ದೇಗುಲದಲ್ಲಿ ಭೀಕರ ಕಾಲ್ತುಳಿತಕ್ಕೆ 10 ಮಂದಿ ಬಲಿ

ಹೈದರಾಬಾದ್,ನವೆಂಬರ್,1,2025 (www.justkannada.in): ಭೀಕರ ಕಾಲ್ತುಳಿತದಿಂದ 10 ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ಶ್ರೀಕಾಕುಳಂನಲ್ಲಿ ನಡೆದಿದೆ.

ಶ್ರೀಕಾಕುಳಂ ಜಿಲ್ಲೆಯ ಕಾಸಿಬುಗ್ಗದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಭಾರಿ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ ಮಹಿಳೆಯರು ಮಕ್ಕಳು ಸೇರಿ 10 ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ, ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಕಾರ್ತಿಕ ಮಾಸ, ಏಕಾದಶಿ ಹಿನ್ನೆಲೆಯಲ್ಲಿ ಕಾಶಿಬುಗ್ಗು ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭಕ್ತರು ಹರಿದು ಬಂದಿದ್ದು ದರ್ಶನದ ವೇಳೆ ಕಾಲ್ತುಳಿತ ಸಂಭವಿಸಿ 10 ಜನರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

Ke words: Andra Pradesh,  temple, 10death, stampede