ಏಷ್ಯಾಕಪ್ ಟೂರ್ನಿಗೆ ಟೀಂ ಇಂಡಿಯಾ ಪ್ರಕಟ: ರಾಹುಲ್, ಅಯ್ಯರ್ ಕಮ್ ಬ್ಯಾಕ್

ಮುಂಬೈ,ಆಗಸ್ಟ್,21,2023(www.justkannada.in): ಆಗಸ್ಟ್ 30 ರಿಂದ ಆರಂಭವಾಗಲಿರುವ ಏಕದಿನ ಏಷ್ಯಾಕಪ್‌ ಟೂರ್ನಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ.

ಭಾರತ ತಂಡವನ್ನ ಬಿಸಿಸಿಐ ಪ್ರಕಟಿಸಿದ್ದು ರೋಹಿತ್ ಶರ್ಮಾ ನಾಯಕರಾದರೇ , ಉಪನಾಯಕರಾಗಿ ಹಾರ್ದಿಕ್ ಪಾಂಡ್ಯ ಮುಂದುವರೆಯಲ್ಲಿದ್ದಾರೆ.  ಎಂದಿನಂತೆ ವಿರಾಟ್ ಕೊಹ್ಲಿ ತಂಡದಲ್ಲಿದ್ದಾರೆ. ಬಹಳ ದಿನಗಳ ನಂತರ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಕಮ್ ಬ್ಯಾಕ್ ಮಾಡಿದ್ದಾರೆ.

ಏಷ್ಯಾಕಪ್ ಮೂಲಕ ಟೀಂ ಇಂಡಿಯಾಕ್ಕೆ ಮರಳಿದ್ದಾರೆ. ಆದರೆ ಈ ಮೊದಲೇ ಊಹಿಸಿದಂತೆ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಹಾಗೂ ಸ್ಪಿನ್ ಬೌಲರ್ ಚಹಲ್ ರನ್ನ ಕೈಬಿಡಲಾಗಿದೆ.

ಆದರೆ ಅಚ್ಚರಿಯ ಆಯ್ಕೆ ಎಂಬಂತೆ ಕೇವಲ 8 ಟಿ20 ಪಂದ್ಯಗಳನ್ನಾಡಿರುವ ಹಾಗೂ ಒಂದೇ ಒಂದು ಏಕದಿನ ಪಂದ್ಯವನ್ನಾಡಿದ ಅನುಭವ ಹೊಂದಿರದ ಎಡಗೈ ಬ್ಯಾಟರ್ ತಿಲಕ್ ವರ್ಮಾ ಅವರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ.

ತಂಡ ಹೀಗಿದೆ..

ರೋಹಿತ್ ಶರ್ಮಾ(ನಾಯಕ), ಶುಭ್​ ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿಕೇಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್. ಹಾರ್ದಿಕ್ ಪಾಂಡ್ಯ(ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್. ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ.

Key words: Team India -announced -Asia Cup -tournament