ಟಿ-20: ದಕ್ಷಿಣ ಆಫ್ರಿಕಾ ವಿರುದ್ಧ ಸಿಡಿದೆದ್ದ ಟೀಂ ಇಂಡಿಯಾ

ಮೊಹಾಲಿ, ಸೆಪ್ಟೆಂಬರ್ 19, 2019 (www.justkannada.in):  ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟಿ-20 ಕದನದಲ್ಲಿ ಭಾರತ ಭರ್ಜರಿ ಜಯ ಸಾಧಿಸಿದೆ.

ಮೊಹಾಲಿಯ ಐಎಸ್ ಬಿಂದ್ರಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ದಾಳಿ ಹಾಗೂ ನಾಯಕ ವಿರಾಟ್ ಕೊಹ್ಲಿಯ ಅರ್ಧಶತಕದ ನೆರವಿನಿಂದ ಭಾರತ 7 ವಿಕೆಟ್​ಗಳ ಜಯ ಸಾಧಿಸಿದೆ.

ಈ ಮೂಲಕ ಮೂರು ಪಂದ್ಯಗಳ ಟಿ-20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ವಿರಾಟ್ ಕೊಹ್ಲಿ ಆಕರ್ಷಕ ಅರ್ಧಶತಕ ಸಿಡಿಸಿ 52 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್​ನೊಂದಿಗೆ ಅಜೇಯ 72 ರನ್ ಚಚ್ಚಿದರು.