ಪರೀಕ್ಷಾ ಪೆ ಚರ್ಚಾ ಸಂವಾದದಲ್ಲಿ ಹಂಗಳ ಗ್ರಾಮದ ಶಿಕ್ಷಕ ಭಾಗಿ..

ಗುಂಡ್ಲುಪೇಟೆ,ಜನವರಿ,29,2024(www.justkannada.in):  ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಪರೀಕ್ಷೆ ಎದುರಿಸುವ ಕುರಿತು ವಿದ್ಯಾರ್ಥಿಗಳೊಂದಿಗೆ 7ನೇ ಆವೃತ್ತಿಯ ಪರೀಕ್ಷಾ ಪೆ ಚರ್ಚಾ ಸಂವಾದ ನಡೆಸಿದರು.

ಈ ಕಾರ್ಯಕ್ರಮದಲ್ಲಿ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲ ಚಂದ್ರಶೇಖರ್ ಸಹ ಆಯ್ಕೆಯಾಗಿದ್ದರು. ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿಗಳು ನಡೆಸಿದ ಸಂವಾದಲ್ಲಿ ಭಾಗಿಯಾಗಿದ್ದರು.

ಪ್ರತಿ ವರ್ಷ ಆನ್ ಲೈನ್ ನಲ್ಲಿ ಸಂವಾದಕ್ಕೆ ಸಂಬಂಧಪಟ್ಟಂತೆ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಇದರಲ್ಲಿ ಉತ್ತಮ ಪ್ರಶ್ನೆ ಕೇಳಿದ ವಿದ್ಯಾರ್ಥಿಗಳನ್ನು ಪ್ರಧಾನಮಂತ್ರಿಗಳೊಂದಿಗಿನ ಸಂವಾದಕ್ಕೆ ಆಯ್ಕೆ ಮಾಡಲಾಗುತ್ತದೆ. ಈ ಬಾರಿ ರಾಜ್ಯದ ನೂರಾರು ಶಾಲೆಗಳಿಂದ ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಲ್ಲಿ ಹೊಸಕೋಟೆ ಸರ್ಕಾರಿ ಪ್ರೌಢಶಾಲೆ 10ನೇ ತರಗತಿ ವಿದ್ಯಾರ್ಥಿ ಸೂಲಿಬೆಲೆ ನಿವಾಸಿ ಯೋಗೇಂದ್ರ ಪ್ರಸಾದ್ ಹಾಗೂ ಮೈಸೂರು ಜಿಲ್ಲೆಯ ಸೇಂಟ್ ಮೇರೀಸ್ ಕಾನ್ವೆಂಟ್ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಸಿ. ಹರ್ಷಿಕ ಆಯ್ಕೆಯಾಗಿದ್ದರು.

ಈ ಇಬ್ಬರು ವಿದ್ಯಾರ್ಥಿಗಳೊಂದಿಗೆ ಮಾರ್ಗದರ್ಶಕರಾಗಿ ಹಂಗಳ ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲ ಚಂದ್ರಶೇಖರ್ ಭಾಗಿಯಾಗಿದ್ದರು.

Key words: teacher -Hangala village- participated –modi-pariksha pe charcha