ಆಗಸ್ಟ್ 23ರಿಂದ ಶಾಲಾರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

ಬೆಂಗಳೂರು, ಆಗಸ್ಟ್ 10, 2021 (www.justkannada.in): ಆಗಸ್ಟ್ 23ರಿಂದ ರಾಜ್ಯದಲ್ಲಿ 9, 10, 11 ಮತ್ತು 12ನೇ ತರಗತಿಗಳ ಆರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಶಿಕ್ಷಕರು ಮತ್ತು ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಹಾಗೂ 9, 10ನೇ ತರಗತಿಯ ವಿದ್ಯಾರ್ಥಿಗಳ ಕುಟುಂಬದವರಿಗೆ ಕೋವಿಡ್-19 ಲಸಿಕಾಕರಣಕ್ಕೆ ರಾಜ್ಯ ಆರೋಗ್ಯ ಇಲಾಖೆ ಸೂಚಿಸಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಬಿಬಿಎಂಪಿ ವಿಶೇಷ ಆಯುಕ್ತರಿಗೆ, ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದು, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ ಶಿಕ್ಷಕರು ಮತ್ತು ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಕೋವಿಡ್-19 ಲಸಿಕಾಕರಣ ನಡೆಸಲು ಈಗಾಗಲೇ ತಿಳಿಸಲಾಗಿತ್ತು.

10ನೇ ತರಗತಿಯ ವಿದ್ಯಾರ್ಥಿಗಳ ಕೋವಿಡ್-19 ಲಸಿಕೆ ಪಡೆಯದ ತಂದೆ, ತಾಯಿ, ಪೋಷಕರುಗಳಿಗೆ ಲಸಿಕಾಕರಣವನ್ನು ಆದ್ಯತೆ ಮೇರೆಗೆ ನಡೆಸಲು ಸೂಚಿಸಲಾಗಿದೆ.