Tuesday, September 22, 2026

BDA Apartments

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ರೆಡಿ BDA JK_Adv BDA Adv
Home Front Page ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ರೆಡಿ

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ರೆಡಿ

ಸಿಡ್ನಿ, ನವೆಂಬರ್ 13, 2019 (www.justkannada.in): ನ.14ರಿಂದ ಆರಂಭವಾಗಲಿರುವ ಬಾಂಗ್ಲಾದೇಶ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಸಜ್ಜಾಗಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಸರಣಿಯ ಕೊನೆಯ ಪಂದ್ಯದಲ್ಲಿ ಗಾಯದ ಸಮಸ್ಯೆಯಿಂದಾಗಿ ಹೊರಗುಳಿದಿದ್ದ ಕುಲದೀಪ್ ಯಾದವ್ 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಟೀಂ ಇಂಡಿಯಾಗೆ ಕ್ಯಾಪ್ಟನ್ ಕೊಹ್ಲಿ ವಾಪಾಸಗಿದ್ದಾರೆ.

ರಾಂಚಿಯಲ್ಲಿ ನಡೆದಿದ್ದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಕುಲದೀಪ್ ಯಾದವ್ ಬದಲಿಗೆ ಆಯ್ಕೆಯಾಗಿದ್ದ ಸ್ಪಿನ್ನರ್ ಶಹಬಾಝ್ ನದೀಂ ತಂಡದಿಂದ ಹೊರಗುಳಿದಿದ್ದಾರೆ.

ಭಾರತದ ಟೆಸ್ಟ್ ತಂಡ: ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಮಾಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಹನುಮ ವಿಹಾರಿ, ವೃದ್ಧಿಮಾನ್ ಸಹಾ(ವಿಕೆಟ್‌ಕೀಪರ್), ರವೀಂದ್ರ ಜಡೇಜ, ಆರ್.ಅಶ್ವಿನ್, ಕುಲದೀಪ್ ಯಾದವ್, ಮುಹಮ್ಮದ್ ಶಮಿ, ಉಮೇಶ್ ಯಾದವ್, ಇಶಾಂತ್ ಶರ್ಮಾ, ಶುಭಮನ್ ಗಿಲ್, ರಿಷಭ್ ಪಂತ್.