Union Aviation Minister Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಏರ್ ಪೋರ್ಟ್‌ ಸ್ಥಳ ಆಖೈರು, ಉನ್ನತೀಕರಣ: ಕೇಂದ್ರ ವಿಮಾನಯಾನ ಸಚಿವರ ಜತೆ ಎಂ.ಬಿ ಪಾಟೀಲ್ ವಿಸ್ತೃತ ಮಾತುಕತೆ
ನವದೆಹಲಿ,ಜುಲೈ,25,2025 (www.justkannada.in):  ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳ ಆಖೈರು, ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆಗೆ ಒಪ್ಪಿಗೆ, ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸುವುದು ಸೇರಿದಂತೆ ಕರ್ನಾಟಕದ ವೈಮಾನಿಕ ವಲಯದ ಹಲವು ಬೇಡಿಕೆಗಳೊಂದಿಗೆ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ ಪಾಟೀಲ್ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್‌ ನಾಯ್ಡು ಅವರನ್ನು ಭೇಟಿಯಾಗಿ, ಮನವಿ ಸಲ್ಲಿಕೆಯ ಜೊತೆಗೆ ವಿಸ್ತೃತ ಮಾತುಕತೆ ನಡೆಸಿದ್ದಾರೆ.

ಸಚಿವ ಎಂ.ಬಿ ಪಾಟೀಲ್ ಈ ಉದ್ದೇಶದಿಂದ ಹಿರಿಯ ಅಧಿಕಾರಿಗಳಾದ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳಾ, ಕೆಎಸ್‌ಐಐಡಿಸಿ ವ್ಯವಸ್ಥಾಪಕ ನಿರ್ದೇಶಕಿ ಖುಷ್ಬೂ ಗೋಯಲ್‌ ಅವರೊಂದಿಗೆ ಕೇಂದ್ರ ಸಚಿವರ ಜತೆ ಚರ್ಚೆ ನಡೆಸಿದರು.

ಕೇಂದ್ರ ಸಚಿವ ಕೆ.ರಾಮಮೋಹನ್‌ ನಾಯ್ಡುರನ್ನು ಭೇಟಿ ಮಾಡಿದ ಎಂ.ಬಿ ಪಾಟೀಲ್, ʻʻಬೆಂಗಳೂರಿನ ಸಮೀಪ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ. ಇದಕ್ಕಾಗಿ ಆಯ್ಕೆ ಮಾಡಿದ್ದ ಮೂರು ಸ್ಥಳಗಳನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಉನ್ನತ ಮಟ್ಟದ ತಂಡವು ಪರಿಶೀಲಿಸಿದೆ. ಹೀಗಾಗಿ ಒಂದು ಸ್ಥಳವನ್ನು ಆದಷ್ಟು ಶೀಘ್ರವೇ ಆಖೈರು ಮಾಡಿದರೆ, ರಾಜ್ಯವು ಮುಂದಿನ ಕೆಲಸ ಕೈಗೆತ್ತಿಕೊಳ್ಳಲು ಅನುಕೂಲವಾಗಲಿದೆʼʼ ಎಂದಿದ್ದಾರೆ. ಜೊತೆಗೆ, ವಿಜಯಪುರದಲ್ಲಿ ಉದ್ಘಾಟನೆಗೆ ಸಿದ್ಧವಾಗಿರುವ ವಿಮಾನ ನಿಲ್ದಾಣಕ್ಕೆ ಕೇಂದ್ರ ಪರಿಸರ ಇಲಾಖೆಯ ಅನುಮತಿ ಬಾಕಿರುವ ಬಗ್ಗೆ ಚರ್ಚಿಸಿದರು.

ಮೈಸೂರು, ಶಿವಮೊಗ್ಗ, ಹಾಸನ, ಕಾರವಾರ, ರಾಯಚೂರು ವಿಮಾನ ನಿಲ್ದಾಣಗಳ ಅಭಿವೃದ್ಧಿ ಮತ್ತು ಭವಿಷ್ಯದ ಯೋಜನೆಗಳ ಬಗ್ಗೆಯೂ ಸುದೀರ್ಘ ವಾದ ಚರ್ಚೆ ನಡೆದಿದೆ.

ಹುಬ್ಬಳ್ಳಿ, ಬೆಳಗಾವಿ ಏರ್ಪೋರ್ಟ್‌ ಮೇಲ್ದರ್ಜೆಗೇರಿಸಿ

ಪ್ರಾದೇಶಿಕ ಮತ್ತು ಆರ್ಥಿಕ ಅಭಿವೃದ್ಧಿ, ಹಾಗೂ ಉತ್ತರ ಕರ್ನಾಟಕ, ದಕ್ಷಿಣ ಮಹಾರಾಷ್ಟ್ರ ಮತ್ತು ಗೋವಾ ಈ ಭಾಗಗಳಿಗೆ ವಿಮಾನ ಸಂಪರ್ಕ ಸುಧಾರಣೆಯ ಅಗತ್ಯಗಳನ್ನು ಪರಿಗಣಿಸಿ  ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ದರ್ಜೆಗೇರಿಸಬೇಕೆಂದು ಎಂಬಿ ಪಾಟೀಲ್ ಮನವಿ ಸಲ್ಲಿಸಿದ್ದಾರೆ.

ಎರಡೂ ವಿಮಾನ ನಿಲ್ದಾಣಗಳಲ್ಲಿ ಗಂಟೆಗೆ 2,400 ಪ್ರಯಾಣಿಕರನ್ನು ನಿರ್ವಹಿಸಬಲ್ಲ ಹೊಸ ಟರ್ಮಿನಲ್‌ ನಿರ್ಮಿಸಲಾಗುತ್ತಿದೆ. ಎ321 ದರ್ಜೆಯ ವಿಮಾನಗಳ ಕಾರ್ಯಾಚರಣೆ ಸಾಧ್ಯವಾಗುವಂತೆ 12 ಪಾರ್ಕಿಂಗ್‌ ಬೇ ಅಭಿವೃದ್ಧಿಪಡಿಸಲಾಗುತ್ತಿದ್ದು, ರಾತ್ರಿ ವೇಳೆಯಲ್ಲೂ ಲ್ಯಾಂಡಿಂಗ್‌ ಆಗುವಂತೆ ಕ್ರಮ ವಹಿಸಲಾಗಿದೆ. ಜತೆಗೆ ಬೆಳಗಾವಿಯಿಂದ ಫೌಂಡ್ರಿ, ಏರೋಸ್ಪೇಸ್‌ ಸಾಧನಗಳು, ಅಲ್ಯುಮಿನಿಯಂ ಸಾಧನಗಳು, ಹಣ್ಣು ಮತ್ತು ತರಕಾರಿಗಳನ್ನು ಸಾಗಿಸಲು ಪ್ರತ್ಯೇಕ ಟರ್ಮಿನಲ್‌ ಇದೆ. ಇದಲ್ಲದೆ ಬೆಳಗಾವಿಯಲ್ಲಿ 3 ವಿ.ವಿಗಳು, 3 ಮೆಡಿಕಲ್‌ ಕಾಲೇಜುಗಳು, ಕೆಎಲ್‌ ಇ ವಿವಿ ಎಲ್ಲವೂ ಇದ್ದು ವಿಶೇಷವಾಗಿ ಮಲೇಷ್ಯಾದಿಂದ ಹೆಚ್ಚಿನ ವಿದ್ಯಾರ್ಥಿಗಳು ಇಲ್ಲಿಗೆ ಬರುತ್ತಿದ್ದಾರೆ. ಇನ್ನೊಂದೆಡೆ, ರಕ್ಷಣಾ ವಲಯಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರಕಾರದ ಏರ್‌ ಮೆನ್‌ ತರಬೇತಿ ಶಾಲೆ, ಕಮ್ಯಾಂಡೋ ತರಬೇತಿ ಕೇಂದ್ರ, ಜೂನಿಯರ್‌ ಲೀಡರ್ಸ್‌ ವಿಂಗ್‌, ಇನ್ಫೆಂಟ್ರಿ ಸ್ಕೂಲ್‌, ಮರಾಠಾ ಲಘು ಪದಾತಿ ದಳದ ಕೇಂದ್ರ ಮತ್ತು ಐಟಿಬಿಪಿ ತರಬೇತಿ ಕೇಂದ್ರಗಳಿವೆ. ಇವೆಲ್ಲವನ್ನೂ ಮೇಲ್ದರ್ಜೆಗೇರಿಸಲು ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಅವರು ಮನದಟ್ಟು ಮಾಡಿಕೊಟ್ಟಿದ್ದಾರೆ.

