ಮೈಸೂರು-ಬೆಂಗಳೂರು ಹೈವೇಯಲ್ಲಿ ಭೀಕರ ಅಪಘಾತ: ಮೂವರು ದುರ್ಮರಣ.

ರಾಮನಗರ,ಅಕ್ಟೋಬರ್,14,2023(www.justkannada.in):  ಓವರ್ ಟೇಕ್ ಮಾಡುವ ಬರದಲ್ಲಿ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ನಡೆದಿದೆ.

ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ಘಟನೆ ಈ ನಡೆದಿದೆ.. ಕಾರಿನಲ್ಲಿದ್ದ ರಾಜೇಶ್(42), ಉಮಾ(35) ಸ್ಥಳದಲ್ಲೇ ಸಾವನ್ನಪ್ಪಿದರೇ ಮತ್ತೋರ್ವ ಮಹಿಳೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನೆಯಲ್ಲಿ ಮಕ್ಕಳು ಸೇರಿ ಹಲವರಿಗೆ ಗಾಯಗಳಾಗಿವೆ. ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಲಾರಿ ಈ ವೇಳೆ ಓವರ್ ಟೇಕ್​ ಮಾಡಲು ಹೋಗಿ ಲಾರಿಗೆ ಕಾರು ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Terrible- accident – Mysore-Bangalore –highway-death