೋಗಗಳನ್ನೂ ತುಂಬುತ್ತಿಲ್ಲ. 8.72 ಲಕ್ಷ ಉದ್ಯೋಗಗಳು ಕೇಂದ್ರ ಸರ್ಕಾರದಲ್ಲಿ ಖಾಲಿ ಇವೆ. ರಾಜ್ಯಗಳು ಸುಮಾರು 45 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಿಲ್ಲ. ಕೇಂದ್ರ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ಕೂಲಿ ರೂ.590. ನರೇಗಾ ಕಾರ್ಮಿಕರಿಗೂ ಇಷ್ಟೆ ಕೂಲಿಯನ್ನು ಕೊಡಬೇಕು. ಆದರೆ ಕಳೆದ ವರ್ಷ ಕರ್ನಾಟಕದ ನರೇಗಾ ಕೂಲಿ ಕಾರ್ಮಿಕರಿಗೆ 289 ರೂಪಾಯಿಗಳನ್ನು ನಿಗಧಿಪಡಿಸಿದ್ದರು. ಈ ವರ್ಷ ಇನ್ನೂ ರಿವೈಸ್ ಮಾಡಿಲ್ಲ. 2022-23 ರ ಆರ್ಥಿಕ ವರ್ಷದಲ್ಲಿ 11 ಕೋಟಿ ಜನ ಕೆಲಸ ಬೇಕೆಂದು ಅರ್ಜಿ ಹಾಕಿದ್ದಾರೆಂದು ನರೇಗಾ ಸಂಘರ್ಷ ಸಮಿತಿಗಳು ಮತ್ತು ಪಿಎಐಜಿ ಮಾಡಿರುವ ಸಮೀಕ್ಷೆಗಳ ವರದಿಗಳು ಹೇಳುತ್ತಿವೆ. 11 ಕೋಟಿ ಜನರಿಗೆ ಕನಿಷ್ಟ 100 ದಿನ ಉದ್ಯೋಗ ನೀಡಬೇಕೆಂದರೆ ಕನಿಷ್ಟ ಅಂದರೂ ರೂ.2.65 ಲಕ್ಷ ಕೋಟಿ ಅನುದಾನವನ್ನು ನೀಡಬೇಕು. ಆದರೆ ಬಜೆಟ್ನಲ್ಲಿ ಕೇವಲ ರೂ.73,000 ಕೋಟಿ ಅನುದಾನ ಒದಗಿಸಲಾಗಿದೆ. ಇದರಲ್ಲಿ ಹಳೆಯ ಬಾಕಿ ಮೊತ್ತವಾದ 18000 ಕೋಟಿಯನ್ನು ಕಳೆದರೆ ನೈಜವಾಗಿ ನರೇಗಾಕ್ಕೆ ಸಿಗುವುದು ರೂ.55,000 ಕೋಟಿ ಮಾತ್ರ. ಇದರಲ್ಲಿ ದಿನಕ್ಕೆ ರೂ.334 ರೀತಿ ಕೂಲಿ ಕೊಟ್ಟರೆ 10 ಕೋಟಿ ಕುಟುಂಬಗಳಿಗೆ ಕೇವಲ 16 ದಿನಗಳಿಗೆ ಮಾತ್ರ ಸಾಕಾಗುತ್ತದೆ.

ಕೇಂದ್ರ ಸರ್ಕಾರ ನಿರಂತರವಾಗಿ ಸರ್ಕಾರಿ ಸಂಸ್ಥೆ, ಕಂಪನಿ, ಕಾರ್ಖಾನೆಗಳನ್ನು ಮುಚ್ಚುತ್ತಿರುವುದರಿಂದ 2018 ರ ಹೊತ್ತಿಗೆ ಕೇಂದ್ರ ಸರ್ಕಾರದ ಸಾರ್ವಜನಿಕ ಉದ್ದಿಮೆಗಳಲ್ಲಿ ಕೆಲಸ ಮಾಡುತ್ತಿದ್ದ ನೌಕರರ ಸಂಖ್ಯೆ ಸುಮಾರು 2.5 ಲಕ್ಷದಷ್ಟು ಕಡಿಮೆಯಾಗಿದೆ. 2013-14 ರಲ್ಲಿ 16.50 ಲಕ್ಷದಷ್ಟಿದ್ದ ಕೇಂದ್ರ ಸರ್ಕಾರದ ಸಾರ್ವಜನಿಕ ಉದ್ದಿಮೆಗಳ ನೌಕರರ ಸಂಖ್ಯೆ 2018 ರ ವೇಳೆಗೆ 14 ಲಕ್ಷಕ್ಕೆ ಇಳಿದಿದೆ. 2021 ರಲ್ಲಿ ಈ ಸಂಖ್ಯೆ ಇನ್ನಷ್ಟು ಕಡಿಮೆಯಾಗಿದೆ.

