Tuesday, September 15, 2026

BDA Apartments

ಮುಂದಿನ ಮೂರು ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ BDA JK_Adv BDA Adv
Home Front Page ಮುಂದಿನ ಮೂರು ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ ಮೂರು ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು, ಏಪ್ರಿಲ್ 29, 2020 (www.justkannada.in): ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ರಾಜ್ಯದ ಹಲವೆಡೆ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ನಿನ್ನೆ ರಾತ್ರಿ ಹಾಗೂ ಇಂದು ಬೆಳಗ್ಗೆ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ.

ಬಂಗಾಳ ಕೊಲ್ಲಿ, ಅರಬ್ಬೀ ಸಮುದ್ರಗಳಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಅಂಡೋಮಾನ್, ನಿಕೋಬಾರ್ ನಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.