ತಮಿಳುನಾಡಿಗೆ ಹೆಚ್ಚುವರಿ ನೀರು: 107 ಅಡಿಗೆ ಕುಸಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ.

ಮಂಡ್ಯ,ಆಗಸ್ಟ್,19,2023(www.justkannada.in): ರಾಜ್ಯ ಸರ್ಕಾರ ತಮಿಳುನಾಡಿಗೆ  ಹೆಚ್ಚುವರಿ ನೀರು ಹರಿಸಿದ ಹಿನ್ನೆಲೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 107 ಅಡಿಗೆ ಕುಸಿದಿದೆ.

ರಾಜ್ಯ ಸರ್ಕಾರ ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಸುತ್ತಿದೆ.  ಕೆಆರ್​ಎಸ್​​ ಜಲಾಶಯದ ಗರಿಷ್ಠ ಮಟ್ಟ 124.80 ಅಡಿ. ಸದ್ಯ ಈಗ 107 ಅಡಿಗೆ ಕುಸಿದಿದೆ. ಕೆಆರ್ ಎಸ್ ಜಲಾಶಯ ಭರ್ತಿಯಾಗುವ ಮುನ್ನವೇ ತಮಿಳುನಾಡಿಗೆ ಸರ್ಕಾರ ನೀರು ಹರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಮಂಡ್ಯದ ವಿವಿಧ ಕಡೆಗಳಲ್ಲಿ ಸರ್ಕಾರದ ನಡೆ ಖಂಡಿಸಿ  ರೈತರ ಪ್ರತಿಭಟನೆಗಳು ನಡೆಯುತ್ತಿದೆ. ಇತ್ತ ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ವಿಪಕ್ಷಗಳ ನಾಯಕರುಗಳು  ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Key words: Tamil Nadu- caveri water -KRS Reservoir -107 feet.