ಖಾಸಗಿ ಮತ್ತು ಸಾರ್ವಜನಿಕ ವಲಯದಲ್ಲಿ ಕೆಲಸ ಮಾಡುತ್ತಿರುವ ನೌಕರರ ಸಂಖ್ಯೆ 1000 ಜನಕ್ಕೆ ಅಮೆರಿಕದಲ್ಲಿ 77, ಬ್ರೆಜಿಲ್ನಲ್ಲಿ 111, ಫ್ರಾನ್ಸ್ನಲ್ಲಿ 114, ಚೀನಾದಲ್ಲಿ ಸುಮಾರು 60 ರಷ್ಟಿದೆ. ಸ್ವೀಡನ್ನಲ್ಲಿ 138, ನಾರ್ವೆಯಲ್ಲಿ 160 ರಷ್ಟಿದ್ದರೆ ಭಾರತದಲ್ಲಿ ಇರುವುದು 12-14 ಮಾತ್ರ.

2021 ರ ಮಾರ್ಚ್ ನಲ್ಲಿ ಕೇಂದ್ರ ಸರ್ಕಾರದ ಪರ್ಸನಲ್ & ಲಾ ಕುರಿತಾದ ಸ್ಟ್ಯಾಂಡಿಂಗ್ ಕಮಿಟಿಯು ಪಾರ್ಲಿಮೆಂಟ್ನಲ್ಲಿ ಮಂಡಿಸಿದ ವರದಿಯಂತೆ ಭಾರತೀಯ ರೈಲ್ವೆಯಲ್ಲಿ 29541 ಹುದ್ದೆಗಳನ್ನು ಎಸ್ಸಿ/ಎಸ್ಟಿ ಮತ್ತು ಓಬಿಸಿ ಗುಂಪಿನ ಯುವಜನರಿಗಾಗಿ ಮೀಸಲಿರಿಸಲಾಗಿದೆ. ಅದರಲ್ಲಿ 17769 ಹುದ್ದೆಗಳು ಖಾಲಿ ಇವೆ. ಗೃಹ ಇಲಾಖೆಯಲ್ಲಿ 3943 ಹುದ್ದೆಗಳು ಈ ವರ್ಗದವರಿಗಾಗಿ ಮೀಸಲಿವೆ. ಆದರೆ 2021 ರ ಮಾರ್ಚ್ ವೇಳೆಗೆ 17493 ಹುದ್ದೆಗಳು ಖಾಲಿ ಇದ್ದವು. ಹಣಕಾಸು ಇಲಾಖೆಯಲ್ಲಿ ಶೇ.70 ರಷ್ಟು ಮೀಸಲಾತಿ ಹುದ್ದೆಗಳಲ್ಲಿ ಶೇ.70 ರಷ್ಟು ಹುದ್ದೆಗಳು ಖಾಲಿ ಇದ್ದವು. ಈ ಇಲಾಖೆಯಲ್ಲಿ 10921 ಹುದ್ದೆಗಳು ಮೀಸಲಾತಿ ವರ್ಗದವರಿಗೆ ಮೀಸಲಿದ್ದರೆ, 7040 ಹುದ್ದೆಗಳನ್ನು ಭರ್ತಿ ಮಾಡಿಲ್ಲ. ಸಿಎಂಐಇ [ದ ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ] ಯ ಪ್ರಸ್ತುತ ವರದಿಗಳ ಪ್ರಕಾರ ಈಗ ನಗರ ನಿರುದ್ಯೋಗ ಶೇ.7.9 ರಷ್ಟಿದೆ ಹಾಗೂ ಗ್ರಾಮೀಣ ನಿರುದ್ಯೋಗ ಶೇ. 7.0 ರಷ್ಟಿದೆ. ಈ ಪ್ರಮಾಣದ ನಿರುದ್ಯೋಗ 100 ವರ್ಷಗಳಲ್ಲೆ ಅಧಿಕ.

