ಮೈಸೂರಿನಲ್ಲಿ ಬಿಜೆಪಿ ಮುಖಂಡರಿಂದ ವಿಶಿಷ್ಟವಾಗಿ ಅಂಬೇಡ್ಕರ್ ಜಯಂತಿ ಆಚರಣೆ

ಮೈಸೂರು, ಏಪ್ರಿಲ್ 14, 2020 (www.justkannada.in): ಸಂವಿಧಾನ ಶಿಲ್ಪಿ , ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರ 129 ನೇ ಜಯಂತಿಯನ್ನು ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಬಿಜೆಪಿ ಮುಖಂಡರು ಹಾಗೂ ಬಿ.ವೈ.ವಿಜಯೇಂದ್ರ ಅಭಿಮಾನಿಗಳು ವಿಶಿಷ್ಟ ರೀತಿಯಲ್ಲಿ ಆಚರಿಸಿದರು.

ಮಹಾಮಾರಿ ಕೊರೋನಾ ವೈರಸ್ ವಿರುದ್ದ ನಿತ್ಯ ಸೆಣಸಾಟ ನಡೆಸುತ್ತಿರುವ ವೈದ್ಯಕೀಯ ಸಿಬ್ಬಂದಿಗಳು, ಪೊಲೀಸರು ಹಾಗೂ ಪೌರಕಾರ್ಮಿಕರನ್ನು ಸನ್ಮಾನಿಸುವ ಮೂಲಕ ಸಂವಿಧಾನದ ಶಿಲ್ಪಿಯನ್ನು ಸ್ಮರಿಸಲಾಯಿತು.

ಮೈಸೂರಿನ ನಿವೇದಿತಾ ನಗರದ ಪಾರ್ಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಜಯಂತ್ಯೋತ್ಸವ ಆಚರಿಸಲಾಯಿತು. ಬಿಜೆಪಿ ಎಸ್ ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಂ.ಅಪ್ಪಣ್ಣ ಮಾತನಾಡಿ, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಇಂದಿಗೂ ಗಟ್ಟಿಯಾಗಿ ನಿಲ್ಲಲು ಸಂವಿಧಾನ ಕಾರಣೀಭೂತವಾಗಿದೆ ಎಂದರು.

ಕೊರೋನಾ ಮಹಾಮಾರಿ ವಿಶ್ವವನ್ನೇ ಕಾಡುತ್ತಿದೆ. ಇಂತಹ ಸಂದರ್ಭದಲ್ಲಿ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ
ಅವರು ಕೊರೋನಾದಿಂದ ಜನರನ್ನು ರಕ್ಷಿಸಲು ಅವಿರತವಾಗಿ ಶ್ರಮಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ವೈದ್ಯಕೀಯ ಸಿಬ್ಬಂದಿ, ಪೊಲೀಸರು ಹಾಗೂ ಪೌರಕಾರ್ಮಿಕರ ಸೇವೆ ಅವಿಸ್ಮರಣೀಯವಾದುದು ಎಂದರು.

ನಗರ ಬಿಜೆಪಿ ಅಧ್ಯಕ್ಷ
ಶ್ರೀವತ್ಸ ಮಾತನಾಡಿ ವಿಶ್ವದ ಅತ್ಯಂತ ಎತ್ತರದ ಪ್ರಜಾಪ್ರಭುತ್ವ ದೇಶವಾದ ನಮ್ಮ ಭಾರತಕ್ಕೆ ಸಂವಿಧಾನವನ್ನು ರೂಪಿಸಿ ಸಮರ್ಪಿಸಿದ ಬಾಬಾಸಾಹೇಬ್ ಅಂಬೇಡ್ಕರ್ ಅವರು ಆಧುನಿಕ ಭಾರತದ ಪಿತಾಮಹರಾಗಿದ್ದಾರೆ. ಅಂಬೇಡ್ಕರ್ ಕೇವಲ ಒಂದು ವರ್ಗಕ್ಕೆ ಸೀಮಿತವಾಗದ ಮಹಾನ್ ಮಾನವತವಾದಿಯಾಗಿದ್ದಾರೆ.
ಸಂವಿಧಾನವನ್ನು ಗೌರವಿಸುವ ಮೂಲಕ ನಿತ್ಯ ಅಂಬೇಡ್ಕರ್ ಅವರನ್ನು ಸ್ಮರಿಸುವ ಕೆಲಸ ಆಗಬೇಕಿದೆ ಎಂದರು.
ಕೊರೋನಾ ಮಹಾಮಾರಿ ವಿಶ್ವವನ್ನೇ ಕಾಡುತ್ತಿದೆ. ಇಂತಹ ಸಂದರ್ಭದಲ್ಲಿ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ
ಅವರು ಕೊರೋನಾದಿಂದ ಜನರನ್ನು ರಕ್ಷಿಸಲು ಅವಿರತವಾಗಿ ಶ್ರಮಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ವೈದ್ಯಕೀಯ ಸಿಬ್ಬಂದಿ, ಪೊಲೀಸರು ಹಾಗೂ ಪೌರಕಾರ್ಮಿಕರ ಸೇವೆ ಅವಿಸ್ಮರಣೀಯವಾದುದು ಎಂದರು.

ಬಿಜೆಪಿ ವಿಭಾಗೀಯ ಪ್ರಭಾರಿ ಮೈ.ವಿ.ರವಿಶಂಕರ್, ಬಿಜೆಪಿ ರಾಜ್ಯ ಸಹವಕ್ತಾರ ಕೌಟಿಲ್ಯ ಆರ್. ರಘು, ಮೈಮುಲ್ ನಿರ್ದೆಶಕ ಅಶೋಕ್, ಪ್ರಭಾಕರ್ ಹುಣಸೂರು, ಮಹೇಶ್, ಪಾಲಿಕೆ ಸದಸ್ಯೆ ಲಕ್ಷ್ಮಿ ಕಿರಣ್ ಸೇರಿದಂತೆ ಬಿಜೆಪಿ ಮುಖಂಡರು, ವಿ.ವೈ.ವಿಜಯೇಂದ್ರ ಅಭಿಮಾನಿಗಳು ಭಾಗವಿಸಿದ್ದರು.

ಇದೇ ವೇಳೆ ಕೊರೋನಾ ಲಾಕ್ ಡೌನ್ ನಿಂದ ಬಾಧಿತರಾದವರಿಗೆ ಆಹಾರ ಪದಾರ್ಥಗಳನ್ನು ವಿತರಿಸುವ ಮೂಲಕ ನೆರವು ನೀಡಲಾಯಿತು.