ಕ್ರೂಸರ್ ಮತ್ತು ಎರಡು ಲಾರಿಗಳ ಮಧ್ಯೆ ಭೀಕರ ಅಪಘಾತ: 7 ಮಂದಿ ಸ್ಥಳದಲ್ಲೇ ಸಾವು.

ವಿಜಯನಗರ, ಅಕ್ಟೋಬರ್,9,2023(www.justkannada.in): ಕ್ರೂಸರ್ ಮತ್ತು ಎರಡು ಲಾರಿಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.

ವಿಜಯನಗರ ಜಿಲ್ಲೆ ಹೊಸಪೇಟೆ ಹೊರವಲಯದ ವ್ಯಾಸನಕೇರಿ ಬಳಿ ಈ ಘಟನೆ ನಡೆದಿದೆ. ಕ್ರೂಸರ್ ನಲ್ಲಿದ್ದ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮರಿಯಮ್ಮನಹಳ್ಳಿಯಿಂದ ಹೊಸಪೇಟೆ ಕಡೆಗೆ ಕ್ರೂಸರ್ ಬರುತ್ತಿತ್ತು. ಈ ವೇಳೆ ಲಾರಿಯ ಆ್ಯಕ್ಸಿಲ್ ಕಟ್ ಆಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಸ್ಥಳೀಯರು ಮತ್ತು ಪೊಲೀಸರು ಮೃತದೇಹಗಳನ್ನ ಹೊರ ತೆಗೆಯುತ್ತಿದ್ದಾರೆ. ಸಾವಿನ  ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ  ಇದೆ ಎನ್ನಲಾಗಿದೆ.

Key words:  terrible- accident- between – cruiser – lorry-7 people -died