Saturday, September 19, 2026

BDA Apartments

ಮಾಸಿ ಸಿಎಂಗಳ ಟಾಕ್ ವಾರ್: ಸಿದ್ದರಾಮಯ್ಯ ವಿರುದ್ಧ ಬಿಎಸ್ವೈ ಕಿಡಿ ! BDA JK_Adv BDA Adv
Home Front Page ಮಾಸಿ ಸಿಎಂಗಳ ಟಾಕ್ ವಾರ್: ಸಿದ್ದರಾಮಯ್ಯ ವಿರುದ್ಧ ಬಿಎಸ್ವೈ ಕಿಡಿ !

ಮಾಸಿ ಸಿಎಂಗಳ ಟಾಕ್ ವಾರ್: ಸಿದ್ದರಾಮಯ್ಯ ವಿರುದ್ಧ ಬಿಎಸ್ವೈ ಕಿಡಿ !

ಬೆಂಗಳೂರು, ಅಕ್ಟೋಬರ್ 25, 2021 (www.justkannada.in): ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಬಿಎಸ್ ವೈ ಮಾತಿನ ಚಕಮಕಿ ಮುಂದುವರಿದಿದೆ.

ಬಿಜೆಪಿ ವಿರುದ್ಧ ಅಪಪ್ರಚಾರ ಮಾಡುತ್ತಿರುವ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಮಾತುಗಳಿಗೆ ಕವಡೆ ಕಾಸಿನ ಬೆಲೆ ಇಲ್ಲ ಎಂದು ಬಿ.ಎಸ್. ಯಡಿಯೂರಪ್ಪ ಟೀಕಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತದ ಬಿಜೆಪಿ ಪಕ್ಷಕ್ಕೆ ಬೆಂಬಲ ಕೊಡಬೇಕು ಎಂದು ತೀರ್ಮಾನ ಮಾಡಿದ್ದಾರೆ. ಇಲ್ಲಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಗೆ ಮೂರು ಕಾಸಿನ ಕಿಮ್ಮತ್ತಿಲ್ಲ ಎಂದು ಕಿಡಿಕಾರಿದ್ದಾರೆ.

‘ಸಿಂಧಗಿ, ಹಾನಗಲ್ ಉಪ ಚುನಾವಣೆಯಲ್ಲಿ ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ. ಫಲಿತಾಂಶ ಬಂದ ಮೇಲೆ ನಿಮಗೇ ಗೊತ್ತಾಗುತ್ತದೆ. ಬಿಜೆಪಿ ಗೆಲುವು ಶತಸಿದ್ದ ಎಂದು ಬಿಎಸ್ ವೈ ವಿಶ್ವಾಸ ವ್ಯಕ್ತಪಡಿಸಿದ್ದಾರೆ.