ಕರ್ನಾಟಕದ ವಿದ್ಯಾವಂತ ಯುವಜನರ ನಿರುದ್ಯೋಗದ ಪ್ರಮಾಣ ತನ್ನೆಲ್ಲ ಮಿತಿಗಳನ್ನು ಮೀರಿದೆ. ಬಿಜೆಪಿ ಮತ್ತು ಮೋದಿಯವರ ದುರಾಡಳಿತದಿಂದಾಗಿಯೇ ಈ ದುಸ್ಥಿತಿ ಬಂದೊದಗಿದೆ. ರೊಚ್ಚಿಗೆದ್ದ ನಿರುದ್ಯೋಗಿ ಪದವೀಧರರ ರಟ್ಟೆಯ ಸಿಟ್ಟು ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತಿರುಗದಂತೆ ತಡೆಯುವ ಸಲುವಾಗಿಯೇ ನಿರುದ್ಯೋಗಿ ಯುವ ಸಮೂಹದ ಕೈಗೆ ತ್ರಿಶೂಲ, ಮಾರಕಾಸ್ತ್ರಗಳನ್ನು ನೀಡಿ ಜಾತಿ-ಧರ್ಮದ ಹೆಸರಿನಲ್ಲಿ ಪರಸ್ಪರ ಕಚ್ಚಾಡಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

Key words: Modi government – hell – unemployed- young people-Siddaramaiah

The post ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರುದ್ಯೋಗಿ ಯುವ ಜನರಿಗೆ ನರಕ ತೋರಿಸಿದೆ- ಸಿದ್ದರಾಮಯ್ಯ ಟೀಕೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೌಶಲ್ಯಗಳ ಕೊರತೆ: ನಿರುದ್ಯೋಗಿಗಳಾಗುತ್ತಿರುವ ಪದವೀಧರರು – ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು,ಮಾರ್ಚ್,19,2021(www.justkannada.in) : ಉದ್ಯೋಗಕ್ಕೆ ಕೊರತೆಯಿಲ್ಲ. ಆದರೆ, ಕೌಶಲ್ಯಗಳ ಕೊರತೆಯಿಂದಾಗಿ ಪದವಿ, ಸ್ನಾತಕೋತ್ತರ ಪದವಿ ಪಡೆದವರು ನಿರುದ್ಯೋಗಿಗಳಾಗಿದ್ದಾರೆ. ಹೀಗಾಗಿ, ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಉದ್ಯೋಗಕ್ಕೆ ಸಹಕಾರಿಯಾಗುವಂತೆ ಕೌಶಲಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ವಿವಿಯು ಕೆರಿಯರ್ ಹಬ್ ಕಾರ್ಯಕ್ರಮ ರೂಪಿಸಿದೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಸಲಹೆ ನೀಡಿದರು. ಮಾನಸಗಂಗೋತ್ರಿಯ ಬಿ.ಎಂ.ಶ್ರೀ ಸಭಾಂಗಣದಲ್ಲಿ ಮೈಸೂರು ವಿಶ್ವವಿದ್ಯಾನಿಲಯ ಸಿಪಿಡಿಪಿಎಸ್, ಕೆರಿಯರ್ ಹಬ್, ಅಖಿಲ ಭಾರತೀಯ ಸಂಶೋಧಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ “ಕೌಶಲ್ಯ ಅಭಿವೃದ್ಧಿ ತರಬೇತಿ ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರವೇ ಎಲ್ಲರಿಗೂ ಕೆಲಸ ಕೊಡುವುದಕ್ಕೆ ಸಾಧ್ಯವಿಲ್ಲ. ಪದವಿ, ಸ್ನಾತಕೋತ್ತರ ಪದವಿಯೊಂದಿಗೆ ಕೌಶಲ್ಯಗಳನ್ನು ಕಲಿತು ಉದ್ಯೋಗಸೃಷ್ಟಿಸಿಕೊಂಡು, ಬದುಕು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವಿವಿಯ ಕಲಾ, ವಿಜ್ಞಾನ, ವಾಣಿಜ್ಯ ವಿಭಾಗಗಳ ಎಲ್ಲಾ ವಿದ್ಯಾರ್ಥಿಗಳಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಆಯಾ ವಿಭಾಗದವರಿಗೆ ಅವಶ್ಯಕತೆಯಿರುವಂತಹ ಕೌಶಲ್ಯಗಳನ್ನು ಕಲಿಸಿಕೊಡುವುದಕ್ಕೆ ಪ್ರಯತ್ನಿಸಲಾಗುವುದು. ವಿದ್ಯಾರ್ಥಿಗಳು ಇದಕ್ಕೆ ಸಹಕಾರ ನೀಡುವ ಮೂಲಕ ಬದುಕು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮೈಸೂರು ವಿವಿ ಕುಲಸಚಿವ ಪ್ರೊ.ಆರ್.ಶಿವಪ್ಪ ಮಾತನಾಡಿ, ವಿದ್ಯಾರ್ಥಿಗಳು ಬದಲಾದ ಕಾಲಘಟ್ಟದಲ್ಲಿ ಅಗತ್ಯ ಕೌಶಲ್ಯಗಳನ್ನು ಕಲಿತು ಉದ್ಯೋಗ ಸೃಷ್ಠಿಸಿಕೊಳ್ಳದೇ, ವ್ಯವಸ್ಥೆ ಅಥವಾ ವಿವಿಯನ್ನು ದೂರುವುದು ಸರಿಯಲ್ಲ. ಸಿಗುವ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಮುಂದೆ ಬರಬೇಕು ಎಂದು ಹೇಳಿದರು.

