ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗೆ ನಿಷೇಧ ಹೇರಿದ ಸಿಂಗಾಪುರ್ ಸರ್ಕಾರ

ಬೆಂಗಳೂರು, ಮೇ 11, 2022 (www.justkannada.in):  ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಸಿಂಗಾಪುರ್ ಸರ್ಕಾರ ನಿಷೇಧಿಸಿದೆ.

ವಿವಿಧ ಸಮುದಾಯಗಳ ನಡುವೆ ದ್ವೇಷ ಹರಡಿಸುವ ಸಾಧ್ಯತೆ ಇದ್ದಿರುವುದಾಗಿ ಸಿಂಗಾಪುರ್ ಕಳವಳ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

ಕಾಶ್ಮೀರದಲ್ಲಿ ನಡೆಯುತ್ತಿರುವ ಸಂಘರ್ಷದಲ್ಲಿ ಹಿಂದೂಗಳು ಮತ್ತು ಮುಸ್ಲಿಮರು ಕಿರುಕುಳಕ್ಕೊಳಗಾಗಿರುವ ಚಿತ್ರಣವನ್ನು ಪ್ರಚೋದನಕಾರಿ ಮತ್ತು ಏಕಮುಖವಾಗಿ ದ ಕಾಶ್ಮೀರ್ ಫೈಲ್ಸ್ ನಲ್ಲಿ ಚಿತ್ರಿಕರೀಸಲಾಗಿದೆ ಎಂದು ಸಿಂಗಾಪುರ್ ಸರ್ಕಾರ ಬಿಡುಗಡೆಗೊಳಿಸಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಏಕಮುಖ ಚಿತ್ರಣದಿಂದ ವಿವಿಧ ಸಮುದಾಯಗಳ ನಡುವೆ ದ್ವೇಷ ಹುಟ್ಟುಹಾಕುವ ಸಾಧ್ಯತೆ ಇದೆ. ಅಲ್ಲದೇ ಸಾಮಾಜಿಕ ಸ್ವಾಸ್ಥ್ಯ ಹಾಗೂ ಧಾರ್ಮಿಕ ಸಾಮರಸ್ಯ ಹದಗೆಡಲಿದೆ ಎಂದು ಸಿಂಗಾಪುರ್ ಸರ್ಕಾರ ಪ್ರಕಟಣೆಯಲ್ಲಿ ವಿವರಿಸಿದೆ.