ಸಾರಿಗೆ ನೌಕರರ ಮುಷ್ಕರಕ್ಕೆ ತಾತ್ಕಾಲಿಕ ಬ್ರೇಕ್…

ಬೆಂಗಳೂರು,ಏಫ್ರಿಲ್,21,2021(www.justkannada.in): 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ.jk

ಹೌದು ಸಾರಿಗೆ ನೌಕರರ ಮುಷ್ಕರವನ್ನ ತಾತ್ಕಾಲಿಕವಾಗಿ ಹಿಂಪಡೆಯುತ್ತಿದ್ದೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಹೈಕೋರ್ಟ್ ಆದೇಶದಂತೆ ಕರ್ತವ್ಯಕ್ಕೆ ಹಾಜರಾಗುತ್ತೇವೆ. ಸಾರಿಗೆ ಮುಷ್ಕರ ವಿಚಾರದಲ್ಲಿ ಹೈಕೋರ್ಟ್ ಮಧ್ಯ ಪ್ರವೇಶಿಸಿದೆ. ನ್ಯಾಯಮೂರ್ತಿಗಳ ಹೇಳಿಕೆಯನ್ನ ಗೌರವಿಸುತ್ತೇವೆ. ಕೋವಿಡ್ ಕಾರಣ ಸೇವೆಗೆ ಹಾಜರಾಗಿ. ಜನರಿಗೆ ತೊಂದರೆ ಕೊಡಬೇಡಿ ಎಂದಿದ್ದಾರೆ. ಹೀಗಾಗಿ  ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಸೇವೆಗೆ ಹಾಜರಾಗುತ್ತೇವೆ ಎಂದಿದ್ದಾರೆ.

temporary- break - transport workers'- strike-kodihalli chandrashekar
ಕೃಪೆ-internet

ಸರ್ಕಾರಕ್ಕೆ ಲಾಕ್ ಡೌನ್ ಮಾಡುವ ಚಿಂತನೆಯಿತ್ತು ಆದರೆ ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಜನರು ತೊಂದರೆ ಅನುಭವಿಸುತ್ತಿದ್ದಾರೆ ಇಂತ ಸಂದರ್ಭದಲ್ಲಿ ಮುಷ್ಕರ ಸರಿಯಲ್ಲ, ಕರ್ತವ್ಯಕ್ಕೆ ಹಾಜರಾಗಿ ಎಂದು ನ್ಯಾಯಾಲಯ ಸೂಚಿಸಿದೆ. ಹಾಗಾಗಿ ನ್ಯಾಯಾಲಯಕ್ಕೆ ಗೌರವ ಕೊಟ್ಟು ಮುಷ್ಕರ ವಾಪಸ್ ಪಡೆಯುತ್ತಿದ್ದೇವೆ. ಆದರೆ ನಮ್ಮ ಬೇಡಿಕೆ ಆಗ್ರಹದಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದಿದ್ದಾರೆ.

Key words:  temporary- break – transport workers’- strike-kodihalli chandrashekar