Sunday, October 11, 2026

Dasara Wishes

ಬಡವರು, ವೃತ್ತಿ ಆಧಾರಿತ ಕಾರ್ಮಿಕರಿಗೆ ತಲಾ ಹತ್ತು ಸಾವಿರ ರೂ. ಧನ ಸಹಾಯ ನೀಡುವಂ...
Happy Dasara
Home Front Page ಇಂಗ್ಲೆಂಡ್’ನಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಕೋವಿಡ್ ಸೋಂಕು ದೃಢ

ಇಂಗ್ಲೆಂಡ್’ನಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಕೋವಿಡ್ ಸೋಂಕು ದೃಢ

ಬೆಂಗಳೂರು, ಜೂನ್ 26, 2022 (www.justkannada.in):  ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಕೋವಿಡ್ -19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಇಂಗ್ಲೆಂಡ್ ನ ಲೀಸೆಸ್ಟನ್ ನಲ್ಲಿ ನಡೆದ ಆಂಟಿಜೆನ್ ಟೆಸ್ಟ್ ನಲ್ಲಿ ರೋಹಿತ್ ಶರ್ಮಾಗೆ ಕೋವಿಡ್ -19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ರೋಹಿತ್ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವೈದ್ಯಕೀಯ ತಂಡದೊಂದಿಗೆ ಪ್ರತ್ಯೇಕವಾಗಿ ಇರಿಸಲಾಗಿದೆ.

ರೋಹಿತ್ ಪ್ರಸ್ತುತ ತಂಡದ ಹೋಟೆಲ್ನಲ್ಲಿ ಪ್ರತ್ಯೇಕವಾಗಿದ್ದಾರೆ. ಬಿಸಿಸಿಐ ವೈದ್ಯಕೀಯ ತಂಡದ ಆರೈಕೆಯಲ್ಲಿದ್ದಾರೆ’ ಎಂದು ಬಿಸಿಸಿಐ ಟ್ವೀಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದೆ.