Friday, September 18, 2026

BDA Apartments

ಸಿಎಂ ಗ್ರಾಮ ವಾಸ್ತವ್ಯಕ್ಕೆ ಬದಲಾಗಿ ಪಾದಯಾತ್ರೆ ಹಮ್ಮಿಕೊಂಡ ಬಿಜೆಪಿ BDA JK_Adv BDA Adv
Home Front Page ಸಿಎಂ ಗ್ರಾಮ ವಾಸ್ತವ್ಯಕ್ಕೆ ಬದಲಾಗಿ ಪಾದಯಾತ್ರೆ ಹಮ್ಮಿಕೊಂಡ ಬಿಜೆಪಿ

ಸಿಎಂ ಗ್ರಾಮ ವಾಸ್ತವ್ಯಕ್ಕೆ ಬದಲಾಗಿ ಪಾದಯಾತ್ರೆ ಹಮ್ಮಿಕೊಂಡ ಬಿಜೆಪಿ

ಬೆಂಗಳೂರು, ಜೂನ್ 24, 2019 (www.justkannada.in): ಜನರ ಸಮಸ್ಯೆಗಳನ್ನು ಅರಿಯಲು ಸಿಎಂ ಗ್ರಾಮವಾಸ್ತವ್ಯ ಹೂಡಿದ್ದರೆ ಅದಕ್ಕೆ ಪ್ರತಿಯಾಗಿ ಇದೀಗ ಬಿಜೆಪಿ ಪಾದಯಾತ್ರೆ ಮಾಡುವ ಅಸ್ತ್ರವನ್ನು ಪ್ರಯೋಗ ಮಾಡಿದೆ.

ಜೂ.26ರಂದು ಬೆಳಗ್ಗೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕರಿಗುಡ್ಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯವನ್ನು ಮಾಡಿ ಜನತಾದರ್ಶನ ನಡೆಸಲಿದ್ದಾರೆ.

ಇದಕ್ಕೆ ಪ್ರತಿಯಾಗಿ ಇಂದು ಬಿಜೆಪಿ ಕರೇಗುಡ್ಡ ಗ್ರಾಮಕ್ಕೆ ಪಾದಯಾತ್ರೆ ಹೊರಡಲು ನಿರ್ಧಾರಿಸಿದ್ದು, ದೇವದುರ್ಗಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶಿವನಗೌಡ ನಾಯಕ ನೇತೃತ್ವದಲ್ಲಿ 25 ಸಾವಿರ ಜನರು ಪಾದಯಾತ್ರೆ ಮಾಡಲಿದ್ದಾರೆ.