ಹುಬ್ಬಳ್ಳಿಯಲ್ಲಿ ಕೂಡ 16,900 ಚ.ಮೀ. ವಿಸ್ತೀರ್ಣದ ಹೊಸ ಟರ್ಮಿನಲ್‌ ನಿರ್ಮಿಸಲಾಗುತ್ತಿದ್ದು, ಎಬಿ320 ದರ್ಜೆಯ ವಿಮಾನಗಳ ನಿರ್ವಹಣೆ ಸಾಧ್ಯವಾಗುವಂತೆ ಮಾಡಲಾಗುತ್ತಿದೆ. ಇಲ್ಲಿರುವ ಕಾರ್ಗೋ ಟರ್ಮಿನಲ್‌ನಲ್ಲಿ ಈಗ ವಾರ್ಷಿಕ 15 ಟನ್‌ ಸರಕು ಸಾಗಣೆ ಆಗುತ್ತಿದೆ. ಜತೆಗೆ ವರ್ಷಕ್ಕೆ 3 ಲಕ್ಷ ಪ್ರಯಾಣಿಕರ ನಿರ್ವಹಣೆ ನಡೆಯುತ್ತಿದೆ. ಮೊದಲಿನಿಂದಲೂ ವಾಣಿಜ್ಯ ವಲಯವಾಗಿರುವ ಹುಬ್ಬಳ್ಳಿ-ಧಾರವಾಡದಲ್ಲಿ ಇತ್ತೀಚೆಗೆ ಐಐಟಿ, ಐಐಐಟಿ ಸಂಸ್ಥೆಗಳು ಬಂದಿದ್ದು, ಕಿಮ್ಸ್‌ ಆಸ್ಪತ್ರೆ ಕೂಡ ಗಮನ ಸೆಳೆಯುತ್ತಿದೆ ಎಂದು ಅವರು ವಿವರಿಸಿದ್ದಾರೆ.

755 ಎಕರೆ ಇರುವ ಬೆಳಗಾವಿ ಏರ್ಪೋರ್ಟ್‌ 1990ರಿಂದ ಮತ್ತು 957 ಎಕರೆ ಇರುವ ಹುಬ್ಬಳ್ಳಿ ಏರ್ಪೋರ್ಟ್‌ 1980ರಿಂದ ಸಕ್ರಿಯವಾಗಿವೆ. ಇವುಗಳನ್ನು ಅಂತಾರಾಷ್ಟ್ರೀಯ ಮೇಲ್ದರ್ಜೆಗೆ ಏರಿಸಿದರೆ ಮಧ್ಯಪ್ರಾಚ್ಯ ದೇಶಗಳು, ಸಿಂಗಪುರ ಸೇರಿದಂತೆ ಆಗ್ನೇಯ ಏಷ್ಯಾ ರಾಷ್ಟ್ರಗಳೊಂದಿಗೆ ಸುಗಮ ವಿಮಾನ ಸಂಚಾರ ಸಾಧ್ಯವಾಗಲಿದೆ. ಜತೆಗೆ ಇ-ಕಾಮರ್ಸ್‌ ಅಭಿವೃದ್ಧಿಯಾಗಲಿದ್ದು, ಉತ್ತರ ಕರ್ನಾಟಕದ ಈ ಎರಡೂ ನಗರಗಳು ಲಾಜಿಸ್ಟಿಕ್ಸ್‌ ಹಬ್‌ ಆಗಿ ಬೆಳವಣಿಗೆಯಾಗಲಿವೆ ಎಂದು ಅವರು ಕೇಂದ್ರ ಸಚಿವರಿಗೆ ತಿಳಿಸಿದ್ದಾರೆ.

ರಾಜ್ಯವನ್ನು ಪಾಲುದಾರ ಎಂದು ಪರಿಗಣಿಸಿ

ಸಚಿವ ಎಂ ಬಿ ಪಾಟೀಲ್ ಇದೇ ಸಂದರ್ಭದಲ್ಲಿ, ನಾಗರಿಕ ವಿಮಾನಯಾನ ವಲಯದಲ್ಲಿ ಕರ್ನಾಟಕ ರಾಜ್ಯವನ್ನು ಪಾಲುದಾರ (ಸ್ಟೇಕ್‌ಹೋಲ್ಡರ್‌) ಎಂದು ಪರಿಗಣಿಸಬೇಕು. ಇದರಿಂದಾಗಿ ವಿಮಾನ ನಿಲ್ದಾಣ ಪ್ರಾಧಿಕಾರ ನಿರ್ವಹಿಸುತ್ತಿರುವ ರಾಜ್ಯದ ಮಂಗಳೂರು, ಮೈಸೂರು, ಹುಬ್ಬಳ್ಳಿ, ಕಲಬುರಗಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳಿಂದ ರಾಜ್ಯಕ್ಕೂ ಲಾಭದ ಪಾಲು ಸಿಗಲಿದೆ. ಈ ವಿಷಯದಲ್ಲಿ ರಾಜ್ಯದ ಪಾತ್ರವನ್ನು ಕೇವಲ ಭೂಸ್ವಾಧೀನ ಮತ್ತು ಸೌಕರ್ಯಗಳ ಅಭಿವೃದ್ಧಿಗೆ ಮಾತ್ರ ಸೀಮಿತಗೊಳಿಸಬಾರದು. ಜೊತೆಗೆ ನಾಗರಿಕ ವಿಮಾನಯಾನ ವಲಯದಲ್ಲಿನ ಆಸ್ತಿ ನಗದೀಕರಣ ಯೋಜನೆಯಲ್ಲೂ ರಾಜ್ಯವನ್ನು ಪಾಲುದಾರ ಎಂದು ಗುರುತಿಸಬೇಕು. 2021ರಲ್ಲಿ ಖಾಸಗೀಕರಣಕ್ಕೆಂದು ಗುರುತಿಸಿದ ದೇಶದ 13 ವಿಮಾನ ನಿಲ್ದಾಣಗಳಲ್ಲಿ ಹುಬ್ಬಳ್ಳಿ ಕೂಡ ಒಂದಾಗಿದೆ. ಆದರೆ, ಆ ಯೋಜನೆಯಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಯಾವ ಪ್ರಗತಿಯೂ ಕಂಡುಬಂದಿಲ್ಲ ಎಂದು ನಾಯ್ಡು ಅವರಿಗೆ  ಸಚಿವ ಎಂ.ಬಿ ಪಾಟೀಲ್ ಆಗ್ರಹಿಸಿದ್ದಾರೆ.

Key words: Airport, location, upgradation,  M.B. Patil, Union Aviation Minister

The post ಏರ್ ಪೋರ್ಟ್‌ ಸ್ಥಳ ಆಖೈರು, ಉನ್ನತೀಕರಣ: ಕೇಂದ್ರ ವಿಮಾನಯಾನ ಸಚಿವರ ಜತೆ ಎಂ.ಬಿ ಪಾಟೀಲ್ ವಿಸ್ತೃತ ಮಾತುಕತೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವಿಮಾನ ಪತನ ದುರಂತ: ಕೇಂದ್ರ ವಿಮಾನಯಾನ ಸಚಿವರ ರಾಜೀನಾಮೆಗೆ ಈಶ್ವರ್ ಖಂಡ್ರೆ ಆಗ್ರಹ
ಕಲಬುರುಗಿ,ಜೂನ್,13,2025 (www.justkannada.in):  ನಿನ್ನೆ ಅಹಮದಾಬಾದ್ ನ ಮೇಘಾನಿ ಪ್ರದೇಶದಲ್ಲಿ ವಿಮಾನ ಪತನವಾಗಿ 241 ಮಂದಿ ಸಾವನ್ನಪ್ಪಿದ ದುರಂತಕ್ಕೆ ಸಂಬಂಧಿಸಿದಂತೆ ಕೇಂದ್ರ ವಿಮಾನಯಾನ ಸಚಿವರು ರಾಜೀನಾಮೆ ನೀಡುವಂತೆ  ಅರಣ್ಯ ಸಚಿವ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಈಶ್ವರ್ ಖಂಡ್ರೆ,  ಕೇಂದ್ರ ಸರ್ಕಾರ ವಿಮಾನ ದುರಂತದ ಘಟನೆ ಹೊಣೆ ಹೊರಬೇಕು. ವಿಮಾನಯಾನ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು. ಇಂತಹ ದುರಂತ ಮರುಕಳಿಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ನಿಷ್ಪಕ್ಷಪಾತ ತನಿಖೆ ನಡೆಸಿ ಆ ವರದಿ ಜನರ ಮುಂದೆ ಇಡಬೇಕು ಎಂದು ಒತ್ತಾಯಿಸಿದರು.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ  ಕಾಲ್ತುಳಿತ ಘಟನೆ ಆದಾಗ ಬಿಜೆಪಿಯವರು ಸಿಎಂ, ಡಿಸಿಎಂ ರಾಜೀನಾಮೆ ಕೇಳುತ್ತಿದ್ದರು. ಆದರೆ ಕುಂಭಮೇಳ , ಪಹಲ್ಗಾಮ್ ಘಟನೆಯಲ್ಲಿ ರಾಜೀನಾಮೆ ಕೊಟ್ಟರಾ? ಸಾವಿನಲ್ಲಿ ಯಾರೂ ರಾಜಕೀಯ ಮಾಡಬಾರದು. ಟಾಟಾ ಗ್ರೂಪ್ ಮೃತ ಕುಟುಂಬಸ್ಥರಿಗೆ ಒಂದು ಕೋಟಿ ಪರಿಹಾರ ನೀಡಿದೆ. ಆದರೆ ಈ ಪರಿವಾರದವರಿಗೆ ಎಷ್ಟು ಕೋಟಿ ಕೊಟ್ಟರು ಕಡಿಮೆಯೇ ನಿರ್ವಹಣೆ ಮಾಡುವ ಡಿಜಿಸಿಎ ವಿಮಾನಯಾನ ಮಂತ್ರಿ ಏನು ಮಾಡುತ್ತಿದ್ದರು ಘಟನೆಗೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು. ನಿರ್ಲಕ್ಷ ವಹಿಸಿದ ಎಲ್ಲರ ವಿರುದ್ಧ ಸೂಕ್ತವಾದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Key words: Plane crash, Ishwar Khandre, demands, resignation, Union Aviation Minister

