ಮೈಸೂರು,ಸೆಪ್ಟಂಬರ್,9,2026 (www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ನಾಡಿಗೆ ಆಗಮಿಸಿರುವ ಗಜಪಡೆಯ ಮಾವುತರು ಮತ್ತು ಕಾವಾಡಿಗಳ ಮಕ್ಕಳಿಗೆ ಅರಮನೆ ಆವರಣದಲ್ಲಿ ತಾತ್ಕಾಲಿಕ ಶಾಲೆ ತೆರೆಯಲಾಗಿದೆ.
ಗಜಪಡೆಯ ಮಾವುತರು ಮತ್ತು ಕಾವಾಡಿಗಳ ಮಕ್ಕಳಿಗೆ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಮತ್ತು ಕಲಿಕೆಯ ಅಂತರವನ್ನು ನಿವಾರಿಸಲು ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಅರಮನೆ ಆವರಣದಲ್ಲಿ ತಾತ್ಕಾಲಿಕ ಶಾಲೆಯನ್ನು ನಿರ್ಮಿಸಲಾಗಿದ್ದು ಅಧಿಕೃತವಾಗಿ ಜಿಲ್ಲಾ ಉಪನಿರ್ದೇಶಕ ಡಿ.ಉದಯ ಕುಮಾರ್ ಅವರು ಚಾಲನೆ ನೀಡಿದರು. 
ಮಕ್ಕಳಿಗೆ ಬರವಣಿಗೆ ಸಾಮಾಗ್ರಿಗಳು ಮತ್ತು ಸಿಹಿ ಹಂಚಿ ಶಾಲೆಗೆ ನಿರಂತರವಾಗಿ ಬರುವಂತೆ ಕರೆ ನೀಡಲಾಯಿತು , ದಸರಾ ಮುಗಿಸಿ ಗಜಪಯಣ ಹಿಂತಿರುಗುವರೆಗೂ ಪ್ರತಿ ನಿತ್ಯ ಶಾಲೆ ಇರಲಿದೆ. ಹಾಗೆಯೇ ಅಕ್ಷಯ ಪಾತ್ರೆ ಫೌಂಡೇಷನ್ ವತಿಯಿಂದ ಮಧ್ಯಾಹ್ನದ ಬಿಸಿಯೂಟದ ವ್ಯವಸ್ಥೆ ಮಾಡಲಾಗಿದೆ.
ಡಿವೈಪಿಸಿ ಶೋಭಾ, ಬಿಇಒ ಕೃಷ್ಣ, ಬಿಆರ್ ಸಿಗಳಾದ ಎಂ. ಬಿ ಶ್ರೀಕಂಠಸ್ವಾಮಿ, ಎಸಿಎಫ್ ಪ್ರಭುಗೌಡ, ಆರ್ ಎಫ್ ರೇಷ್ಮ ಮತ್ತು ವಲಯದ ಅನುಪಾಲನಾಧಿಕಾರಿಗಳು ಉಪಸ್ಥಿತರಿದ್ದರು.
Key words: Temporary school, Mysore Dasara Gajapade, Mavutas, Kavadis, children







