ಕೆಲಸ ಕೊಡಿಸಲು ಸಹಾಯ ಮಾಡಲಿಲ್ಲ ಎಂಬ ಕಾರಣಕ್ಕೆ ತನ್ವೀರ್ ಸೇಠ್ ಮೇಲೆ ಹಲ್ಲೆ: ವಿಚಾರಣೆ ವೇಳೆ ಆರೋಪಿ ಫರಾನ್ ಪಾಷಾ

kannada t-shirts

ಮೈಸೂರು, ನವೆಂಬರ್ 18, 2019 (www.justkannada.in): ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿ ಫರಾನ್ ಪಾಷಾ ಪೊಲೀಸ್ ವಶದಲ್ಲಿದ್ದು, ವಿಚಾರಣೆ ನಡೆಸಲಾಗಿದೆ.

ಮೈಸೂರು ನರಸಿಂಹರಾಜ ಠಾಣೆ ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿದಾಗ ಕೆಲಸ ಕೊಡಿಸಲು ಸಹಾಯ ಮಾಡಲಿಲ್ಲ ಎಂಬ ಕಾರಣಕ್ಕೆ ತನ್ವೀರ್ ಸೇಠ್ ಅವರನ್ನು ಹತ್ಯೆ ಮಾಡಲು ಯತ್ನಿಸಿರುವುದಾಗಿ ಹೇಳಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಕರ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ತನ್ವೀರ್ ಸೇಠ್ ಅವರ ಮೇಲೆ ಗೌಸಿಯಾ ನಗರ ನಿವಾಸಿ 27 ವರ್ಷದ ಫರಾನ್ ಪಾಷಾ ಏಕಾಏಕಿ ದಾಳಿ ಮಾಡಿದ್ದ.

website developers in mysore