Monday, October 12, 2026

Dasara Wishes

BJP DasraWishes_JK DasraWishes JK
Happy Dasara
Home Front Page ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ಪಾಠವಿಲ್ಲದೆ ಮಕ್ಕಳ ಪರದಾಟ

ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ಪಾಠವಿಲ್ಲದೆ ಮಕ್ಕಳ ಪರದಾಟ

ಹಾಸನ,ಡಿಸೆಂಬರ್,28,2024 (www.justkannada.in): ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಉಳಿದಿವೆ ಎಂದು ಇತ್ತೀಚೆಗೆ ವರದಿಯಾಗಿದ್ದು,  ಅಂತೆಯೇ  ಇದೀಗ ಶಿಕ್ಷಕರ ಕೊರತೆಯಿಂದಾಗಿ ವಿದ್ಯಾರ್ಥಿಗಳು ಪಾಠವಿಲ್ಲದೆ ಪರದಾಟ ನಡೆಸುತ್ತಿರುವ ಘಟನೆ ಹಾಸನ ಜಿಲ್ಲೆ ಹೊಳೇನರಸಿಪುರ ತಾಲ್ಲೂಕಿನ ನಗರನಹಳ್ಳಿ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ನಗರನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಉಂಟಾಗಿದೆ. ಪರೀಕ್ಷೆ ಹತ್ತಿರ ಬರುತ್ತಿದ್ದು ಶಿಕ್ಷಕರಿಲ್ಲದೆ ಪಾಠಗಳಾಗಿಲ್ಲ ಹೇಗೆ ಪರೀಕ್ಷೆ ಬರೆಯುವುದು ಎಂದು ವಿದ್ಯಾರ್ಥಿಗಳು ವಿಡಿಯೋ ಮೂಲಕ ಅಳಲು ತೊಡಿಕೊಂಡಿದ್ದಾರೆ. ಸರ್ಕಾರಿ ಶಾಲೆಯ ಅವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ಸದ್ಯ ವೈರಲ್ ಆಗಿದೆ. ಸಂಸದ ಶ್ರೇಯಸ್ ಪಟೇಲ್ ಅವರು ಸಮಸ್ಯೆ ಬಗೆಹರಿಸಿ, ಪರೀಕ್ಷೆ ವೇಳೆಗಾದರು ಶಿಕ್ಷಕರ ನೆಮಕ ಮಾಡಿಸಿ ಎಂದು ಮನವಿ ಮಾಡಿದ್ದಾರೆ.

ಎಸ್ ಎಸ್ ಎಲ್ ಸಿ ಪರೀಕ್ಷೆಗೆ 86 ದಿನ ಬಾಕಿ ಇದ್ದರೂ ಶಿಕ್ಷಕರ ನೇಮಕ ಮಾಡಿಲ್ಲ. ಶಿಕ್ಷಕರ ಕೊರತೆಯ ಸಮಸ್ಯೆ ಬಗೆಹರಿಸಿ ಎಂದು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

ಶಾಲೆಗೆ ಸಂಸದ ಶ್ರೇಯಸ್ ಪಟೇಲ್ ಭೇಟಿ

ಶಿಕ್ಷಕರ ಕೊರತೆ ಬಗ್ಗೆ ವಿಡಿಯೋ ವೈರಲ್ ಆಗುತ್ತಿದ್ದಂತೆ ಹಾಸನ ಸಂಸದ ಶ್ರೇಯಸ್ ಪಟೇಲ್ ನಗರನಹಳ್ಳಿ ಸರ್ಕಾರಿ ಶಾಲೆಗೆ ಭೇಟಿ ನೀಡಿ ಸಮಸ್ಯೆ ಆಲಿಸಿದ್ದಾರೆ. ಪರೀಕ್ಷೆ ಸಮಯವಾಗಿರುವ ಕಾರಣ ತಾತ್ಕಾಲಿಕ ವ್ಯವಸ್ಥೆಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

Key words: Teacher shortage, students, struggle, Government school