ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು.  

ಮೈಸೂರು,ಜನವರಿ,2,2024(www.justkannada.in):  ಕೆ ಎಸ್ ಆರ್ ಟಿಸಿ ಬಸ್ ಹಾಗೂ ಜೀಪ್ ನಡುವೆ ಭೀಕರ ಅಪಘಾತ ಸಂಭವಿಸಿ ಚಾಲಕ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಡೆದಿದೆ.

ಹುಣಸೂರು ನಗರದ ಅಯ್ಯಪ್ಪ ಸ್ವಾಮಿ ಬೆಟ್ಟದ ಬಳಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಸಾವನ್ನಪ್ಪಿದವರು ಕೂಲಿ ಕಾರ್ಮಿಕರು ಎನ್ನುವ  ಬಗ್ಗೆ ಮಾಹಿತಿ ಲಭ್ಯವಾಗಿದೆ.

ಜೀಪ್ ಹೆಚ್ ಡಿ ಕೋಟೆಯಿಂದ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಹುಣಸೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Terrible -accident -government bus – jeep-Three died -mysore