Sunday, August 9, 2026

BDA Apartments

Home Front Page ಶಿಕ್ಷಕರ ವರ್ಗಾವಣೆ ತಾತ್ಕಾಲಿಕ ಸ್ಥಗಿತ: ಸಚಿವ ಸುರೇಶ್ ಕುಮಾರ್ ಘೋಷಣೆ

ಶಿಕ್ಷಕರ ವರ್ಗಾವಣೆ ತಾತ್ಕಾಲಿಕ ಸ್ಥಗಿತ: ಸಚಿವ ಸುರೇಶ್ ಕುಮಾರ್ ಘೋಷಣೆ

ಬೆಂಗಳೂರು, ಸೆಪ್ಟೆಂಬರ್ 02, 2019 (www.justkannada.in): ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆಯನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಘೋಷಿಸಿದ್ದಾರೆ.

ಹಲವು ಬಾರಿ ಸ್ಥಗಿತಗೊಂಡಿದ್ದ ಶಿಕ್ಷಕರ ವರ್ಗಾವಣೆ ಮತ್ತೆ ಆರಂಭಗೊಂಡಿತ್ತು. ಕೌನ್ಸಿಲಿಂಗ್ ಮೂಲಕವೂ ಮುಕ್ತಾಯ ಹಂತಕ್ಕೆ ಬಂದು ನಿಂತಿತ್ತು. ಇದೀಗ ಮತ್ತೆ ತಾತ್ಕಾಲಿಕವಾಗಿ ಸ್ಥಗಿತ ಮಾಡಿರುವುದಾಗಿ ಇಲಾಖೆ ಸಚಿವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಕುಮಾರ್, ಹಲವು ಶಿಕ್ಷಕರು ವರ್ಗಾವಣೆಯನ್ನು ಮಾಡದಂತೆ ಮನವಿ ಮಾಡಿದ್ದಾರೆ. ಹೀಗಾಗಿ ಶಿಕ್ಷಕರ ವರ್ಗಾವಣೆಗೆ ತಾತ್ಕಾಲಿಕವಾಗಿ ತಡೆ ನೀಡಲಾಗಿದೆ ಎಂದು ಹೇಳಿದರು.