ಒಂದು ವಾರದೊಳಗೆ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಿ- ಸಿಎಂ ಬಿಎಸ್ ವೈ ಸೂಚನೆ

ಬೆಂಗಳೂರು,ಅಕ್ಟೋಬರ್,21,2020(www.justkannada.in):  ಶಿಕ್ಷಕರ ವರ್ಗಾವಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಒಂದು ವಾರದೊಳಗೆ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸುವಂತೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ, ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಈ ಕುರಿತು ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸಲ್ಲಿಸಲಾಗಿದ್ದ  ವರ್ಗಾವಣೆ ಸಂಬಂಧದ ಮನವಿಗೆ ಸ್ಪಂದಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ,ಈ ಪತ್ರದ ದಿನಾಂಕದಿಂದ ಒಂದು ವಾರದ ಒಳಗಾಗಿ ಶಿಕ್ಷಣ ಇಲಾಖೆಯ ವರ್ಗಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿ, ವರ್ಗಾವಣೆ ಪ್ರಕ್ರಿಯೆಯನ್ನು ಪ್ರಾರಂಭಿಸುವಂತೆ ಆದೇಶಿಸಿದ್ದಾರೆ.Teacher- Transfer -Schedule -within –week-education department-CM BS yeddyurappa

ಶಾಲಾ, ಕಾಲೇಜು ಶಿಕ್ಷಕರು, ಉಪನ್ಯಾಸಕರು ವರ್ಗಾವಣೆ ಸೌಲಭ್ಯಗಳಿಲ್ಲದೇ ಆತಂಕಕ್ಕೆ ಒಳಗಾಗಿದ್ದಾರೆ. ಅಲ್ಲದೇ ಶಿಕ್ಷಕರು, ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆಯನ್ನು ಪ್ರಾರಂಭಿಸುವಂತೆ  ರಾಜ್ಯ ಸರ್ಕಾರಿ ನೌಕರರ ಸಂಘದ ಸಿಎಂಗೆ ಮನವಿ ಮಾಡಿದ್ದರು.

Key words: Teacher- Transfer -Schedule -within –week-education department-CM BS yeddyurappa