ಟಿ-20ಯಲ್ಲಿ ಧೋನಿ ದಾಖಲೆ ಮುರಿದ ‘ಕಿಂಗ್’ ಕೊಹ್ಲಿ!

ಹ್ಯಾಮಿಲ್ಟನ್‌, ಜನವರಿ 30, 2019 (www.justkannada.in): ಹ್ಯಾಮಿಲ್ಟನ್‌ನಲ್ಲಿ ಬುಧವಾರ ನಡೆದ ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ 20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ದೊಡ್ಡ ದಾಖಲೆ ಮಾಡಿದ್ದಾರೆ.

ವಿರಾಟ್ ಕೊಹ್ಲಿ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಅಂತರಾಷ್ಟ್ರೀಯ ಟಿ-20 ಕ್ರಿಕೆಟ್ ನಲ್ಲಿ ನಾಯಕನಾಗಿ ರನ್ ಗಳಿಸುವ ವಿಷಯದಲ್ಲಿ ಕೊಹ್ಲಿ, ಧೋನಿಯನ್ನು ಮೀರಿಸಿದ್ದಾರೆ.

ಇಂದಿನ ಪಂದ್ಯದಲ್ಲಿ 25 ರನ್ ಗಳಿಸಿದ ವಿರಾಟ್ ಕೊಹ್ಲಿ ಟಿ 20 ಇಂಟರ್‌ನ್ಯಾಷನಲ್‌ನಲ್ಲಿ ಧೋನಿ ಮಾಡಿದ್ದ ದಾಖಲೆ ಮುರಿದ್ರು. ಟಿ 20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ನಾಯಕನಾಗಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ಮನ್‌ಗಳ ಪಟ್ಟಿಯಲ್ಲಿ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ.