Wednesday, September 30, 2026

BDA Apartments

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಎಂಎಲ್ ಸಿ ತೇಜಸ್ವಿನಿ ಗೌಡ BDA JK_Adv BDA Adv
Home Front Page ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಎಂಎಲ್ ಸಿ ತೇಜಸ್ವಿನಿ ಗೌಡ.

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಎಂಎಲ್ ಸಿ ತೇಜಸ್ವಿನಿ ಗೌಡ.

ಬೆಂಗಳೂರು, ಮಾರ್ಚ್​ 30, 2024 (www.justkannada.in):  ವಿಧಾನ ಪರಿಷತ್​ ಮಾಜಿ ಸದಸ್ಯೆ ತೇಜಸ್ವಿನಿ ಗೌಡ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಇಂದು ಕಾಂಗ್ರೆಸ್ ಸೇರ್ಪಡೆಯಾದರು.

ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಪವನ್ ಖೇರಾ ಸಮ್ಮುಖದಲ್ಲಿ ತೇಜಸ್ವಿನಿ ಗೌಡ ಕಾಂಗ್ರೆಸ್  ಸೇರ್ಪಡೆಯಾದರು.  ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಆಸಕ್ತಿಯನ್ನು ಪಕ್ಷದ ನಾಯಕರ ಮುಂದೆ ಇಟ್ಟಿದ್ದರು ಎನ್ನಲಾಗುತ್ತಿದೆ ಬಿಜೆಪಿಯಿಂದ ಲೋಕಸಭಾ ಟಿಕೆಟ್ ಸಿಗದ ಹಿನ್ನೆಲೆ ತೇಜಸ್ವಿನಿಗೌಡ ಅಸಮಾಧಾನಗೊಂಡಿದ್ದರು. ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಎಂಎಲ್ ಸಿ ತೇಜಸ್ವಿನಿ ಗೌಡ tejaswini

ಇಂದು ಕಾಂಗ್ರೆಸ್ ಸೇರಿದ್ದು ಬಳಿಕ ಮಾತನಾಡಿದ ಅವರು,  ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ 23 ಕ್ಷೇತ್ರ ಗೆಲ್ಲುವ ಅವಕಾಶ ಕಾಂಗ್ರೆಸ್ ಗೆ ಇದೆ. ನಾನು 9 ವರ್ಷ ಕಾಂಗ್ರೆಸ್ ನಲ್ಲಿ ಇದ್ದೆ ಎಂದು ಹೇಳಿದರು.

Key words:  Tejaswini Gowda, joined, Congress