ಶಿವಮೊಗ್ಗದಲ್ಲಿ ತೀವ್ರಗೊಂಡ ಹಿಂಸಾಚಾರ: ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ.

ಶಿವಮೊಗ್ಗ,ಫೆಬ್ರವರಿ,21,2022(www.justkannada.in): ಕಿಡಿಗೇಡಿಗಳಿಂದ ಬಜರಂಗ ದಳದ ಕಾರ್ಯಕರ್ತ ಹರ್ಷ ಹತ್ಯೆ ಬಳಿಕ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ಇದೀಗ ಮತ್ತೆ ಕಲ್ಲು ತೂರಾಟ ನಡೆದಿದೆ.

ಮೃತ ಹರ್ಷನ ಮೃತದೇಹ ಮೆರವಣಿಗೆಯ ವೇಳೆ ಕೆಲವು ಜನರ ಗುಂಪು ಸಿಕ್ಕ ಸಿಕ್ಕಲ್ಲಿ ಕಲ್ಲು ತೂರಿದ್ದಾರೆ ಎನ್ನಲಾಗಿದೆ. ಎನ್ ಟಿ ರಸ್ತೆಯಲ್ಲಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ.  ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತ ಹರ್ಷನ ಮರಣೋತ್ತರ ಪರೀಕ್ಷೆ ಬಳಿಕ ಶವವನ್ನ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು.

ಬಳಿಕ  ಮೆಗ್ಗಾನ್ ಆಸ್ಪತ್ರೆಯಿಂದ ಶಿವಮೊಗ್ಗದ ಬಸವನ ಬೀದಿಯಲ್ಲಿರುವ ಹರ್ಷನ ಮನೆವರೆಗೆ ಮೃತದೇಹ ಮೆರವಣಿಗೆ ಮಾಡಲಾಗುತ್ತಿದ್ದು ಈ ವೇಳೆ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ.  ಶಿವಮೊಗ್ಗದಲ್ಲಿ ಹಿಂಸಾಚಾರ ತೀವ್ರಗೊಂಡಿದ್ದು ವಾಹನಗಳಿಗೆ ಬೆಂಕಿ ಹಚ್ಚಿ ಅಂಗಡಿಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.

Key words: Tense- situation –Shimoga-stone.