Thursday, September 24, 2026

BDA Apartments

ಜೆಡಿಎಸ್ ಪಕ್ಷದಿಂದ ಸಿಎಂ ಇಬ್ರಾಹಿಂ ಅಧಿಕೃತ ಉಚ್ಚಾಟನೆ BDA JK_Adv BDA Adv
Home Front Page ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಕಠಿಣ ತಾಲೀಮು

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಕಠಿಣ ತಾಲೀಮು

ಬೆಂಗಳೂರು, ಜುಲೈ  28, 2021 (www.justkannada.in): ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಟೀಮ್ ಇಂಡಿಯಾದ ಆಟಗಾರರು ಈ ಸಂದರ್ಭದಲ್ಲಿ ಕಠಿಣ ಅಭ್ಯಾಸವನ್ನು ಆರಂಭಿಸಿದ್ದಾರೆ.

ನಾಯಕ ವಿರಾಟ್ ಕೊಹ್ಲಿ, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ಕೆಎಲ್ ರಾಹುಲ್, ಅಜಿಂಕ್ಯಾ ರಹಾನೆ ಸೆಂಟರ್ ಪಿಚ್‌ನಲ್ಲಿ ಬ್ಯಾಟಿಂಗ್ ನಡೆಸಿದ್ದಾರೆ. ಕೊರೊನಾವೈರಸ್‌’ನಿಂದ ಚೇತರಿಸಿಕೊಂಡಿರುವ ರಿಷಭ್ ಪಂತ್ ಕೂಡ ಇವರ ಜೊತೆಗೆ ಬ್ಯಾಟಿಂಗ್ ನಡೆಸಿದ್ದಾರೆ.

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿ ನಾಟಿಂಗ್‌ಹ್ಯಾಮ್, ಲಂಡನ್, ಲೀಡ್ಸ್ ಮತ್ತು ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿದೆ.

ಆಗಸ್ಟ್ 4 ರಿಂದ ಆರಂಭವಾಗಲಿರುವ ಈ ಸರಣಿ ಸೆಪ್ಟೆಂಬರ್ 14ರ ವರೆಗೆ ನಡೆಯಲಿದೆ. ಈ ಸರಣಿಯ ಮೂಲಕ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಎರಡನೇ ಆವೃತ್ತಿಯಲ್ಲಿ ಭಾಗಿಯಾಗಲಿದೆ.