ಮುಂಬೈ,ಡಿಸೆಂಬರ್,20,2025 (www.justkannada.in): ಮುಂಬರುವ 2026ರ ಟಿ-20 ವಿಶ್ವಕಪ್ ಭಾರತ ತಂಡವನ್ನು ಪ್ರಕಟಿಸಲಾಗಿದ್ದು ಸೂರ್ಯಕುಮಾರ್ ಯಾದವ್ ಮೊದಲ ಬಾರಿಗೆ ತಂಡವನ್ನು ಮುನ್ನಡೆಸಲಿದ್ದಾರೆ.
2026 ಫೆಬ್ರವರಿ 7 ರಿಂದ ಪ್ರಾರಂಭವಾಗುವ ಟಿ20 ವಿಶ್ವಕಪ್ ಗೆ ಭಾರತ ತಂಡವನ್ನು ಪ್ರಕಟವಾಗಿದೆ. ಮುಂಬೈನಲ್ಲಿ ಶನಿವಾರ ಬಿಸಿಸಿಐ ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ್ ಅಗರ್ಕರ್ ಹಾಗೂ ಸೂರ್ಯಕುಮಾರ್ ಯಾದವ್ ಸಭೆ ನಡೆಸಿದ ಬಳಿಕ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಸ್ಪೋಟಕ ಬ್ಯಾಟ್ಸ್ ಮನ್ ಅಭಿಷೇಕ್ ಶರ್ಮಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹಾಗೆಯೇ ಸಂಜು ಸ್ಯಾಮ್ಸನ್, ತಿಲಕ್ ವರ್ಮಾ ಸಹ ತಂಡದಲ್ಲಿ ತಮ್ಮ ಸ್ಥಾನವನ್ನು ಭದ್ರ ಪಡಿಸಿಕೊಂಡಿದ್ದಾರೆ. ತಂಡದಿಂದ ಜಿತೇಶ್ ಶರ್ಮಾ ಹಾಗೂ ಇತ್ತೀಚಿನ ದಿನಗಳಲ್ಲಿ ಕಳಪೆ ಪ್ರದರ್ಶನ ತೋರಿರುವ ಶುಭಮನ್ ಗಿಲ್ ಅವರನ್ನು ತಂಡದಿಂದ ಹೊರಗಿಡಲಾಗಿದ್ದು, ಸೈಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಅದ್ಬುತ ಪ್ರದರ್ಶನ ನೀಡಿದ ಇಶಾನ್ ಕಿಶನ್ ಗೆ ಚಾನ್ಸ್ ಸಿಕ್ಕಿದೆ.
ರಿಂಕು ಸಿಂಗ್ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಉಳಿದಂತೆ ಆಲ್ ರೌಂಡರ್‌ಗಳಾಗಿ ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್ ಗೆ ಮಣೆಹಾಕಲಾಗಿದ್ದು ಬೌಲರ್ ಕೋಟಾದಲ್ಲಿ ಜಸ್ಪ್ರೀತ್ ಬೂಮ್ರಾ, ಅರ್ಶದೀಪ್ ಸಿಂಗ್, ಕುಲದೀಪ್ ಯಾದವ್, ವರುಣ್ ಚಕ್ರವರ್ತಿಗೆ ಅವಕಾಶ ಸಿಕ್ಕಿದೆ.
ತಂಡ ಹೀಗಿದೆ..
ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್ (ಉಪನಾಯಕ), ಜಸ್ಪ್ರೀತ್ ಬುಮ್ರಾ, ರಿಂಕು ಸಿಂಗ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ವಾಷಿಂಗ್ಟನ್ ಸುಂದರ್,
Key words: Team India, announced, T20 World Cup







