ಲಿಂಗಾಯತರ ಬಗ್ಗೆ ಹಗುರವಾಗಿ ಮಾತನಾಡುವುದು ಸಿದ್ಧರಾಮಯ್ಯೆಗೆ ಶೋಭೆ ತರಲ್ಲ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.

ಶಿವಮೊಗ್ಗ,ಏಪ್ರಿಲ್,24,2023(www.justkannada.in):  ಲಿಂಗಾಯತ ಸಿಎಂ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಕುರಿತು ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಕಿಡಿಕಾರಿದ್ದಾರೆ.

ಈ ಕುರಿತು ಶಿವಮೊಗ್ಗದಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ಲಿಂಗಾಯತರ ಬಗ್ಗೆ ಹಗುರವಾಗಿ ಮಾತನಾಡುವುದು ಮಾಜಿ ಸಿಎಂ ಸಿದ್ಧರಾಮಯ್ಯಗೆ ಶೋಭೆ ತರಲ್ಲ. ಸಿದ್ದರಾಮಯ್ಯಗೆ ಈಗಾಗಲೇ ಸೋಲು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹೇಳಿಕೆ ಕೊಡುತ್ತಿದ್ದಾರೆ. ಸಿದ್ಧರಾಮಯ್ಯ ಹೇಳಿಕೆ ಖಂಡಿಸುತ್ತೇನೆ. ಸಿದ್ದರಾಮಯ್ಯ ಜವಾಬ್ದಾರಿಯಿಂದ ಮಾತನಾಡಬೇಕು. ಚುನಾವಣೆ ಬರುತ್ತೆ ಹೋಗುತ್ತೆ ಎಂದು ಟಾಂಗ್ ನೀಡಿದರು.

ಕಾಂಗ್ರೆಸ್ ಸೇರ್ಪಡೆಯಾದ ಜಗದೀಶ್ ಶೆಟ್ಟರ್ ಸಹ ಸೋಲುತ್ತಾರೆ. ರಾಜ್ಯಕ್ಕೆ ಅಮಿತ್ ಶಾ ಎಂಟ್ರಿಕೊಟ್ಟಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ಕೂಡ ಬರುತ್ತಾರೆ ಎಂದು ತಿಳಿಸಿದರು.

Key words: Talking – Lingayats – Siddaramaiah-  Former CM- BS Yeddyurappa.