ಕರ್ನಾಟಕ ಕೌಶಲ್ಯ ತರಬೇತಿ ಪ್ರಾಧಿಕಾರದ‌ ಪ್ರಾದೇಶಿಕ ಸಮನ್ವಯ ಅಧಿಕಾರಿ ಕೆ.ಎಸ್.ಮಂಜುನಾಥ್ ಮಾತನಾಡಿ, ಪ್ರಸ್ತುತ ಉದ್ಯೋಗಪಡೆದುಕೊಳ್ಳುವುದಕ್ಕೆ ಜ್ಞಾನದ ಜೊತೆಗೆ ಕೌಶಲ್ಯಗಳು ಬಹಳ ಮುಖ್ಯ. ಶಿಕ್ಷಣ ಎನ್ನುವುದು ಅಸ್ತ್ರವಾಗಿದ್ದು, ಅದನ್ನು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದು ಮುಖ್ಯ ಎಂದರು.

ನಿಮ್ಮ ಏಳಿಗೆಗೆ ನೀವೆ ಶಿಲ್ಪಿಗಳು ಎಂಬ ಮಾತಿನಂತೆ ನಮ್ಮ ಏಳಿಗೆಗಾಗಿ ಪ್ರಮಾಣಿಕವಾಗಿ ಶ್ರಮಿಸಬೇಕು. ದೇಶದಲ್ಲಿ ಸಾವಿರಕ್ಕೂ ಹೆಚ್ಚು ವಿವಿಗಳಿದ್ದು, ಪ್ರತಿವರ್ಷ ಕೋಟ್ಯಾಂತರ ಮಂದಿ ಪದವಿ, ಸ್ನಾತಕೋತ್ತರ ಪದವಿ ಪಡೆದುಕೊಳ್ಳುತ್ತಾರೆ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಅಗತ್ಯವಿರುವ ಕೌಶಲ್ಯಗಳನ್ನು ಕಲಿತು ಉದ್ಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕುವೆಂಪು ವಿವಿ ವಿಶ್ರಾಂತ ಕುಲಪತಿ ಪ್ರೊ.ಪಿ.ವೆಂಕಟರಾಮಯ್ಯ,  ಮೈಸೂರು ವಿವಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಎಂ.ಜಿ.ಮಂಜುನಾಥ್, ಅಖಿಲ ಭಾರತೀಯ ಸಂಶೋಧಕರ ಸಂಘದ ಅಧ್ಯಕ್ಷ ಡಾ.ಕುಶಾಲ್ ಬರಗೂರು ಇತರರು ಉಪಸ್ಥಿತರಿದ್ದರು.