The post ವಿಮಾನ ಪತನ ದುರಂತ:  ಕೇಂದ್ರ ವಿಮಾನಯಾನ ಸಚಿವರ ರಾಜೀನಾಮೆಗೆ ಈಶ್ವರ್ ಖಂಡ್ರೆ ಆಗ್ರಹ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ಏರ್ ಪೋರ್ಟ್ ರನ್ ವೇ ವಿಸ್ತರಣೆ ಕಾಮಗಾರಿ ಶೀಘ್ರ ಕೈಗೆತ್ತಿಕೊಳ್ಳಿ- ಕೇಂದ್ರ ವಿಮಾನಯಾನ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಮನವಿ
ನವದೆಹಲಿ,ಏಪ್ರಿಲ್,4,2025 (www.justkannada.in): ಮೈಸೂರು ಏರ್ ಪೋರ್ಟ್ ರನ್ ವೇ ವಿಸ್ತರಣೆಯ ಕಾಮಗಾರಿಯನ್ನು ಶೀಘ್ರವೇ ಕೈಗೆತ್ತಿಕೊಳ್ಳಬೇಕು ಎಂದು  ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರಿಗೆ  ಸಿಎಂ ಸಿದ್ದರಾಮಯ್ಯ ಮನವಿ ಸಲ್ಲಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ಕೇಂದ್ರ  ನಾಗರಿಕ ವಿಮಾನ ಯಾನ  ಖಾತೆ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿ ಮನವಿ ಪತ್ರ ಸಲ್ಲಿಸಿದರು

ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ  ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ರಾಜ್ಯ ಸರ್ಕಾರವು ದಿನಾಂಕ 6-10-2005 ರಂದು ಒಪ್ಪಂದ ಮಾಡಿಕೊಂಡಿದೆ. ಒಪ್ಪಂದದ ನಿಯಮ  ಬಿ (2) (v)  ಪ್ರಕಾರ ಕಾರ್ಯನಿಯೋಜಕರು ವಿಮಾನ ನಿಲ್ದಾಣದ ವಿಸ್ತರಣೆಗಾಗಿ ಅಗತ್ಯವಿರುವ ಹೆಚ್ಚುವರಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಯಾವುದೇ ಋಣಭಾರವಿಲ್ಲದೆ ನಿಯೋಜಿತರಿಗೆ ಉಚಿತವಾಗಿ ವರ್ಗಾಯಿಸಬೇಕು. ಅದರಂತೆ, ಅಗತ್ಯವಿರುವ ಭೂಮಿಯನ್ನು  ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಉಚಿತವಾಗಿ ವರ್ಗಾಯಿಸಲಾಗಿದೆ. ಒಪ್ಪಂದದ ಷರತ್ತು ಬಿ 2 (VI) ಪ್ರಕಾರ, ನಿಯೋಜಿತರು  ಮೈಸೂರು ವಿಮಾನ ನಿಲ್ದಾಣದ ಹೆಚ್ಚಿನ ಅಭಿವೃದ್ಧಿಯ ಬಂಡವಾಳ ವೆಚ್ಚ, ಮಾರ್ಪಾಡುಗಳು, ಬಲಪಡಿಸುವಿಕೆ ಮತ್ತು ಮೇಲ್ದರ್ಜೆಗೇರಿಸುವ ಎಲ್ಲಾ ವೆಚ್ಚಗಳನ್ನು ಭರಿಸಬೇಕು. ಅದರಂತೆ, ಮೈಸೂರು ವಿಮಾನ ನಿಲ್ದಾಣದ ವಿಸ್ತರಣೆಗೆ ಅಗತ್ಯವಿರುವ ಬಂಡವಾಳ ಹಾಗೂ ಇನ್ನಿತರೆ ವೆಚ್ಚಗಳನ್ನು  ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವೇ ಭರಿಸಬೇಕಿದೆ. ಈ ಹಿನ್ನೆಲೆಯಲ್ಲಿ, ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ ಅಗತ್ಯವಿರುವ 240 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರವು 319.14 ಕೋಟಿಗಳ ಅನುದಾನವನ್ನು  ಬಿಡುಗಡೆ ಮಾಡಿದೆ. ಭೂ ಸ್ವಾಧೀನ ಪ್ರಕ್ರಿಯೆಯು ಅಂತಿಮ ಹಂತದಲ್ಲಿದೆ ಎಂದು ಮನವಿ ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹಾಗೆಯೇ ನವೆಂಬರ್ 2024 ರಲ್ಲಿ ಕಾವೇರಿ ನೀರಾವರಿ ನಿಗಮ ನಿಯಮಿತವು(ಸಿ. ಎನ್.ಎನ್.ಎಲ್) ವಿಮಾನ ನಿಲ್ದಾಣ ವಿಸ್ತರಣೆ ಪ್ರದೇಶದಲ್ಲಿ ಎರಡು ಕಂದಕಗಳ  ಮತ್ತು 7 ಕಾಲುವೆಗಳ ಸ್ಥಳಾಂತರಕ್ಕೆ ವರದಿಯನ್ನು ಸಲ್ಲಿಸಿದ್ದು, ಇದಕ್ಕೆ 70 ಕೋಟಿಗಳ ವೆಚ್ಚವಾಗಲಿದೆ. ಅಂತೆಯೇ, ಕೆಪಿಟಿಸಿಎಲ್  ಕೂಡ ಹೈ-ಟೆನ್ಷನ್ ಲೈನ್ ಗಳ   ಮತ್ತು  ಚೆಸ್ಕಾಂ ಲೋ ಟೆನ್ಶನ್ ವೈರ್ ಗಳ   ಮಾರ್ಗ ಬದಲಾವಣೆಗೆ  31.82 ಕೋಟಿಗಳ ಅಂದಾಜು ವೆಚ್ಚವಾಗಲಿದೆ ಎಂದು ತಿಳಿಸಿದ್ದು, ಒಟ್ಟಾರೆ ಸದರಿ ಕಾಮಗಾರಿಗೆ 101.82 ಕೋಟಿಗಳ ಅನುದಾನದ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಆದ್ದರಿಂದ,  ರಾಜ್ಯ ಸರ್ಕಾರವು ಮೈಸೂರು ವಿಮಾನ ನಿಲ್ದಾಣದ ರನ್  ವೇ  ವಿಸ್ತರಣೆಗೆ 240 ಎಕರೆ  ಭೂ ಸ್ವಾಧೀನಕ್ಕೆ ತಗಲುವ 319.14 ಕೋಟಿಗಳ ಭೂ ಸ್ವಾಧೀನದ ವೆಚ್ಚವನ್ನು ಭರಿಸಿದ್ದು, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು ವಿಸ್ತರಣೆಯ ಅಂದಾಜು ವೆಚ್ಚ 101.84 ಕೋಟಿಗಳ  ಯುಟಿಲಿಟಿ ಸ್ಥಳಾಂತರದ ಯೋಜನೆಯನ್ನು ರೂಪಿಸಿ ಶ್ರೀಘ್ರವಾಗಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕು ಎಂದು ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

Key words: Mysore Airport, Run Way, Extension, CM Siddaramaiah, Union Aviation Minister

The post ಮೈಸೂರು ಏರ್ ಪೋರ್ಟ್ ರನ್ ವೇ ವಿಸ್ತರಣೆ ಕಾಮಗಾರಿ ಶೀಘ್ರ ಕೈಗೆತ್ತಿಕೊಳ್ಳಿ- ಕೇಂದ್ರ ವಿಮಾನಯಾನ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಮನವಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.