Sunday, August 23, 2026

BDA Apartments

Home Front Page ಕರ್ನಾಟಕದ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ: ಸಿಎಂ ಯಡಿಯೂರಪ್ಪ ಶುಭಾಶಯ

ಕರ್ನಾಟಕದ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ: ಸಿಎಂ ಯಡಿಯೂರಪ್ಪ ಶುಭಾಶಯ

ಬೆಂಗಳೂರು, ಜುಲೈ 11, 2021 (www.justkannada.in): ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಕಗೊಂಡಂತ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕದ 19 ರಾಜ್ಯಪಾಲರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಅವರು ನೂತನ ರಾಜ್ಯಪಾಲರಿಗೆ ಪ್ರಮಾಣ ವಚನ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.

ಈ ಮೂಲಕ ಕರ್ನಾಟಕದ 19 ನೇ ರಾಜ್ಯಪಾಲರಾಗಿ ಗೆಹ್ಲೋಟ್ ದೇವರ ಹೆಸರಿನಲ್ಲಿ ಪದಗ್ರಹಣ ಸ್ವೀಕಾರ ಮಾಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಈ ಸಮಾರಂಭದಲ್ಲಿ ಭಾಗವಹಿಸಿ ನೂತನ ರಾಜ್ಯಪಾಲರಿಗೆ ಶುಭ ಕೋರಿದರು. ನಿರ್ಗಮಿತ ರಾಜ್ಯಪಾಲ ವಜುಭಾಯಿ ವಾಲಾ ಉಪಸ್ಥಿತರಿದ್ದರು.