ಪರಪ್ಪನ ಅಗ್ರಹಾರ ಜೈಲಿನಿಂದ ತೆಲುಗು ನಟಿ ಹೇಮಾ ಬಿಡುಗಡೆ.

ಬೆಂಗಳೂರು,ಜೂನ್,14,2024 (www.justkannada.in): ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿ ಷರತ್ತು ಬದ್ದ ಜಾಮೀನು  ಪಡೆದಿರುವ ತೆಲುಗು ನಟಿ ಹೇಮಾ ಇದೀಗ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಬೆಂಗಳೂರಿನ ಎಲೆಕ್ಟ್ರಾನ್ ಸಿಟಿಯ ಫಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿ ಪ್ರಕರಣ ಸಂಬಂಧ ತೆಲುಗು ನಟಿ ಹೇಮಾ ಅವರನ್ನು ಬಂಧಿಸಲಾಗಿತ್ತು. ಪ್ರಕರಣದಲ್ಲಿ ಜೈಲುಪಾಲಾಗಿದ್ದ ನಟಿ ಹೇಮಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಜೂನ್ 12 ರಂದು ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ್ದ  ಬೆಂಗಳೂರಿನ ಎನ್ ಡಿ ಪಿಎಸ್ ವಿಶೇಷ ಕೋರ್ಟ್ ನ ನ್ಯಾಯಾಧೀಶರು ಷರತ್ತುಬದ್ದ ಜಾಮೀನು ಮಂಜೂರು ಮಾಡಿದ್ದರು.

ಆದರೆ  ಕೋರ್ಟ್ ಷರತ್ತುಗಳನ್ನ ಒದಗಿಸುವಲ್ಲಿ  ಹೇಮಾ ಅವರು ವಿಳಂಬ  ಮಾಡಿದ ಹಿನ್ನೆಲೆಯಲ್ಲಿ ಜಾಮೀನು ಪಡೆದ ಎರಡು ದಿನಗಳ ನಂತರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದೀಗ ಸಹೋದರ ಶ್ರೀನಿವಾಸ್ ಜೊತೆ ತೆರಳಿದ್ದಾರೆ ಎನ್ನಲಾಗಿದೆ.

Key words: Telugu, actress, Hema, released, Jail