Thursday, August 13, 2026

BDA Apartments

Home Crime ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ತನ್ವೀರ್ ಸೇಠ್:  ಸೀಮೆ ಎಣ್ಣೆ ಸುರಿದುಕೊಂಡು ಬೆಂಬಲಿಗನಿಂದ ಆತ್ಮಹತ್ಯೆಗೆ ಯತ್ನ.

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ತನ್ವೀರ್ ಸೇಠ್:  ಸೀಮೆ ಎಣ್ಣೆ ಸುರಿದುಕೊಂಡು ಬೆಂಬಲಿಗನಿಂದ ಆತ್ಮಹತ್ಯೆಗೆ ಯತ್ನ.

ಮೈಸೂರು,ಫೆಬ್ರವರಿ,28,2023(www.justkannada.in):  ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅನಾರೋಗ್ಯದ ಕಾರಣ ನೀಡಿ ತಮ್ಮ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಈ ಕುರಿತು ಕೆಪಿಸಿಸಿ ಅಧ್ಯಕ್ಷ  ಡಿ.ಕೆ ಶಿವಕುಮಾರ್ ಗೆ ತನ್ವೀರ್ ಸೇಠ್ ಪತ್ರ ಬರೆದಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ತನ್ವೀರ್ ಸೇಠ್,  ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ. ಅನಾರೋಗ್ಯ ಕಾರಣದಿಂಧ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ವಿಪಕ್ಷನಾಯಕ ಸಿದ್ಧರಾಮಯ್ಯ ಮತ್ತು ರಣದೀಪ್ ಸಿಂಗ್  ಸುರ್ಜೇವಾಲಾರಿಗೂ ಪತ್ರ ಬರೆದಿದ್ದೇನೆ. ಅನಾರೋಗ್ಯದಿಂದಾಗಿ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ.

ಪೆಟ್ರೋಲ್ ಸುರಿದುಕೊಂಡು ಬೆಂಬಲಿಗ ಆತ್ಮಹತ್ಯೆಗೆ ಯತ್ನ.

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ವಿಚಾರ ತಿಳಿದ ಶಾಸಕ ತನ್ವೀರ್ ಸೇಠ್ ಬೆಂಬಲಿಗರು ನಿವಾಸ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದರು. ನಿವೃತ್ತಿ ಘೋಷಣೆ ನಿರ್ಧಾರದಿಂದ ಹಿಂದೆ ಸರಿಯುವಂತೆ ಆಗ್ರಹಿಸಿದರು. ಈ ವೇಳೆ ಬೆಂಬಲಿಗನೋರ್ವ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.  ಕೂಡಲೇ ಬಾಟಲಿಯನ್ನ ಉದಯಗಿರಿ ಠಾಣಾ ಪೊಲೀಸರು ಕಿತ್ತೆಸೆದಿದ್ದಾರೆ.

Key words: Tanveer Sait- announced – retirement – electoral politics