Sunday, August 23, 2026

BDA Apartments

Home Front Page ನಾಳೆ (ಏ.10) ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬಸವರಾಜ ಬೊಮ್ಮಾಯಿ

ನಾಳೆ (ಏ.10) ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬಸವರಾಜ ಬೊಮ್ಮಾಯಿ

ಬೆಂಗಳೂರು, ಏಪ್ರಿಲ್ 09, 2023 (www.justkannada.in): ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಸೋಮವಾರ ಬಿಡುಗಡೆಯಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಿನ್ನೆ ಸಂಸದೀಯ ಮಂಡಳಿ ಸಭೆಯಲ್ಲಿ ಟಿಕೆಟ್ ನೀಡುವುದಕ್ಕೆ ಸಂಬಂಧಪಟ್ಟಂತೆ ನಡೆದ ಸಭೆಯಲ್ಲಿ, ಸರ್ವೆ ಸೇರಿದಂತೆ ಎಲ್ಲಾ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನೂ ಈ ಬಾರಿ ರಾಜ್ಯದಲ್ಲಿ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದಕ್ಕೆ ಹೈಕಮಾಂಡ್‌ ಮತ್ತು ರಾಜ್ಯ ಬಿಜೆಪಿ ನಾಯಕರುಗಳು ಮನಸ್ಸು ಮಾಡಿದ್ದು, ಈ ನಿಟ್ಟಿನಲ್ಲಿ ಎಲ್ಲಾ ಪೂರ್ವಪರ ಮಾಹಿತಿಗಳನ್ನು ಪಡೆದುಕೊಂಡ ಬಳಿಕ ಟಿಕೆಟ್‌ ಬಿಡುಗಡೆ ಮಾಡುವುದಕ್ಕೆ ಮುಂದಾಗಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಇನ್ನೂ ಈಗಾಗಲೇ ಕಾಂಗ್ರೆಸ್‌ ಮತ್ತು ಜೆಡಿಎಸ್‌ನಿಂದ ಒಂದು ಸುತ್ತಿನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಇಂದು ಅಥಾವ ನಾಳೆ ಬಿಜೆಪಿಯಿಂದ ಅಭ್ಯರ್ಥಿಯ ಪಟ್ಟಿಯ ಬಿಡುಗಡೆ ಮಾಡಬಹುದು ಎನ್ನಲಾಗಿದೆ.