2ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾಗೆ ಭರ್ಜರಿ ಗೆಲುವು…

ಚೆನ್ನೈ,ಫೆಬ್ರವರಿ,16,2021(www.justkannada.in):  ಪ್ರವಾಸಿ ಇಂಗ್ಲೇಂಡ್ ವಿರುದ್ದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋತು ಮುಖಭಂಗ ಅನುಭವಿಸಿದ್ದ  ಟೀಂ ಇಂಡಿಯಾ ಇದೀಗ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಗಳಿಸುವ ಮೂಲಕ ಸೇಡು ತೀರಿಸಿಕೊಂಡಿದೆ. jk

ಇಲ್ಲಿನ ಎಂ. ಎ. ಚಿದಂಬರಂ ಮೈದಾನದಲ್ಲಿ  ನಡೆದ ಇಂಡಿಯಾ- ಇಂಗ್ಲೆಂಡ್‌ ನಡುವಿನ 4 ಟೆಸ್ಟ್​ ಪಂದ್ಯಗಳ ಸರಣಿಯ 2ನೇ ಟೆಸ್ಟ್​ ಪಂದ್ಯದಲ್ಲಿ ಟೀಂ ಇಂಡಿಯಾ 317 ರನ್​ಗಳ ಭರ್ಜರಿ ಜಯ ಸಾಧಿಸಿದೆ.

2ನೇ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ ನೀಡಿದ್ದ 482 ರನ್​ಗಳ ಗುರಿ ಬೆನ್ನಟ್ಟಿದ ಇಂಗ್ಲೇಂಡ್  164 ರನ್​ಗಳಿಗೆ ಆಲ್ ಔಟ್ ಆಗಿ ಸೋಲನುಭವಿಸಿತು. ಮೊದಲ ಇನ್ನಿಂಗ್ಸ್ ಆರಂಭಿಸಿದ ಟೀಂ​ ಇಂಡಿಯಾ 329 ರನ್​ ಗಳಿಗೆ ಆಲ್ ಔಟ್ ಆಯಿತು. ಮೊದಲ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ ಆರಂಭಿಕ ಆಟಗಾರ ರೋಹಿತ್​ ಶರ್ಮಾ (161 ರನ್​) ರಹಾನೆ (67 ರನ್​) ಹಾಗೂ ರಿಶಭ್​ ಪಂತ್​ (58 ರನ್​) ಅಬ್ಬರದ ಬ್ಯಾಟಿಂಗ್​ ನೆರವಿನಿಂದ 329 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತ್ತು. ನಂತರ ಬ್ಯಾಟಿಂಗ್ ಆರಂಭಿಸಿದ ಇಂಗ್ಲೇಂಡ್  134 ರನ್ ಗೆ ಸರ್ವಪತನ ಕಂಡಿತು. ಮೊದಲ ಇನ್ನಿಂಗ್ಸ್ ನಲ್ಲಿ ಭಾರತದ ಪರ ಆರ್.ಅಶ್ವಿನ್ 5 ವಿಕೆಟ್ ಕಬಳಿಸಿ ಮಿಂಚಿದರು.

Team India won-2nd Test- Against England
ಕೃಪೆ- internet

ನಂತರ 2ನೇ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ,  ಇಂಗ್ಲೆಂಡ್ ​ಗೆ  482 ರನ್​ಗಳ ಗುರಿ ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ತಂಡ 164 ರನ್​ಗಳಿಗೆ ತನ್ನೆಲ್ಲಾ ವಿಕೆಟ್​ ಕಳೆದುಕೊಂಡು ಸರ್ವಪತನಗೊಂಡಿತು. ಈ ಮೂಲಕ ಟೀಂ ಇಂಡಿಯಾ 317 ರನ್ ಗಳ ಜಯ ಸಾಧಿಸಿದೆ.

ENGLISH SUMMARY…

Team India wins 2nd test
Chennai, Feb. 16, 2021 (www.justkannada.in): Team India which had lost the first test against the tourists England team has taken revenge by winning the second test comfortably.

Team India won-2nd Test- Against England
ಕೃಪೆ- internet

Team India won the second test match in the 4 test match tournament, held at the M.A. Chidambaram Stadium in Chennai with a huge margin of 317 runs. The visitors who chasing 482 runs set by team India lost all its wickets for 164 runs and lost the test.
Keywords: Team India/ wins 2nd test match/ Victory for team India

Key words: Team India won-2nd Test- Against England