Saturday, October 24, 2026

Dasara Wishes

ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ DasraWishes_JK DasraWishes JK
Happy Dasara
Home Front Page ತೆರಿಗೆದಾರರಿಗೆ ಗುಡ್ ನ್ಯೂಸ್: 12 ಲಕ್ಷದವರೆಗೆ ಆದಾಯ ತೆರಿಗೆ ವಿನಾಯ್ತಿ ಘೋಷಣೆ

ತೆರಿಗೆದಾರರಿಗೆ ಗುಡ್ ನ್ಯೂಸ್: 12 ಲಕ್ಷದವರೆಗೆ ಆದಾಯ ತೆರಿಗೆ ವಿನಾಯ್ತಿ ಘೋಷಣೆ

ನವದೆಹಲಿ,ಫೆಬ್ರವರಿ,1,2025 (www.justkannada.in):  ಕೇಂದ್ರ ಸರ್ಕಾರವು ಕೇಂದ್ರ ಬಜೆಟ್ ನಲ್ಲಿ ಮಧ್ಯಮ ವರ್ಗ ಹಾಗೂ ವೇತನದಾರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.

ಇಂದು ಕೇಂದ್ರ ಬಜೆಟ್ ಮಂಡನೆ ಮಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 12 ಲಕ್ಷದವರೆಗೆ ಆದಾಯ ತೆರಿಗೆ ವಿನಾಯ್ತಿ ಘೋಷಣೆ ಮಾಡಿದ್ದಾರೆ. 12 ಲಕ್ಷದವರೆಗೆ ಆದಾಯ ತೆರಿಗೆ ಇಲ್ಲ. ವಾರ್ಷಿಕ ಆದಾಯ 12 ಲಕ್ಷದವರೆಗೂ ತೆರಿಗೆ ವಿನಾಯಿತಿ ನೀಡಲಾಗಿದೆ

ಈ ಮೂಲಕ ಬಜೆಟ್ ನಲ್ಲಿ ಮಧ್ಯಮವರ್ಗಕ್ಕೆ ಗಿಫ್ಟ್ ನೀಡಿದ್ದಾರೆ. ಇನ್ನು ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Key words:  Good news, taxpayers, Union Budget