ಕಾವೇರಿ ನೀರಿಗಾಗಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ತಮಿಳುನಾಡು ಸಿಎಂ ಎಂ ಕೆ ಸ್ಟ್ಯಾಲಿನ್

ಬೆಂಗಳೂರು, ಆಗಸ್ಟ್ 05, 2023 (www.justkannada.in): ಕಾವೇರಿ ನೀರಿಗಾಗಿ ತಮಿಳುನಾಡು ಸಿಎಂ ಎಂ ಕೆ ಸ್ಟ್ಯಾಲಿನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ತಮಿಳುನಾಡು ಪಾಲಿನ ಕಾವೇರಿ ನೀರನ್ನು ತಕ್ಷಣವೇ ಬಿಡುಗಡೆ ಮಾಡಲು ಮತ್ತು ಜೂನ್ ಮತ್ತು ಜುಲೈ ಕೊರತೆಯನ್ನು ನೀಗಿಸಲು ಕರ್ನಾಟಕಕ್ಕೆ ಸಲಹೆ ನೀಡಬೇಕು ಎಂ ಕೆ ಸ್ಟ್ಯಾಲಿನ್ ಪತ್ರದಲ್ಲಿ ಕೋರಿದ್ದಾರೆ.

ನಮ್ಮ ಪಾಲಿನ ಕಾವೇರಿ ನೀರು ಬಿಡುಗಡೆಗೆ ಕರ್ನಾಟಕಕ್ಕೆ ಸೂಚಿಸಿ ಎಂದು ಸ್ಟಾಲಿನ್ ಪತ್ರದ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆಗೆ ಕರ್ನಾಟಕಕ್ಕೆ ಸೂಚನೆ ನೀಡಿ. ತಮ್ಮ ಕುರುವಾಯಿ ಭತ್ತದ ಬೆಳೆ ಉಳಿಸಲು ಕಾವೇರಿ ಡೆಲ್ಟಾದ ರೈತರು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ನಮ್ಮ ಪಾಲಿನ ಕಾವೇರಿ ನೀರು ಬಿಡುಗಡೆಗೆ ಕರ್ನಾಟಕಕ್ಕೆ ಸೂಚಿಸಿ ಎಂದು ಮನವಿ ಮಾಡಿದ್ದಾರೆ.

ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಅನ್ವಯ ಕರ್ನಾಟಕ ಸರ್ಕಾರ ನಡೆದುಕೊಳ್ಳಬೇಕು ಎಂದು ಪ್ರತಿಪಾದಿಸಿದ್ದಾರೆ.