ಕಾಬೂಲ್ ವಿಮಾನ ನಿಲ್ದಾಣ ಬಂದ್ ಮಾಡಿದ ತಾಲೀಬಾನ್ ಉಗ್ರ ಸಂಘಟನೆ

ಬೆಂಗಳೂರು, ಆಗಸ್ಟ್, 29, 2021 (www.justkannada.in): ದೇಶ ತೊರೆಯಲು ಮುಂದಾಗುವ ಬೃಹತ್ ಪ್ರಮಾಣದ ಜನಸಂಖ್ಯೆಯನ್ನು ನಿಯಂತ್ರಿಸಲು ತಾಲೀಬಾನ್ ಕಾಬೂಲ್ ವಿಮಾನ ನಿಲ್ದಾಣವನ್ನು ಮುಚ್ಚಿದೆ.

ಹೌದು. ತಾಲೀಬಾನ್ ಉಗ್ರ ಸಂಘಟನೆ ಆ.29 ರಂದು ಕಾಬೂಲ್ ವಿಮಾನ ನಿಲ್ದಾಣವನ್ನು ಮುಚ್ಚಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಚೆಕ್ ಪಾಯಿಂಟ್ ನಿರ್ಮಿಸಲಾಗಿದೆ.

ಆ.31 ರ ವೇಳೆಗೆ ಆಫ್ಘಾನಿಸ್ತಾನದಿಂದ ತಮ್ಮ ಸೇನಾ ಪಡೆಗಳನ್ನು ವಾಪಸ್ ಕರೆಸಿಕೊಳ್ಳುವುದಕ್ಕೆ ಅಮೆರಿಕ-ಬ್ರಿಟನ್ ಗಳಿಗೆ ತಾಲಿಬಾನಿಗಳು ಎಚ್ಚರಿಕೆ ನೀಡಿದ್ದಾರೆ.

ಈ ನಡುವೆ ಅಫ್ಘಾನಿಸ್ತಾನದ ವಿಮಾನ ನಿಲ್ದಾಣದಲ್ಲಿ ಗುರುವಾರ ನಡೆದ ಬಾಂಬ್ ಸ್ಫೋಟದ ಮಾದರಿಯಲ್ಲೇ ಮತ್ತೊಂದು ಸ್ಫೋಟ ನಡೆಯಬಹುದು ಎಂದು ಅಮೆರಿಕ ಎಚ್ಚರಿಸಿದೆ.