ಟೆಸ್ಟ್ ‍ಕ್ರಿಕೆಟ್ ಶ್ರೇಯಾಂಕ: ಕೇನ್‌ ವಿಲಿಯಮ್ಸ್ @ ನಂ.1, ಕೊಯ್ಲಿ @ ನಂ.5

ಬೆಂಗಳೂರು, ಜೂನ್ 10, 2021 (www.justkannada.in): ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಐಸಿಸಿ ಟೆಸ್ಟ್ ಬ್ಯಾಟಿಂಗ್‌ ಶ್ರೇಯಾಂಕದಲ್ಲಿ ಐದನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

ಐಸಿಸಿ ಟೆಸ್ಟ್ ಬ್ಯಾಟಿಂಗ್‌ ಶ್ರೇಯಾಂಕ ಪ್ರಕಟವಾಗಿದ್ದು, ರೋಹಿತ್ ಶರ್ಮಾ ಹಾಗೂ ರಿಷಬ್ ಪಂತ್ ಜಂಟಿ ಆರನೇ ಸ್ಥಾನದಲ್ಲಿದ್ದಾರೆ.

ನ್ಯೂಜಿಲೆಂಟ್‌ ತಂಡದ ನಾಯಕ ಕೇನ್‌ ವಿಲಿಯಮ್ಸನ್‌ ಆಗ್ರಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್‌ (891), ಮಾರ್ನಸ್‌ ಲಾಬುಶೇನ್‌ (878), ಜೋ ರೂಟ್ (836) ನಂತರದ ಸ್ಥಾನಗಳಲ್ಲಿದ್ದಾರೆ.

ಟೆಸ್ಟ್ ಬೌಲಿಂಗ್ ವಿಭಾಗದಲ್ಲಿ ಭಾರತದ ಹಿರಿಯ ಸ್ಪಿನ್ನರ್ ಆರ್.ಅಶ್ವಿನ್ ಎರಡನೇ ಸ್ಥಾನದಲ್ಲಿ (850 ಪಾಯಿಂಟ್ಸ್‌) ಮುಂದುವರಿದಿದ್ದಾರೆ. ಆಸ್ಟ್ರೇಲಿಯಾದ ವೇಗದ ಬೌಲರ್ ಪ್ಯಾಟ್ ಕಮಿನ್ಸ್‌ (908 ಪಾಯಿಂಟ್) ಆಗ್ರಸ್ಥಾನದಲ್ಲಿದ್ದಾರೆ.