Sunday, August 23, 2026

BDA Apartments

Home Cinema ರಿಯಾ ಚಕ್ರವರ್ತಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಕೋರ್ಟ್

ರಿಯಾ ಚಕ್ರವರ್ತಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಕೋರ್ಟ್

ಮುಂಬೈ, ಸೆಪ್ಟೆಂಬರ್ 11, 2020 (www.justkannada.in): ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಿಯಾ ಚಕ್ರವರ್ತಿ ಜಾಮೀನು ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ.

ನಿನ್ನೆ ಈ ಅರ್ಜಿಯ ವಿಚಾರಣೆ ನಡೆಸಿರುವ ಮುಂಬೈನ ವಿಶೇಷ ನ್ಯಾಯಾಲಯ ಇಂದು ರಿಯಾ ಚಕ್ರವರ್ತಿ ಅರ್ಜಿಯನ್ನು ತಿರಸ್ಕರಿಸಿದೆ. ರಿಯಾ ಚಕ್ರವರ್ತಿ ಜೊತೆಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಇತರೆ ಆರೋಪಿಗಳಾದ ರಿಯಾ ಚಕ್ರವರ್ತಿ ಸಹೋದರ ಶೋವಿಕ್ ಚಕ್ರವರ್ತಿ, ಸ್ಯಾಮ್ಯುಯೆಲ್ ಮರಾಂಡ, ದಿಪೇಶ್, ಬಾಸಿಲ್ ಹಾಗೂ ಜಿಡ್ ಅವರ ಜಮಾನತ್ತು ಅರ್ಜಿಯನ್ನು ಸಹ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ.

ಎರಡು ದಿನಗಳ ವಿಚಾರಣೆಯ ಬಳಿಕ ನ್ಯಾಯಾಲಯ ರಿಯಾ ಚಕ್ರವರ್ತಿ, ಅವರ ಸಹೋದರ ಶೋವಿಕ್ ಚಕ್ರವರ್ತಿ ಸೇರಿದಂತೆ ಒಟ್ಟು 6 ಆರೋಪಿಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.