ಬೋನಿಕಪೂರ್‌ ನಿರ್ದೇಶನದ ಸಿನಿಮಾದಲ್ಲಿ ತಲಾ ಅಜಿತ್

ಮುಂಬೈ, ಅಕ್ಟೋಬರ್ 22, 2019 (www.justkannada.in): ಅಜಿತ್‌ ಹೊಸ ಸಿನಿಮಾದ ಮುಹೂರ್ತ ನೆರವೇರಿದೆ.

ಈ ಸಿನಿಮಾವನ್ನೂ ಬೋನಿ ಕಪೂರ್‌ ನಿರ್ಮಾಣ ಮಾಡುತ್ತಿರುವುದು ವಿಶೇಷ. ಇದು ಆಯಕ್ಷನ್‌ ಚಿತ್ರ ಎನ್ನಲಾಗಿದೆ. ಈ ಚಿತ್ರಕ್ಕೆ ಇನ್ನೂ ಟೈಟಲ್‌ ಇಟ್ಟಿಲ್ಲ. ಹಾಗೇ ಈ ಸಿನಿಮಾದಲ್ಲಿ ಯಾರು ನಟಿಸಲಿದ್ದಾರೆ ಎಂಬ ಮಾಹಿತಿಯನ್ನೂ ಚಿತ್ರತಂಡ ಬಿಟ್ಟುಕೊಟ್ಟಿಲ್ಲ.

ಬೋನಿಕಪೂರ್‌ ಮನೆಯಲ್ಲಿಯೇ ಚಿತ್ರದ ಮುಹೂರ್ತ ನೆರವೇರಿದೆ. ಈ ಚಿತ್ರ 2020ರ ಮೇ ತಿಂಗಳಲ್ಲಿ ಬಿಡುಗಡೆಯಾಗಲಿದ್ದು, ಅಜಿತ್‌ ಪೊಲೀಸ್‌ ಅಧಿಕಾರಿಯಾಗಿ ನಟಿಸಲಿದ್ದಾರೆ ಎಂಬ ಸುದ್ದಿ ಇದೆ.