ಮೇಕೆದಾಟು ಯೋಜನೆಗೆ ವಿರೋಧಿಸಿ ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ.   

ನವದೆಹಲಿ,ಜೂನ್,13,2022(www.justkannada.in):  ಕರ್ನಾಟಕದ ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ತಮಿಳುನಾಡು ಪದೇ ಪದೇ ಅಡ್ಡಗಾಲು ಹಾಕುತ್ತಲೇ ಇದ್ದು ಇದೀಗ ಪ್ರಧಾನಿ ನರೇಂದ್ರ ಮೋದಿಗೆ ತಮಿಳುನಾಡು ಸಿಎಂ ಸ್ಟಾಲಿನ್ ಪತ್ರ ಬರೆದಿದ್ದಾರೆ.

ಹೌದು, ಮೇಕೆದಾಟು ಡ್ಯಾಂ ನಿರ್ಮಾಣ ವಿರೋಧಿಸಿ ತಮಿಳುನಾಡು ಸಿಎಂ ಸ್ಟಾಲಿನ್ ಪತ್ರ ಬರೆದಿದ್ದಾರೆ.  ಈ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ಬರೆವವರೆಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಚರ್ಚೆ ನಡೆಸಬಾರದು. ಮೇಕೆದಾಟು ಡ್ಯಾಮ್ ಬಗ್ಗೆ ಚರ್ಚೆ ನಡೆಸಬಾರದು ಜಲಶಕ್ತಿ ಇಲಾಖೆಗೆ ಸೂಚನೆ ನೀಡಬೇಕೆಂದು ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ.

Key words: Tamil Nadu- CM –letter-Prime Minister -opposing – Mekedatu Dam.