ಬೆಂಗಳೂರು, ಡಿಸೆಂಬರ್ 03, 2019 (www.justkannada.in): 2020 ರಲ್ಲಿ ನಡೆಯಲಿರುವ ಅಂಡರ್ 19 ವಿಶ್ವಕಪ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದ್ದು, ಕರ್ನಾಟಕದ ಶುಭಾಂಗ್ ಹೆಗ್ಡೆ ಹಾಗೂ ವಿದ್ಯಾಧರ್ ಪಾಟೀಲ್ ಅವರು ಆಯ್ಕೆಯಾಗಿದ್ದಾರೆ.
ಕರ್ನಾಟಕದ ವಿವಿಧ ವಯೋಮಿತಿ ತಂಡಗಳಲ್ಲಿ ಆಡಿದ ಅನುಭವ ಹೊಂದಿರುವ ಎಡಗೈ ಸ್ಪೀನ್ನರ್ ಶುಭಾಂಗ್ ಹೆಗ್ಡೆ ಕಳೆದ ಆವೃತ್ತಿಯಲ್ಲಿ ಬರೋಡ ಎದುರು ರಣಜಿ ಟ್ರೋಫಿಗೆ ಪದಾರ್ಪಣೆ ಮಾಡಿದ್ದರು, ಇದೀಗ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ರಾಯಚೂರಿನ ಚಿಕ್ಕಸುಗೂರಿನ ವಿದ್ಯಾಧರ್ ಕಳೆದ ಜುಲೈನಲ್ಲಿ ಇಂಗ್ಲೆಂಡ್ ನಲ್ಲಿ ಜರುಗಿದ ತ್ರಿಕೋನ ಸರಣಿಯಲ್ಲಿ ಕಿರಿಯರ ತಂಡ ಸೇರಿಕೊಂಡಿದ್ದರು. ಉತ್ತಮ ಬೌಲಿಂಗ್ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದಾರೆ.
ಅಂಡರ್ 19 ವಿಶ್ವಕಪ್ ಭಾರತ ತಂಡ ಹೀಗಿದೆ….
ಪ್ರಿಯಂ ಗಾರ್ಗ್ (ನಾಯಕ), ಧ್ರುವ್ ಚಂದ್ ಜುರೆಲ್ (ಉಪನಾಯಕ, ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ತಿಲಾಕ್ ವರ್ಮಾ, ದಿವ್ಯಾಂಶ್ ಸಕ್ಸೆನಾ, ಶುಭಾಂಗ್ ಹೆಗ್ಡೆ, ರವಿ ಬಿಶ್ನೋಯ್, ಆಕಾಶ್ ಸಿಂಗ್, ಕಾರ್ತಿಕ್ ತ್ಯಾಗಿ, ಅಥರ್ವ ಅಂಕೋಲಕರ್, ಕುಮಾರ್ ಕುಶಾಗ್ರ, ಸುಶಾಂತ್ ಮಿಶ್ರಾ ಮತ್ತು ವಿದ್ಯಾದರ್ ಪಾಟೀಲ್






