ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್’ಗಢ ಚುನಾವಣೆ ಫಲಿತಾಂಶ: ಹೀಗಿದೆ ಆರಂಭಿಕ ಟ್ರೆಂಡ್ !

ಬೆಂಗಳೂರು, ಡಿಸೆಂಬರ್ 03, 2023 (www.justkannada.in): ಇಂದು ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿ ವಿಧಾನಸಭೆ ಚುನಾವಣಾ ಫಲಿತಾಂಶ ಹೊರ ಬೀಳಲಿದೆ.

ಕೆಲವೇ ಗಂಟೆಗಳಲ್ಲಿ ಯಾವ ರಾಜ್ಯ ಯಾವ ಪಕ್ಷದ ತೆಕ್ಕೆಗೆ ಬೀಳಲಿದೆ ಎಂಬುದು ಸ್ಫಷ್ಟವಾಗಲಿದೆ. ಮಧ್ಯಪ್ರದೇಶದ 230 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಇಂದು ಹೊರ ಬೀಳಲಿದೆ.

ಇಂದು ಕಾಂಗ್ರೆಸ್​, ಬಿಜೆಪಿ ಸೇರಿ ಪ್ರಮುಖ ನಾಯಕರ ಭವಿಷ್ಯ ನಿರ್ಧಾರವಾಗಲಿದ್ದು ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಸೇರಿ ಬಿಜೆಪಿ ಪ್ರಮುಖರು, ಕಾಂಗ್ರೆಸ್​ನ ಕಮಲ್​ನಾಥ್ ಸೇರಿ ಪ್ರಮುಖ ನಾಯಕರ ಭವಿಷ್ಯ ನಿರ್ಧಾರವಾಗಲಿದೆ.

ತೆಲಂಗಾಣ ರಾಜ್ಯ ವಿಧಾನಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಈ ನಡುವಲ್ಲೇ ಬಿಆರ್‌ಎಸ್ ಎಂಎಲ್‌ಸಿ ಕೆ.ಕವಿತಾ ಅವರು ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ತೆಲಂಗಾಣ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಮ್ಯಾಜಿಕ್‌ ನಂಬರ್‌ ಗಡಿ ದಾಟಿದೆ. ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ತೆಲಂಗಾಣದಲ್ಲಿ ಚುನಾವಣಾ ಫಲಿತಾಂಶಕ್ಕಾಗಿ ಪಕ್ಷವು ಸಜ್ಜಾಗಿರುವಂತೆ ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸಂಭ್ರಮಾಚರಣೆಗೆ ಸಿಹಿತಿಂಡಿ ಲಡ್ಡುಗಳನ್ನು ತಂದಿಡಲಾಗಿದೆ.