ಕಾರು ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಐವರು ದುರ್ಮರಣ.

ರಾಮನಗರ, ಆಗಸ್ಟ್​ 28,2023(www.justkannada.in):  ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ಸಾತನೂರು ಬಳಿ ನಡೆದಿದೆ.

ಕನಕಪುರ ತಾಲ್ಲೂಕಿನ ಕೆಮ್ಮಾಳೆ ಗೇಟ್ ಬಳಿ ಈ ಘಟನೆ ಸಂಭವಿಸಿದೆ. ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.  ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ರವಾನಿಸಲಾಗುತ್ತಿದೆ.

ಕೆಎ-1  ಎಂಎಫ್ 8055 ಸಂಖ್ಯೆಯ ಕಾರಿನಲ್ಲಿ ಮಹದೇಶ್ವರ ಬೆಟ್ಟದಿಂದ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿದ್ದು, ಕ್ರೇನ್‌ ಸಹಾಯದಿಂದ ಗಾಯಾಳುಗಳ ರಕ್ಷಣೆ ಮಾಡಲಾಗಿದೆ.

Key words: terrible -accident – car – government bus-five died- on the spot.