Sunday, October 25, 2026

Dasara Wishes

ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ DasraWishes_JK DasraWishes JK
Happy Dasara
Home Front Page ಜಾತಿ ಗಣತಿ ಸಮೀಕ್ಷೆ ವೇಳೆ ಮೂವರು ಶಿಕ್ಷಕರ ಸಾವು: ತಲಾ 20 ಲಕ್ಷ ರೂ. ಪರಿಹಾರ...

ಜಾತಿ ಗಣತಿ ಸಮೀಕ್ಷೆ ವೇಳೆ ಮೂವರು ಶಿಕ್ಷಕರ ಸಾವು: ತಲಾ 20 ಲಕ್ಷ ರೂ. ಪರಿಹಾರ ಘೋಷಣೆ

ಬೆಂಗಳೂರು,ಅಕ್ಟೋಬರ್,7,2025 (www.justkannada.in):  ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ನಡೆಯುವಾಗ ಮೂವರು ಶಿಕ್ಷಕರು ಮೃತಪಟ್ಟಿದ್ದಾರೆ. ಇವರಿಗೆ ತಲಾ 20 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.

ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಾತಿಗಣತಿ ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲು ಒಪ್ಪದ, ಹಿಂದೇಟು ಹಾಕುವವರ ವಿರುದ್ಧ ಸರ್ಕಾರ ಶಿಸ್ತಿನ ಕ್ರಮ ಕೈಗೊಳ್ಳಲಿದೆ. ಸೆಪ್ಟೆಂಬರ್ 22 ರಿಂದ ರಾಜ್ಯದ ಜನರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆ ಶುರುವಾಗಿದೆ. ಸಮೀಕ್ಷೆ ಇವತ್ತು ಮುಗಿಯಬೇಕಿತ್ತು. ಕೆಲವು ಜಿಲ್ಲೆಗಳಲ್ಲಿ ಪೂರ್ತಿ ಆಗಿಲ್ಲ. ಕೊಪ್ಪಳ ಶೇ 97 ಆಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ67 ರಷ್ಟು ಆಗಿದೆ. ಹೀಗೆ ವ್ಯತ್ಯಾಸಗಳಿವೆ. ಹೀಗಾಗಿ ಶಿಕ್ಷಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಆಯೋಗ ಚರ್ಚಿಸಿದ್ದಾರೆ. 1 ಲಕ್ಷ 20 ಸಾವಿರ ಶಿಕ್ಷಕರು ಸೇರಿ ಒಂದು ಲಕ್ಷ ಅರವತ್ತು ಸಾವಿರ ಸಿಬ್ಬಂದಿ ಸಮೀಕ್ಷೆಯಲ್ಲಿ ತೊಡಗಿದ್ದಾರೆ.

ವಿಧಾನ‌ ಪರಿಷತ್ ಸದಸ್ಯ ಪುಟ್ಟಣ್ಣ ಮತ್ತು ಶಿಕ್ಷಕರ ಸಂಘ ಹೆಚ್ಚುವರಿಯಾಗಿ 10 ದಿನಗಳ‌ ಕಾಲಾವಕಾಶ ಕೇಳಿ ಮನವಿ ಮಾಡಿದ್ದಾರೆ. ಈ ಮನವಿ ಪುರಸ್ಕರಿಸಿ ಅಕ್ಟೋಬರ್ 18ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಿದ್ದೇವೆ. 8 working days ರಜೆ ಘೋಷಿಸಲಾಗಿದೆ ಎಂದು ತಿಳಿಸಿದರು.

ಬೆಂಗಳೂರು ನಗರದಲ್ಲಿ 6700 ಜನ ಶಿಕ್ಷಕರು ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ 46 ಲಕ್ಷ ಮನೆಗಳಿವೆ. ದಿನಕ್ಕೆ 10-15 ಮನೆಗಳ ಸಮೀಕ್ಷೆ ನಡೆಸುವ ಗುರಿ ನೀಡಲಾಗಿದೆ. ಬೆಂಗಳೂರಿನಲ್ಲಿ ನರಕ ಚತುರ್ದಶಿ ಒಳಗೆ ಸಮೀಕ್ಷೆ ಮುಗಿಸಲು ಸೂಚಿಸಲಾಗಿದೆ. ಶಿಕ್ಷಕರು ಕೂಡ ಇಷ್ಟರೊಳಗೆ ಸಮೀಕ್ಷೆ ಮುಗಿಸುವ ಭರವಸೆ ನೀಡಿದ್ದಾರೆ. GBA ಏರಿಯಾದಲ್ಲಿ ತಡವಾಗಿ ಸಮೀಕ್ಷೆ ಶುರುವಾಗಿದೆ. ಚುನಾವಣಾ ಆಯೋಗದ ಕೆಲಸ ಮತ್ತು ಇತರೆ ತರಬೇತಿ ಇದ್ದಿದ್ದರಿಂದ ತಡವಾಗಿ ಶುರುವಾಗಿದೆ. ಆದ್ದರಿಂದ GBA ಏರಿಯಾದಲ್ಲಿ ಸಮೀಕ್ಷೆ ಪ್ರಮಾಣ ಕಡಿಮೆ ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: Three, teachers, die, caste census, survey, Rs 20 lakh, compensation