ENGLISH SUMMARY….

Graduates are becoming unemployed because of lack of skills: Prof. G. Hemanth Kumar

Mysuru, Mar. 19, 2021 (www.justkannada.in): “There is no dearth of jobs. But today graduates and postgraduates have become unemployed because of a lack of skills. To fill this gap the University of Mysore has come up with the Career Hub program which equips students with employment skills,” opined Prof. G. Hemanth Kumar, Vice-Chancellor, University of Mysore.

He inaugurated the ‘Skill Development Training’ program organized jointly by the CPDPS, Career Hub, and the All India Researchers’ Association, held at the B.M. Sri auditorium in Manasagangotri campus today.

“Government cannot provide jobs to all. Graduates and post-graduates should inculcate skills that are required to get a job and shape their future. Efforts will be made to equip the students with the required skills in all the departments including Arts, Science, and Commerce,” he observed.

Prof. R. Shivappa, Registrar, University of Mysore said, “it is not correct to blame the system or the University without cultivating the required skills as per the changing world. You should try to utilize the available opportunities and come forward in life.”

Prof. P. Venkataramaiah, former Vice-Chancellor, Kuvempu University, M.G. Manjunath, Director, Kannada Research Centre, and Dr. Kushal Baraguru, President, All India Researchers’ Association were present on the occasion.

Keywords: University of Mysore/ Prof. G. Hemanth Kumar/ Vice-Chancellor/ Graduates/ unemployed/ lack of skills

key words : lack-skills-Bachelor’s-Master’s Degree-Unemployed-Chancellor- Prof.G Hemant Kumar

The post ಕೌಶಲ್ಯಗಳ ಕೊರತೆ: ನಿರುದ್ಯೋಗಿಗಳಾಗುತ್ತಿರುವ ಪದವೀಧರರು – ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್  appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಆದಿವಾಸಿ ನಿರುದ್ಯೋಗಿ ಯುವಕ,ಯುವತಿಯರಿಗೆ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ
ಚಾಮರಾಜನಗರ,ನವೆಂಬರ್,12,2020(www.justkannada.in) : ಆದಿವಾಸಿಗಳ ನಿರುದ್ಯೋಗಿ ಯುವಕ ಯುವತಿಯರಿಗೆ ಸೂಕ್ತ ತರಬೇತಿ ಇಲ್ಲದೇ ಸರ್ಕಾರಿ ಉದ್ಯೋಗಗಳಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನೆರವಾಗುವ ನಿಟ್ಟಿನಲ್ಲಿ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ದಿವ್ಯಾಸಾರಾ ಥಾಮಸ್‌ ಹೇಳಿದರು.

ಜಿಲ್ಲಾ ಪೊಲೀಸ್‌ ಇಲಾಖೆ ವತಿಯಿಂದ ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದ ಮೊರಾರ್ಜಿ ದೇಸಾಯಿ ವಸತಿ ಶಾಲಾ ಆವರಣದಲ್ಲಿ ಆಯೋಜಿಸಿರುವ ಆದಿವಾಸಿ ಯುವಜನರಿಗೆ 1 ವಾರ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯ ಆದಿವಾಸಿ ನಿರುದ್ಯೋಗ ಯುವಕ ಮತ್ತು ಯುವತಿಯರಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ನೆರವಾಗುವ ನಿಟ್ಟಿನಲ್ಲಿ ಇಲಾಖೆ ವತಿಯಿಂದ ಏಳು ದಿನಗಳ ಉಚಿತ ಶಿಬಿರ ಹಮ್ಮಿಕೊಳ್ಳಲಾಗಿದೆ. ಇದನ್ನು ಸದಪಯೋಗಪಡಿಸಿಕೊಂಡು ಯಶಸ್ಸು ಸಾಧಿಸಬೇಕು ಎಂದು ಸಲಹೆ ನೀಡಿದರು.‌‌‌

ಕೊಳ್ಳೇಗಾಲದ ಡಿವೈಎಸ್ಪಿ ಜಿ.ನಾಗರಾಜು ಮಾತನಾಡಿ, ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಆದಿವಾಸಿ ಸಮುದಾಯದ ನಿರುದ್ಯೋಗಿಗಳಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡುತ್ತಿರುವುದು ಒಂದು ಉತ್ತಮ ಬೆಳವಣಿಗೆಯಾಗಿದೆ. ಆದಿವಾಸಿ ಯುವ ಸಮುದಾಯ ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

key words  : Competitive-Exam-Training-Adivasi-Unemployed-Youth-Young-Women

The post ಆದಿವಾಸಿ ನಿರುದ್ಯೋಗಿ ಯುವಕ,ಯುವತಿಯರಿಗೆ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಾಂಗ್ರೆಸ್ ಶಾಸಕರೆಲ್ಲಾ ನಿರುದ್ಯೋಗಿಗಳು ಎಂದ ಬಿಜೆಪಿ ಅಭ್ಯರ್ಥಿ ಮುನಿರತ್ನ…
ಬೆಂಗಳೂರು,ಅಕ್ಟೋಬರ್,23,2020(www.justkannada.in):  ರಾಜರಾಜೇಶ್ವರಿನಗರ ಉಪ ಚುನಾವಣಾ ಕಣ ರಂಗೇರಿದ್ದು ಆಡಳಿತ ಪಕ್ಷದ ನಾಯಕರು ಮತ್ತು ವಿಪಕ್ಷದ ನಾಯಕರ ನಡುವೆ ಆರೋಪ, ಪ್ರತ್ಯಾರೋಪ, ವಾದ, ವಾಗ್ವಾದ ಮುಂದುವರೆದಿದೆ. ಈ ಮಧ್ಯೆ ಕಾಂಗ್ರೆಸ್ ಶಾಸಕರನ್ನ ನಿರುದ್ಯೋಗಿಗಳು ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಲೇವಡಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾತನಾಡಿರುವ ಮುನಿರತ್ನ, ಕಾಂಗ್ರೆಸ್ ನಲ್ಲಿ ಈಗ 65 ಶಾಸಕರಿದ್ದಾರೆ. ಕಾಂಗ್ರೆಸ್ ಶಾಸಕರೆಲ್ಲಾ ನಿರುದ್ಯೋಗಿಗಳು, ಅವರಿಗೆಲ್ಲಾ ಉದ್ಯೋಗವೇ ಇಲ್ಲ. ಅವರಿಗೆ ಮಾಡಲು ಕೆಲಸ ಇಲ್ಲ. ಹೀಗಾಗಿ ಅವರದ್ದೇ ಒಂದು ಸಂಘ ಕಟ್ಟಿಕೊಂಡು ಓಡಾಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಏಳೇಳು ಜನ್ಮದಲ್ಲೂ ಡಿಕೆಶಿಗೆ ಸರಿಸಾಟಿಯಾಗಲು ಸಾಧ್ಯವಿಲ್ಲ- ವ್ಯಂಗ್ಯ…

ಯುದ್ಧದಲ್ಲಿ ಎದುರಾಳಿ ಸರಿಸಮ ಇದ್ರೆ ಹೊರಾಡಬಹುದೆಂದು ಹೇಳಿಕೆ ನೀಡುವ ಮೂಲಕ ತಮ್ಮನ್ನ ಟೀಕಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ತಿರುಗೇಟು ನೀಡಿದ ಮುನಿರತ್ನ, ಡಿ.ಕೆ ಶಿವಕುಮಾರ್ ಸರಿಸಮನಾಗಲು ನನಗೆ ಸಾಧ್ಯವಿಲ್ಲ. ಏಳೇಳು ಜನ್ಮದಲ್ಲೂ ಡಿಕೆಶಿಗೆ ಸರಿಸಾಟಿಯಾಗಲು ಸಾಧ್ಯವಿಲ್ಲ. ಡಿಕೆಶಿ ದೊಡ್ಡವರು. ಅವರ ಮುಂದೆ ನಾನು ಸಣ್ಣವನು ಎಂದು ವ್ಯಂಗ್ಯವಾಡಿದರು.

Key words: RR Nagar-BJP candidate- Muniratna- says- all Congress -MLAs – unemployed

The post ಕಾಂಗ್ರೆಸ್ ಶಾಸಕರೆಲ್ಲಾ ನಿರುದ್ಯೋಗಿಗಳು ಎಂದ ಬಿಜೆಪಿ ಅಭ್ಯರ್ಥಿ ಮುನಿರತ್ನ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.